News Karnataka Kannada
Tuesday, April 30 2024
ಬೆಂಗಳೂರು ನಗರ

ಬೆಂಗಳೂರು :ಹೋಟೆಲ್​ನಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ, 7 ಮಂದಿ ಸಿಬ್ಬಂದಿಗೆ ಗಾಯ

Fire
Photo Credit : IANS

ಬೆಂಗಳೂರು : ಇಂದಿರಾನಗರದ ಸಿಎಂಎಚ್ ರಸ್ತೆಯ ನ್ಯೂ ಶಾಂತಿ ಸಾಗರ ಹೋಟೆಲ್​ನಲ್ಲಿ ಸಿಲಿಂಡರ್ ಸ್ಫೋಟಗೊಂಡಿದ್ದು, ಘಟನೆಯಲ್ಲಿ ಹೋಟೆಲ್ನಲ್ಲಿದ್ದ 7 ಮಂದಿ ಸಿಬ್ಬಂದಿ ಗಾಯಗೊಂಡಿದ್ದಾರೆ.

ಗ್ಯಾಸ್ ಸೋರಿಕೆಯಿಂದ ಹೋಟೆಲ್​ನ ಅಡುಗೆ ಕೋಣೆಯಲ್ಲಿದ್ದ ಸಿಲಿಂಡರ್ ಸ್ಫೋಟಗೊಂಡಿದೆ. ಘಟನೆಯಲ್ಲಿ ಹೊಟೆಲ್ ಸಿಬ್ಬಂದಿ ನರಸಿಂಹ (50), ಜಗ್ಗ (52), ಗಂಗಾಧರ (38), ಕೃಷ್ಣ (23), ಕೃಷ್ಣ (54) ಸೇರಿದಂತೆ 7 ಜನರಿಗೆ ಗಾಯವಾಗಿದೆ.

ಗ್ಯಾಸ್ ಲೀಕ್ ಆಗುತ್ತಿದ್ದಂತೆ ಗ್ರಾಹಕರನ್ನ ಹೊಟೆಲ್ ಸಿಬ್ಬಂದಿ ಹೊರಗಡೆ ಕಳಿಸಿದ್ದರು. ಪರಿಶೀಲಿಸುವಷ್ಟರಲ್ಲೇ ಗ್ಯಾಸ್ ಪೈಪ್ ಸ್ಫೋಟಗೊಂಡಿದೆ. ಸದ್ಯ ಗಾಯಗೊಂಡವರನ್ನು ಸೇಂಟ್ ಜಾನ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಗಾಯಗೊಂಡವರಲ್ಲಿ ಮೂವರು ಉತ್ತರ ಭಾರತ ಮೂಲದವರಾಗಿದ್ದಾರೆ.

ಪೈಪ್ ಸ್ಫೋಟಗೊಂಡಿದ್ದರಿಂದ ಸಣ್ಣಪುಟ್ಟ ಗಾಯಗಳೊಂದಿಗೆ ಸಿಬ್ಬಂದಿ ಪಾರಾಗಿದ್ದಾರೆ. ಗ್ಯಾಸ್ ಲೀಕ್ ಆಗುತ್ತಿದ್ದಂತೆ ಗ್ರಾಹಕರನ್ನ ಹೊಟೆಲ್ ಸಿಬ್ಬಂದಿ ಹೊರಗಡೆ ಕಳಿಸಿದ್ದರು. ಅಡುಗೆ ಕೋಣೆಯಲ್ಲಿ ಇನ್ನೂ 6 ಸಿಲಿಂಡರ್ ಇರುವ ಕಾರಣ ಮುಂಜಾಗ್ರತಾ ಕ್ರಮವಾಗಿ ಅಗ್ನಿಶಾಮಕ ಸಿಬ್ಬಂದಿಗೆ ಕರೆ ಮಾಡಲಾಗಿದ್ದು, ಸ್ಥಳಕ್ಕೆ 2 ಅಗ್ನಿಶಾಮಕ ವಾಹನಗಳು ದೌಡಾಯಿಸಿವೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು