ಬೆಂಗಳೂರು: ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ ಮುಂದುವರೆಸಲು ಕ್ರಮ ಕೈಗೊಳ್ಳಲಾಗುವುದು,ನಮ್ಮದು ಸ್ಪಂದನಶೀಲ ಸರ್ಕಾರವಾಗಿದ್ದು, ಸಮಸ್ಯೆ ಉಂಟಾದ ಸಂದರ್ಭದಲ್ಲಿಯೇ ಸ್ಪಂದಿಸುವ ಕೆಲಸ ಮಾಡುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ರಾಗಿ ಖರೀದಿ ಮುಂದುವರೆಸಬೇಕೆಂಬ ಬೇಡಿಕೆಯ ಬಗ್ಗೆ ಸಚಿವ ಸಂಪುಟ ಉಪ ಸಮಿತಿ ಅನುಮೋದನೆ ಪಡೆದು ರೈತರಿಗೆ ಅನುಕೂಲವಾಗುವಂತಹ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಅವರು ಹೇಳಿದ್ದಾರೆ.
ಜೋಳ ಖರೀದಿಗೆ ಅವಕಾಶ ಮಾಡಿಕೊಡಬೇಕೆಂಬ ಬೇಡಿಕೆ ಬಂದ ಕೂಡಲೇ ಕ್ರಮ ಕೈಗೊಳ್ಳಲಾಗಿತ್ತು. ಅದೇ ರೀತಿ ರಾಗಿ ಖರೀದಿ ಮುಂದುವರೆಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.