ಬೆಂಗಳೂರು : ಬೆಂಗಳೂರಿನ ಹೆಬ್ಬಾಳದ ಮಸೀದಿಯೊಂದರಲ್ಲಿ ಸಿಲಿಂಡರ್ ಸ್ಪೋಟ ಸಂಭವಿಸಿದೆ.ಬೆಂಗಳೂರಿನ ಹೆಬ್ಬಾಳದಲ್ಲಿರುವ ಮಸೀದಿಯಲ್ಲಿ ಸಿಲಿಂಡರ್ ಸ್ಪೋಟಗೊಂಡಿದೆ.
ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಇಂದು ಶುಕ್ರವಾರ ಹಿನ್ನೆಲೆಯಲ್ಲಿ ಜನರು ನಮಾಜ್ ಗೆ ಬಂದಿದ್ದರು.
ಈ ವೇಳೆ ಮಸೀದಿಯಲ್ಲಿ ಸಿಲಿಂಡರ್ ಸ್ಪೋಟವಾಗಿದೆ. ಸ್ಥಳಕ್ಕೆ ಅಗ್ನಿ ಶಾಮಕ ಸಿಬ್ಬಂದಿ ದೌಡಾಯಿಸಿದ್ದು, ಬೆಂಕಿ ನಂದಿಸುವ ಕಾರ್ಯ ಮಾಡಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.