ಬೆಂಗಳೂರು : ಅಕ್ರಮ ಆಸ್ತಿ ಗಳಿಕೆ ಆರೋಪದ ಮೇಳೆ ಬೆಂಗಳೂರು ನಗರ ವಿಭಾಗದ ಬೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ಮನೆ ಮೇಲೆ ಭ್ರಷ್ಟಾಚಾರ ನಿಗ್ರಹ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಬೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ಎಲ್.ಎಸ್.ಲಕ್ಷ್ಮೀಶ್ ಮನೆ ಮೇಲೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಲಕ್ಷ್ಮೀಶ್ ಗೆ ಸೇರಿದ ಮಾಗಡಿ ರಸ್ತೆಯ ಪ್ರೆಸ್ಟಿಜ್ ವುಡ್ಸ್ ಅಪಾರ್ಟ್ ಮೆಂಟ್ ನ ವಾಸದ ಮನೆ ಮತ್ತು ಹಾಸನ ಜಿಲ್ಲೆ ಅರಸಿಕೆರೆ ತಾಲೂಕಿನ ಮನೆಗೆ ಅಧಿಕಾರಿಗಳು ದಾಳಿ ನಡೆಸಿ, ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.