ಬೆಳೆ ಹಾನಿ ಸಮೀಕ್ಷೆಯನ್ನು ಜಿಲ್ಲಾಧಿಕಾರಿಗಳು ಮುಂಚೂಣಿಯಲ್ಲಿದ್ದು ನಡೆಸಬೇಕು: ಸಿಎಂ

ಬೆಂಗಳೂರು: ಬೆಳೆ ಹಾನಿ ಸಮೀಕ್ಷೆಯನ್ನು ತ್ವರಿತವಾಗಿ ನಡೆಸಿ ವರದಿ ಸಲ್ಲಿಸಬೇಕು. ಜಿಲ್ಲಾಧಿಕಾರಿಗಳು ಮುಂಚೂಣಿಯ ಲ್ಲಿದ್ದು ಸಮೀಕ್ಷೆ ನಡೆಸಬೇಕು. ಸ್ಥಳ ಪರಿಶೀಲನೆ ಕೈಗೊಂಡು ಯಾವ ತಾಲೂಕು, ಗ್ರಾಮಗಳಲ್ಲಿ ನಷ್ಟ ಉಂಟಾಗಿದೆ ಎಂಬ ಬಗ್ಗೆ ಸಮೀಕ್ಷೆ ನಡೆಸಿ ಅಂಕಿಅಂಶ ಸಹಿತ ಮಾಹಿತಿ ನೀಡಬೇಕು. ಜತೆಗೆ ಎಸ್‌ಡಿಆರ್‌ಎಫ್ನ ಎರಡು ಹೆಚ್ಚುವರಿ ಕಂಪೆನಿಗಳನ್ನು ಸ್ಥಾಪಿಸಬೇಕು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು.

ಮಳೆಯಿಂದ ಹಾನಿಗೊಳಗಾದ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಜಿ.ಪಂ. ಸಿಇಒ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿಗಳ ಜತೆಗೆ ಗೃಹ ಕಚೇರಿ ‘ಕೃಷ್ಣಾ’ದಿಂದ ಶನಿವಾರ ವೀಡಿಯೋ ಸಂವಾದ ನಡೆಸಿದ ಅವರು, ಕೊಡಗು, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭೂ ಕುಸಿತ ಉಂಟಾಗುವ ಸಾಧ್ಯತೆಗಳು ಹೆಚ್ಚಿರುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು ಹಾಗೂ ಭೂ ಕುಸಿತದಿಂದ ಸಾವು ಸಂಭವಿಸದಂತೆ ಜನರನ್ನು ಸ್ಥಳಾಂತರಿಸಲು ಸೂಚಿಸಿದರು. ವಿಪತ್ತು ನಿರ್ವಹಣ ತಂಡದವರು ಈ ಬಗ್ಗೆ ಸಂಬಂಧಿಸಿದ ಜಿಲ್ಲೆ ಗಳಿಗೆ ಮಾಹಿತಿ ನೀಡಬೇಕು.

ನಿಯಮಿತವಾಗಿ ಪ್ರವಾಹಕ್ಕೊಳಗಾಗುವ ಪ್ರದೇಶ ಗಳನ್ನು ಈಗಾಗಲೇ ಗುರುತಿಸಲಾಗಿರುವುದರಿಂದ ಮುನ್ನೆಚ್ಚರಿಕೆ ಕ್ರಮಗಳನ್ನು ಕೂಡಲೇ ಕೈಗೊಳ್ಳಬೇಕೆಂದೂ ಆದೇಶಿಸಿದರು.

ರಾಜ್ಯದಲ್ಲಿ ಮಳೆಯಿಂದ 12 ಜನ ಮೃತಪಟ್ಟಿದ್ದು, 430 ಜಾನು ವಾರುಗಳು ಸಾವಿಗೀಡಾಗಿವೆ. 1,431 ಮನೆಗಳಿಗೆ ನೀರು ನುಗ್ಗಿದ್ದು, 4,242 ಮನೆಗಳಿಗೆ ಭಾಗಶಃ ಹಾನಿಯಾಗಿದೆ. 7,010 ಹೆಕ್ಟೇರ್‌ ಕೃಷಿ ಬೆಳೆ ಹಾನಿಯಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು

Gayathri SG

Recent Posts

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

1 min ago

ಪಂಜಾಬ್​​ ವಿರುದ್ಧ ಹೈದರಾಬಾದ್ ಜಯಬೇರಿ : ಪ್ಲೇ ಆಫ್​​ನಲ್ಲಿ ಆರ್​​ಸಿಬಿ ವಿರುದ್ಧ ಕಣಕ್ಕೆ

ಇಂದು ರಾಜೀವ್​ ಗಾಂಧಿ ಇಂಟರ್​ ನ್ಯಾಷನಲ್​ ಸ್ಟೇಡಿಯಮ್​ನಲ್ಲಿ ನಡೆದ ರೋಚಕ ಪಂದ್ಯದಲ್ಲಿ ಪಂಜಾಬ್​​​ ಕಿಂಗ್ಸ್​ ವಿರುದ್ಧ ಸನ್​ರೈಸರ್ಸ್​ ಹೈದರಾಬಾದ್ ಗೆದ್ದು…

25 mins ago

ಮಹಿಳೆಯ ಕಿಡ್ನಿಯಲ್ಲಿತ್ತು 300 ಕಲ್ಲು: ಬೆಚ್ಚಿಬಿದ್ದ ವೈದ್ಯರು

ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…

39 mins ago

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

1 hour ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

1 hour ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

2 hours ago