News Karnataka Kannada
Monday, April 29 2024
ಬೆಂಗಳೂರು ನಗರ

ಬೆಂಗಳೂರು ನಗರದ ನೂತನ ಪೊಲೀಸ್ ಆಯುಕ್ತರಾಗಿ ಪ್ರತಾಪ್ ರೆಡ್ಡಿ ನೇಮಕ

Prathap Reddy
Photo Credit :

ಬೆಂಗಳೂರು: ರಾಜ್ಯ ಸರ್ಕಾರ ಸೋಮವಾರ ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಸೇರಿದಂತೆ ಹಲವು ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿದ್ದು, ನೂತನ ನಗರ ಪೊಲೀಸ್ ಆಯುಕ್ತರಾಗಿ ಆಗಿ ಪ್ರತಾಪ್ ರೆಡ್ಡಿ ಅವರನ್ನು ನೇಮಕ ಮಾಡಿದೆ.

ಕಮಲ್ ಪಂತ್ ಅವರನ್ನು ಪೊಲೀಸ್ ತರಬೇತಿ ವಿಭಾಗದ ಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ಕೆಎಸ್‌ಆರ್‌ಪಿ ಎಡಿಜಿಪಿ ಆಗಿದ್ದ ಅಲೋಕ್‌ ಕುಮಾರ್ ಅವರನ್ನು ರಾಜ್ಯದ ಕಾನೂನು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ಅವರ ಜಾಗಕ್ಕೆ ಪೊಲೀಸ್ ನೇಮಕಾತಿ ವಿಭಾಗದ ಎಡಿಜಿಪಿ(ಪ್ರಭಾರ್) ಆಗಿದ್ದ ಆರ್. ಹಿತೇಂದ್ರ ಅವರನ್ನು ವರ್ಗಾಯಿಸಲಾಗಿದೆ.

ಇನ್ನೂ ಬೆಂಗಳೂರು ಕೇಂದ್ರ ವಿಭಾಗದ ಡಿಸಿಪಿ ಎಂ.ಎನ್‌.ಅನುಚೇತ್ ಅವರನ್ನು ಸಿಐಡಿ ಎಸ್ ಪಿಯಾಗಿ ವರ್ಗಾಯಿಸಲಾಗಿದ್ದು, ಅವರ ಜಾಗಕ್ಕೆ ಇನ್ನೂ ಯಾರನ್ನೂ ನೇಮಿಸಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು