ಬೆಂಗಳೂರು: ಪೊಲೀಸರ ಬಲೆಗೆ ಬಿದ್ದ ಐಷಾರಾಮಿ ಕಳ್ಳ

ಬೆಂಗಳೂರು : ಪ್ರೀತಿಯ ಪತ್ನಿಗಾಗಿ ಮನೆ ಕಳ್ಳತನ ಮಾಡಿ, ಕುಟುಂಬವನ್ನು ಕಾಶ್ಮೀರ ಸೇರಿ ಪ್ರವಾಸಿ ತಾಣಗಳಿಗೆ ಕರೆದೊಯ್ಯುತ್ತಿದ್ದ ಐಷಾರಾಮಿ ಕಳ್ಳನೊಬ್ಬ ಗೋವಿಂದರಾಜನಗರ ಪೊಲೀಸರಿಗೆ ಸಿಕ್ಕಿ ಬಿದಿದ್ದಾನೆ.

ಆರೋಪಿಯಿಂದ8.50 ಲಕ್ಷ ರೂ. ಮೌಲ್ಯದ 147 ಗ್ರಾಂ ಚಿನ್ನಾಭರಣ, 1ಕೆ.ಜಿ.517 ಗ್ರಾಂ ಬೆಳ್ಳಿ, 1 ದ್ವಿಚಕ್ರ ವಾಹನ ಜಪ್ತಿ ಮಾಡಲಾಗಿದೆ. ಆತನ ವಿರುದ್ಧ ಮಹದೇವಪುರ, ಅಶೋಕ್‌ ನಗರ, ಕೆ.ಆರ್‌. ಪುರ, ಮಾರತ್ತಹಳ್ಳಿ ಸೇರಿ ನಗರದ 6 ಪೊಲೀಸ್‌ ಠಾಣೆಗಳಲ್ಲಿ ಕಳ್ಳತನ ಪ್ರಕರಣ ದಾಖಲಾಗಿರುವುದು ಬೆಳಕಿಗೆ ಬಂದಿದೆ ಎಂದು ಪೊಲೀಸರು ಹೇಳಿದರು.

ಆರೋಪಿಯು ಪ್ರೀತಿಸಿ ಮದುವೆಯಾಗಿದ್ದು, ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಅವರ ಬಗ್ಗೆ ಹೆಚ್ಚು ಕಾಳಜಿ ಹೊಂದಿದ್ದು, ಪತ್ನಿಯನ್ನು ಹೆಚ್ಚು ಪ್ರೀತಿಸುತ್ತಿದ್ದ. ಗುಜರಿ ಕೆಲಸ ಮಾಡಿಕೊಂಡಿದ್ದ ಇಮ್ರಾನ್‌, ತನ್ನ ಸಂಪಾದನೆಯಲ್ಲಿ ಪತ್ನಿಯನ್ನು ಪ್ರವಾಸಕ್ಕೆ ಕರೆದೊಯ್ಯಲು ಸಾಧ್ಯವಿಲ್ಲ ಎಂದು ತಿಳಿಕೊಂಡಿದ್ದ. ಹೀಗಾಗಿ ಗುಜರಿ ವಸ್ತುಗಳನ್ನು ಕೇಳುವ ನೆಪದಲ್ಲಿ ಸಿರಿವಂತರ ಮನೆಗಳನ್ನು ಗುರುತಿಸುತ್ತಿದ್ದ. ಕೆಲ ದಿನಗಳ ಬಳಿಕ ಗುರುತಿಸಿದ್ದ ಮನೆ ಬಳಿ ಹೋಗಿ, ಅವರು ಮನೆಯಲ್ಲಿ ಇದ್ದಾರೆಯೇ? ಇಲ್ಲವೇ? ಎಂಬ ಬಗ್ಗೆ ತಿಳಿದುಕೊಳ್ಳುತ್ತಿದ್ದ. ಅದೇ ದಿನ ರಾತ್ರಿ ಮನೆಯ ಬಾಗಿಲನ್ನು ರಾಡ್‌ನಿಂದ ಮೀಟಿ ಚಿನ್ನಾಭರಣ, ನಗದು ಕದ್ದು ಪರಾರಿಯಾಗುತ್ತಿದ್ದ. ನಂತರ ಫೈನಾನ್ಸ್‌ ಕಂಪನಿಗಳಲ್ಲಿ ಚಿನ್ನಾಭರಣಗಳನ್ನು ಅಡಮಾನ ವಿಟ್ಟು, ಬಂದ ಹಣದಲ್ಲಿ ಪತ್ನಿಯನ್ನು ಕಾಶ್ಮೀರ ಸೇರಿ ದೇಶದ ಪ್ರವಾಸಿ ತಾಣಗಳಿಗೆ ಪತ್ನಿ ಜತೆಹೋಗಿ, ಮೋಜು ಮಾಡುತ್ತಿದ್ದ ಎಂಬುದು ಗೊತ್ತಾಗಿದೆ ಎಂದು ಪೊಲೀಸರು ಹೇಳಿದರು.

ಮನೆಯ ಹಿಂಬಾಗಿಲಿಂದ ಎಸ್ಕೇಪ್‌: ಅಪರಾಧ ಸಂಬಂಧ ಪೊಲೀಸರು ಹುಡುಕಿಕೊಂಡು ಬಂದಾಗ ಮನೆಯ ಹಿಂಬಾಗಿಲಿಂದ ನಾಪತ್ತೆಯಾಗುತ್ತಿದ್ದ. ಹೀಗಾಗಿ ಮನೆಯ ಮುಂಭಾಗಿಲಿಗೆ ಸಣ್ಣದಾದ ಕಿಂಡಿ ಮಾಡಿಕೊಂಡಿದ್ದಾನೆ. ಪೊಲೀಸರ ಸಮವಸ್ತ್ರ ಹಾಗೂ ಪೊಲೀಸರಂತೆ ಕಂಡು ಬಂದರೆ ಹಿಂಬಾಗಿಲಿಂದ ಪರಾರಿಯಾಗುತ್ತಿದ್ದ ಎಂದು ಪೊಲೀಸರು ಹೇಳಿದರು.

Gayathri SG

Recent Posts

ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ ಸಂಸ್ಕಾರ ಕಲಿಸಿ : ರವಿ ಶಾಸ್ತ್ರಿ

ಮಕ್ಕಳಿಗೆ ಆಸ್ತಿ ಮಾಡಿ ಇರಿಸುವುದರ ಬದಲು ಮಕ್ಕಳನ್ನು ವಿದ್ಯಾವಂತರನ್ನಾಗಿ ಸಂಸ್ಕಾರವಂತರನ್ನಾಗಿ ಮಾಡಿದರೆ ಅದುವೇ ದೊಡ್ಡ ಆಸ್ತಿ ಎಂದು ಶ್ರೀ ಕೃಷ್ಣ…

3 mins ago

ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಲೋಕಾರ್ಪಣೆ

ಮಾಂಡ್ ಸೊಭಾಣ್ ಪ್ರಕಾಶನದ 22 ನೇ ಪುಸ್ತಕ ರೊನಿ ಅರುಣ್ ಬರೆದ ಲೇಖನಗಳ ಸಂಗ್ರಹ ʻರಿಕ್ಷಾ ಡೈರಿʼ ಉಲ್ಲಾಳ ಸೋಮೇಶ್ವರದಲ್ಲಿರುವ…

7 mins ago

ʼಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಕರಾಳ ದಿನಗಳನ್ನ ಎದುರಿಸಬೇಕಾಗುತ್ತದೆʼ

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಮೋದಿ ಸರ್ಕಾರವನ್ನು ಸೋಲಿಸದಿದ್ದರೆ ಮುಂದಿನ ದಿನಗಳಲ್ಲಿ ದೇಶವು ಕರಾಳ ದಿನಗಳನ್ನು ನೋಡಬೇಕಾಗಬಹುದು ಎಂದು ಶಿವಸೇನಾ…

13 mins ago

ವಕೀಲ ಬಾಬಶೆಟ್ಟಿ ಹತ್ಯೆಗೆ 5 ಲಕ್ಷ ಸುಪಾರಿ: ಪ್ರಮುಖ ಆರೋಪಿ ಬಂಧನ

ಐದು ಲಕ್ಷ ರೂಪಾಯಿಗೆ ಸುಪಾರಿ ಕೊಟ್ಟು, ವಕೀಲನ ಹತ್ಯೆಗೆ ಸಂಚು ರೂಪಿಸಿದ್ದ ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಬೀದರ್‌ ಜಿಲ್ಲಾ ಪೊಲೀಸರು…

25 mins ago

ದೇಶಾದ್ಯಂತ 24 ಗಂಟೆ ವಿದ್ಯುತ್‌ ಪೂರೈಕೆ ಸೇರಿ 10 ಗ್ಯಾರಂಟಿ ಘೋಷಿಸಿದ ಕೇಜ್ರಿವಾಲ್

2024ರ ಲೋಕಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷ ಗೆದ್ದರೆ ಹತ್ತು ಗ್ಯಾರಂಟಿಗಳನ್ನು ಜಾರಿಗೊಳಿಸಲಾಗುವುದು ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌…

31 mins ago

ಬೀದರ್‌: ಬಿಸಿ ದೋಸೆಯಂತೆ ಮಾರಾಟವಾಗುತ್ತಿದೆ ಎಸಿ, ಕೂಲರ್‌

ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್‌ ಕಂಡಿಷನರ್‌ (ಎಸಿ), ಏರ್‌ ಕೂಲರ್‌ಗಳ…

46 mins ago