ಬೆಂಗಳೂರು ನಗರ

ಬೆಂಗಳೂರು: ರಾಜಧಾನಿ ಅಭಿವೃದ್ಧಿಗೆ 8409 ಕೋಟಿ ರೂ.

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಚೊಚ್ಚಲ ಬಜೆಟ್​ ಮಂಡನೆ ಮಾಡುತ್ತಿದ್ದಾರೆ. ಇದರಲ್ಲಿ ಕೃಷಿ ಮತ್ತು ಕೃಷಿ ಪೂರಕ ಚಟುವಟಿಕೆಗೆ 33,700 ಕೋಟಿ ರೂಪಾಯಿ ಬಜೆಟ್​​ನಲ್ಲಿ ತೆಗೆದಿರಿಸಲಾಗಿದೆ.

ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿಗೆ 68,479 ಕೋಟಿ ರೂಪಾಯಿ ಅನುದಾನ ನೀಡಲಾಗಿದೆ. ಆರ್ಥಿಕ ಅಭಿವೃದ್ಧಿ ಉತ್ತೇಜನಕ್ಕೆ 55, 657 ಕೋಟಿ ರೂಪಾಯಿ. ಬೆಂಗಳೂರು ಸಮಗ್ರ ಅಭಿವೃದ್ಧಿಗೆ 8,409 ಕೋಟಿ ರೂಪಾಯಿ . ಸಂಸ್ಕೃತಿ ಪರಂಪರೆ, ನೈಸರ್ಗಿಕ ಸಂಪನ್ಮೂಲ ರಕ್ಷಣೆಗೆ 3,102 ಕೋಟಿ ರೂಪಾಯಿ ಅನುದಾನ ತೆಗೆದಿರಿಸಲಾಗಿದೆ.

ಆಡಳಿತ ಸುಧಾರಣೆ, ಸಾರ್ವಜನಿಕ ಸೇವೆಗೆ ₹ 56,710 ಕೋಟಿ ನಿಗದಿಪಡಿಸಲಾಗಿದೆ. ಮಹಿಳಾ ಸಬಲೀಕರಣ ಕ್ಷೇಮಾಭಿವೃದ್ಧಿಗೆ ₹ 43,188 ಕೋಟಿ ನೀಡಲಾಗಿದೆ. ಮಕ್ಕಳ ಅಭ್ಯುದಯಕ್ಕೆ 40,944 ಕೋಟಿ ರೂಪಾಯಿ ನೀಡಲಾಗಿದೆ ಎಂದು ಸಿಎಂ ಬೊಮ್ಮಾಯಿ ತಮ್ಮ ಬಜೆಟ್​​ನಲ್ಲಿ ತಿಳಿಸಿದ್ದಾರೆ.

ಬೆಂಗಳೂರು ಗ್ರಾಮಾಂತರದಲ್ಲಿ ನೂತನ ಕಾರಾಗೃಹ ನಿರ್ಮಾಣ
ಇದರಲ್ಲಿ ಪೊಲೀಸ್ ಗೃಹ ಯೋಜನೆಗಾಗಿ 2ನೇ ಹಂತದಲ್ಲಿ 250 ಕೋಟಿ ರೂಪಾಯಿ ಅನುದಾನ ಘೋಷಿಸಿದ್ದಾರೆ. ಮೊಬಿಲಿಟಿ ಯೋಜನೆಗೆ 50 ಕೋಟಿ ರೂ. ಅನುದಾನ ತೆಗೆದಿರಿಸಲಾಗಿದೆ.

ರಾಜ್ಯದಲ್ಲಿ ನೂತನ ಕೆಎಸ್​ಆರ್​ಪಿ (KSRP) ಮಹಿಳಾ ಕಂಪನಿ ಆರಂಭಕ್ಕೆ ಅಸ್ತು ಅನ್ನಲಾಗಿದೆ. ಅಗ್ನಿಶಾಮಕ ಸಿಬ್ಬಂದಿ ವಿಮಾನ ಮೊತ್ತ ಹೆಚ್ಚಳ ಮಾಡಲಾಗಿದೆ. 1 ಲಕ್ಷ ರೂಪಾಯಿಯಿಂದ 20 ಲಕ್ಷ ರೂಪಾಯಿಗೆ ಏರಿಕೆ ಮಾಡಲಾಗಿದೆ.

ದಾವಣಗೆರೆಯಲ್ಲಿ SDRF ಆರಂಭಕ್ಕೆ ಅಂಕಿತ ಹಾಕಲಾಗಿದೆ. ಕಾರಾಗೃಹದಲ್ಲಿ ಅತ್ಯಾಧುನಿಕ ಉಪಕರಣ ನೀಡುತ್ತೇವೆ. ಕಾರಾಗೃಹಗಳಲ್ಲಿ ಮೊಬೈಲ್ ಜಾಮರ್ ಅಳವಡಿಕೆ ಮಾಡಲಾಗುವುದು. ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ನೂತನ ಕಾರಾಗೃಹ ನಿರ್ಮಾಣ ಮಾಡಲಾಗುವುದು ಎಂದು ಸಿಎಂ ಬೊಮ್ಮಾಯಿ ತಮ್ಮ ಬಜೆಟ್​​ನಲ್ಲಿ ತಿಳಿಸಿದ್ದಾರೆ

Sneha Gowda

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

4 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

4 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

4 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

5 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

5 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

5 hours ago