ಬೆಂಗಳೂರು ನಗರ

ಬೆಳೆ ನಷ್ಟ ಪರಿಹಾರದ ನಿರೀಕ್ಷೆಯಲ್ಲಿದ್ದ ರೈತರಿಗೆ ಗುಡ್ ನ್ಯೂಸ್

ಬೆಂಗಳೂರು: ನೆರೆ, ಪ್ರವಾಹ, ಮಹಾ ಮಳೆಯಿಂದಾಗಿ ರಾಜ್ಯದ ಅನೇಕರ ರೈತರು ಬೆಳೆದ ಬೆಳೆ ನಷ್ಟವಾಗಿತ್ತು. ಹಾನಿಯಾದಂತ ಬೆಳೆಗೆ ಬೆಳೆ ನಷ್ಟ ಪರಿಹಾರದ ನಿರೀಕ್ಷೆಯಲ್ಲಿ ರೈತರಿದ್ದರು. ಈಗಾಗಲೇ 3 ಲಕ್ಷ ರೈತರಿಗೆ 226.57 ಕೋಟಿ ಪರಿಹಾರ ಬಿಡುಗಡೆ ಮಾಡಿದ್ದಂತ ರಾಜ್ಯ ಸರ್ಕಾರ, ಇಂದು 1.61 ಲಕ್ಷ ರೈತರಿಗೆ 92.30 ಕೋಟಿ ಪರಿಹಾರದ ಹಣ ಬಿಡುಗಡೆ ಮಾಡಿದೆ. ಈ ಮೂಲಕ ಬೆಳೆ ನಷ್ಟ ಪರಿಹಾರದ ( Karnataka Crop Relief Fund ) ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಿದೆ.

ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಕಂದಾಯ ಸಚಿವ ಆರ್ ಅಶೋಕ್ ( Revenue Minister R Ashok ) ಅವರು, ಈ ಮೊದಲು ಬೆಳೆ ಪರಿಹಾರವನ್ನು ಮೂರು ತಿಂಗಳಿಗೊಮ್ಮೆ ವಿತರಿಸಲಾಗುತ್ತಿತ್ತು. ಈ ಕ್ರಮವನ್ನದಲ್ಲಿ ಬದಲಾವಣೆ ಮಾಡಲಾಗಿದ್ದು, ಈಗ ಎರಡು ಮೂರು ದಿನಕ್ಕೆ ಒಮ್ಮೆ ತಂತ್ರಾಂಶದಲ್ಲಿ ನಮೂದಿಸಿ ಪರಿಹಾರ ಬಿಡುಗಡೆ ಮಾಡಲು ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದರು.

ಬೆಳೆ ಪರಿಹಾರ ನೀಡಲು ರಾಜ್ಯದಲ್ಲಿ ಹಣಕಾಸಿನ ಕೊರತೆಯಿಲ್ಲ. ಇಂದಿನವರೆಗೆ 3 ಲಕ್ಷ ರೈತರಿಗೆ 226.57 ಕೋಟಿ ಪರಿಹಾರ ವಿತರಿಸಲಾಗಿದೆ. ಇಂದು 1.61 ಲಕ್ಷ ರೈತರಿಗೆ 92.30 ಕೋಟಿ ಹಣ ಬಿಡುಗಡೆ ಮಾಡಲಾಗುತ್ತಿದೆ. ಈ ಮೂಲಕ ಒಟ್ಟು 4.61 ಲಕ್ಷ ರೈತರಿಗೆ 318.87 ಕೋಟಿ ಹಣ ನೇರವಾಗಿ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುತ್ತಿದೆ. ಯಾವುದೇ ಮಧ್ಯವರ್ತಿಗಳಿಗೆ ಅವಕಾಶ ಇಲ್ಲದಂತೆ ರೈತರ ಖಾತೆಗೆ ನೇರವಾಗಿ ಹಣ ಜಮೆಯಾಗುತ್ತಿದೆ ಎಂದರು.

Sneha Gowda

Recent Posts

ಸಂವಿಧಾನವನ್ನು ಯಾವುದೇ ಸರ್ಕಾರ ಬದಲಾಯಿಸಲು ಸಾಧ್ಯವಿಲ್ಲ : ನಿತಿನ್‌ ಗಡ್ಕರಿ

ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನ ಬದಲಿಸಲಿದೆ ಎನ್ನುವ ಕಾಂಗ್ರೆಸ್‌ ಆರೋಪಕ್ಕೆ ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿಗಳ ಖಾತೆ ಸಚಿವ…

8 mins ago

ತೀರ್ಥಯಾತ್ರೆಗೆ ಬಂದ ನಾಲ್ವರು ನದಿಯಲ್ಲಿ ಮುಳುಗಿ ದಾರುಣ ಸಾವು

ತೀರ್ಥಯಾತ್ರೆಗೆಂದು ಅತಿಥಿ ಗೃಹಕ್ಕೆ ಬಂದಿದ್ದವರು ನದಿಯಲ್ಲಿ ಬಟ್ಟೆ ತೊಳೆಯಲು ಹೋಗಿ ನಾಲ್ವರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಕೊಲ್ಲಾಪುರದ ಕಾಗಲ್ ತಾಲೂಕಿನ…

26 mins ago

ಪ್ರಾಚೀನರ ಕಲಾ ಕೊಡುಗೆಗಳ ಸಂರಕ್ಷಣೆ ಅಗತ್ಯ: ನೇಮಿರಾಜ ಶೆಟ್ಟಿ

ಇತಿಹಾಸವನ್ನು ಚಿತ್ರಗಳ ಮೂಲಕ ಜೋಪಾಸನೆ ಮಾಡುವ ಕಾಯಕವೂ ಅತ್ಯಂತ ಶ್ರೇಷ್ಠ. ಮುಂದಿನ ಪೀಳಿಗೆಗೆ ಪ್ರಾಚೀನರ ಕಲಾ ಕೊಡುಗೆಯನ್ನು ಸಂರಕ್ಷಣೆ ಮಾಡುವುದು…

31 mins ago

ಮತ್ತೆ ವಿವಾದಕ್ಕೆ ಸಿಲುಕಿದ ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ

ಒಂದು ವರ್ಷದ ಸಾಧನೆಯ ರಿಪೋರ್ಟ್ ಕಾರ್ಡ್ ಹಿಡಿದು ಹಿರಿಯ ಬಿಜೆಪಿ ಮುಖಂಡರ ಬಳಿ ಶಾಸಕ ಅಶೋಕ್ ಕುಮಾರ್ ರೈ ತೆರಳಿದ್ದು, ಶಾಸಕ…

41 mins ago

ಚಾಮರಾಜನಗರ: ಹಾಸನೂರು ಘಾಟ್ ಬಳಿ ಕಾರು ಪಲ್ಟಿ

ಜಿಲ್ಲೆಗೆ ಹೊಂದಿಕೊಂಡಿರುವ ತಮಿಳುನಾಡಿನ ಹಾಸನೂರು ಘಾಟ್ ಬಳಿ ಕಾರೊಂದು ಪಲ್ಟಿಯಾದ ಘಟನೆ ನಡೆದಿದೆ.

1 hour ago

ಫ್ಲಾಟ್‌ಗಳನ್ನು ನಿರ್ಮಿಸಲು 8 ಮರಗಳನ್ನು ಕಡಿದ ಬಿಲ್ಡರ್ ವಿರುದ್ಧ ಎಫ್‌ಐಆರ್

ಫ್ಲಾಟ್‌ಗಳನ್ನು ನಿರ್ಮಿಸಲು ಎಂಟು ಮರಗಳನ್ನು ಕಡಿದ ಆರೋಪದ ಮೇಲೆ ಆಂಧ್ರಪ್ರದೇಶ ಮೂಲದ ಬಿಲ್ಡರ್ ವಿರುದ್ಧ ಬಿಬಿಎಂಪಿ ಅರಣ್ಯ ವಿಭಾಗವು ಎಫ್‌ಐಆರ್…

1 hour ago