ಬೆಂಗಳೂರು, ಡಿ.20 : ಮನೆ ಮುಂದೆ ನಿಲ್ಲಿಸಿದ್ದ ಮಾರುತಿ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಭಾಗಶಃ ಹಾನಿಯಾಗಿರುವ ಘಟನೆ ನಂದಿನಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ನಂದಿನಿ ಲೇಔಟ್ನ ಜೈ ಮಾರುತಿ ನಗರದ 4ನೆ ಕ್ರಾಸ್ ನಿವಾಸಿಯೊಬ್ಬರು ತಮ್ಮ ಮಾರುತಿ ಓಮ್ನಿ ಕಾರನ್ನು ಚಾಲನೆ ಮಾಡಿಕೊಂಡು ರಾತ್ರಿ 11 ಗಂಟೆ ಸುಮಾರಿನಲ್ಲಿ ಮನೆಗೆ ಬಂದಿದ್ದಾರೆ.
ಮನೆ ಮುಂದೆ ಕಾರು ನಿಲ್ಲಿಸಿ ಒಳಗೆ ಹೋದ 10 ನಿಮಿಷದಲ್ಲೇ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಹೊತ್ತಿ ಉರಿದಿದೆ. ನೆರೆಹೊರೆಯವರು ಗಮನಿಸಿ ತಕ್ಷಣ ಕಾರು ಮಾಲೀಕರಿಗೂ ತಿಳಿಸಿ ನೀರು ಹಾಕಿ ಬೆಂಕಿ ನಂದಿಸಲು ಯತ್ನಿಸಿದರು. ಸುದ್ದಿ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕಾಗಮಿಸಿ ಬೆಂಕಿಯನ್ನು ನಂದಿಸಿದರು.
ನಂದಿನಿ ಲೇಔಟ್ ಠಾಣೆ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅನಿಲ ಸೋರಿಕೆಯಿಂದಲೋ ಇಲ್ಲವೆ ಬ್ಯಾಟರಿ ಕಿಡಿಯಿಂದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿರ ಬಹುದೆಂದು ಪೊಲೀಸರು ಶಂಕೆ ವ್ಯಕ್ತಪಡಿಸಿ ತನಿಖೆ ಕೈಗೊಂಡಿದ್ದಾರೆ.
ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…
ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…
ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ, ಸುಪ್ರೀಂ ಕೋರ್ಟ್ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…
ಏರ್ ಇಂಡಿಯಾ ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್ಪ್ರೆಸ್ 85 ವಿಮಾನಗಳನ್ನು…
ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.