ಬೊಮ್ಮಾಯಿ ಅವರೇ ನಾನು ಮಾತ್ರವಲ್ಲ, ನೀವೂ ದ್ರಾವಿಡರೇ ಆಗಿದ್ದೀರಿ: ಸಿದ್ದರಾಮಯ್ಯ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹೇಳಿಕೆಗಳಿಗೆ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಭಾನುವಾರ ಸರಣಿ ಟ್ವೀಟ್ ಗಳ ಮೂಲಕ ಪ್ರತಿಕ್ರಿಯೆ ನೀಡಿದ್ದು, ನಾನು ಮಾತ್ರವಲ್ಲ, ನೀವೂ ದ್ರಾವಿಡರೇ ಆಗಿದ್ದೀರಿ.

ನಾನು ದ್ರಾವಿಡ ಮೂಲವನ್ನು ಉಳಿಸಿಕೊಂಡಿದ್ದೇನೆ, ನೀವು ಮಾತ್ರ ಅಧಿಕಾರದ ದುರಾಸೆಯಿಂದ ಮೂಲವನ್ನು ತೊರೆದು ಪಕ್ಷಾಂತರ ಮಾಡಿದ್ದೀರಿ. ಬೇಗ “ಘರ್ ವಾಪಸಿ”‘ ಆಗಿಬಿಡಿ ಎಂದಿದ್ದಾರೆ.

ನೆಹರು ಅವರನ್ನು ಮೋದಿಗೆ ಹೋಲಿಸಲು ಸಾಧ್ಯವೇ ಇಲ್ಲ ಎಂದು ಮತ್ತೆ ಮತ್ತೆ ಹೇಳುತ್ತೇನೆ. ಇಬ್ಬರು ನಾಯಕರ ಸಾಧನೆ ಬಗ್ಗೆ ಮುಕ್ತ ಚರ್ಚೆಗೆ ನೀವು ಸಿದ್ಧ ಇದ್ದರೆ ನಾನೂ ಸಿದ್ಧನಿದ್ದೇನೆ. ನನ್ನ ಮಾತಿಗೆ ನೀವು ಖರೀದಿಸಿಟ್ಟಿರುವ ”ಟ್ರೋಲ್ ಗ್ಯಾಂಗ್” ಮೂಲಕ ಉತ್ತರ ಕೊಡಿಸಲು ಹೋಗಬೇಡಿ. ”ಭಾರತ ಮಾತೆ ತನ್ನ ಭಕ್ತನನ್ನು ಕಳೆದುಕೊಂಡಿದ್ದಾಳೆ, ಶಾಂತಿ ತನ್ನ ರಕ್ಷಕನನ್ನು ಕಳೆದುಕೊಂಡು ಅನಾಥಳಾಗಿದ್ದಾಳೆ, ನಿರಾಶ್ರಿತರು ತನ್ನ ಆಶ್ರಯದಾತನನ್ನು, ಸಾಮಾನ್ಯ ಜನ ತಮ್ಮ ಕಣ್ಮಣಿಯನ್ನು ಕಳೆದುಕೊಂಡಿದ್ದಾರೆ.. ಪರದೆ ಬಿದ್ದಿದೆ” -ಹೀಗೆಂದು ನೆಹರು ಸಾವಿಗೆ ಎ.ಬಿ.ವಾಜಪೇಯಿ ಕಂಬನಿ ಮಿಡಿದಿದ್ದನ್ನು ಹಿರಿಯ ಬಿಜೆಪಿ ನಾಯಕರಿಂದ ಕೇಳಿ ತಿಳಿದುಕೊಳ್ಳಿ ಎಂದು ಬರೆದಿದ್ದಾರೆ.

‘ದೇಶ ವಿಭಜನೆಯ ಗಾಯಕ್ಕೆ ಸೌಹಾರ್ದತೆಯ ಮುಲಾಮು ಹಚ್ಚಿದವರು ಜವಾಹರಲಾಲ ನೆಹರು. ಒಣಗಿದ ಗಾಯಗಳನ್ನು ಕೋಮುದ್ವೇಷದ ಮೂಲಕ ಕೆದಕುತ್ತಾ ಸಾಮಾಜಿಕ ಆರೋಗ್ಯವನ್ನು ಕೆಡಿಸುತ್ತಿರುವವರು ನಿಮ್ಮ ನರೇಂದ್ರ ಮೋದಿ ಅವರು. ಭಾಕ್ರಾ ನಂಗಲ್, ಹಿರಾಕುಡ್, ದಾಮೋದರ ಕಣಿವೆ ಯೋಜನೆಗಳ ಮೂಲಕ ಭಾರತವೆಂಬ ಆಧುನಿಕ ದೇವಾಲಯವನ್ನು ನಿರ್ಮಾಣ ಮಾಡಿದ್ದ ಜವಾಹರಲಾಲ ನೆಹರೂ ಅಭಿವೃದ್ದಿಯ ಮುನ್ನೋಟದಿಂದ ದೇಶ ಕಟ್ಟಿದ್ದರು. ಅವರಿಗೆ ಕಟ್ಟುವುದಷ್ಟೇ ಗೊತ್ತಿತ್ತು, ನಿಮ್ಮ ನರೇಂದ್ರ ಮೋದಿ ಅವರು ಕೆಡವುದನ್ನಷ್ಟೇ ಕಲಿತಿದ್ದಾರೆ ಎಂದು ಕಿಡಿ ಕಾರಿದ್ದಾರೆ.

ಎಸ್.ಬಿ.ಐ, ಎಲ್.ಐ.ಸಿ ಯಿಂದ ಹಿಡಿದು ಭಾರತೀಯ ತೈಲ ನಿಗಮ, ಏರ್ ಇಂಡಿಯಾದ ವರೆಗೆ ನೂರಾರು ಸರ್ಕಾರಿ ಸಂಸ್ಥೆಗಳನ್ನು ಕಟ್ಟಿದವರು ಪಂಡಿತ ಜವಾಹರಲಾಲ ನೆಹರು. ಅದನ್ನು ಮಾರಾಟಕ್ಕಿಟ್ಟವರು ಯಾರೆಂದು ಬಿಡಿಸಿ ಹೇಳಬೇಕೇ? ಉಕ್ಕಿನ ಕಾರ್ಖಾನೆ, ರೈಲ್ವೆ ಎಂಜಿನ್-ಕೋಚ್ ನಿರ್ಮಾಣ ಘಟಕಗಳು, ಯುದ್ಧ ವಿಮಾನ-ಟ್ಯಾಂಕ್ ಗಳು, ಉಷ್ಣವಿದ್ಯುತ್ ಉತ್ಪಾದನಾ ಸಲಕರಣೆಗಳು ಹೀಗೆ ಸರ್ಕಾರಿ ಸ್ವಾಮ್ಯದಲ್ಲಿ ಸಾಲು ಸಾಲು ಉದ್ಯಮಗಳನ್ನು ಕಟ್ಟಿ ಬೆಳೆಸಿದ್ದವರು ಜವಾಹರಲಾಲ ನೆಹರೂ. ಮೋದಿಯವರು ಕಟ್ಟಿದೆಷ್ಟು, ಕೆಡವಿದೆಷ್ಟು? ಎಂದು ಪ್ರಶ್ನಿಸಿದ್ದಾರೆ.

ಆಧುನಿಕ ಸಂಶೋಧನಾ ಸಂಸ್ಥೆಗಳ ಸ್ಥಾಪನೆ ಮೂಲಕ ಸಂವಿಧಾನದ ಆಶಯವಾದ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ಶ್ರಮಿಸಿದವರು ಪಂಡಿತ್ ನೆಹರು . ಪ್ಲಾಸ್ಟಿಕ್ ಸರ್ಜರಿ, ಚರಂಡಿ ನೀರಿನಿಂದ ಗ್ಯಾಸ್, ಪೆನ್ ಡ್ರೈವ್ ಗಳ ಹೇಳಿಕೆಗಳಿಂದ ಅಂತರಾಷ್ಟ್ರೀಯ ಮಟ್ಟದಲ್ಲಿ ನಗೆಪಾಟಲಿಗೀಡಾದವರು ಯಾರೆಂದು ನಿಮಗೆ ಗೊತ್ತಿಲ್ಲವೇ? ಬೊಮ್ಮಾಯಿವರೇ, ಭಾರತ-ಚೀನಾ ಗಡಿಪ್ರದೇಶದ ಬೆಳವಣಿಗೆ ಬಗ್ಗೆ ಸರಿಯಾದ ಮಾಹಿತಿ ತರಿಸಿಕೊಳ್ಳಿ. ಇತಿಹಾಸದ ವ್ಯಸನದಲ್ಲಿ ಮೈಮರೆಯಬೇಡಿ. ವರ್ಷದ ಹಿಂದೆ ಚೀನಾ ದೇಶದ ಎದುರು ಭಾರತ ಮಂಡಿ ಊರುವಂತೆ ಮಾಡಿ ಭಾರತೀಯರು ತಲೆ ತಗ್ಗಿಸುವಂತೆ ಮಾಡಿದ್ದು ಯಾರೆಂದು ನಿಮಗೆ ಗೊತ್ತಿಲ್ಲವೇ? ಎಂದು ಪ್ರಶ್ನೆಗಳ ಸರಣಿಯನ್ನೇ ಮುಂದಿಟ್ಟಿದ್ದಾರೆ.

Gayathri SG

Recent Posts

ಅಂಜಲಿ ಹತ್ಯೆ ಪ್ರಕರಣ : ಆತ್ಮಹತ್ಯೆಗೆ ಯತ್ನಿಸಿದ ಸಹೋದರಿ ಚೇತರಿಕೆ

ಅಂಜಲಿ ಅಂಬಿಗೇರ ಹತ್ಯೆ ಪ್ರಕರಣ ರಾಜ್ಯಾದ್ಯಂತ ಸಂಚಲನ ಸೃಷ್ಟಿಸಿದೆ. ಈ ಮಧ್ಯೆ ಸಹೋದರಿಯ ಹತ್ಯೆಯಿಂದ ಮಾನಸಿಕವಾಗಿ ಕುಗ್ಗಿ ಹೋಗಿರುವ ಯಶೋದಾ…

13 mins ago

ಜಮ್ಮು-ಕಾಶ್ಮೀರದಲ್ಲಿ ಭಯೋತ್ಪಾದಕ ದಾಳಿ : ಬಿಜೆಪಿ ಮಾಜಿ ಸರಪಂಚ್ ಸಾವು

ಜಮ್ಮು-ಕಾಶ್ಮೀರದಲ್ಲಿ ಇನ್ನು ಎರಡು ದಿನಗಳಲ್ಲಿ ಲೋಕಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುನ್ನ ನಿನ್ನೆ ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ…

24 mins ago

ವಿಮಾನ ಇಂಜಿನ್‌ನಲ್ಲಿ ಬೆಂಕಿ : ಬೆಂಗಳೂರಿನಲ್ಲಿ ತುರ್ತು ಭೂಸ್ಪರ್ಶ

ಬೆಂಗಳೂರಿನಿಂದ ಕೊಚ್ಚಿಗೆ ಪ್ರಯಾಣಿಸುತ್ತಿದ್ದ ಏರ್‌ ಇಂಡಿಯಾ ಎಕ್ಸಪ್ರೆಸ್‌ ವಿಮಾನವು ಶನಿವಾರ ತಡರಾತ್ರಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತುರ್ತು ಲ್ಯಾಂಡಿಂಗ್‌ ಮಾಡಿದೆ.…

32 mins ago

ಸಿಂಗಾಪುರದಲ್ಲಿ ಹೆಚ್ಚುತ್ತಿರುವ ಕೊರೊನಾ ಅಲೆ ಭೀತಿ : ಮಾಸ್ಕ್‌ ಧರಿಸುವಂತೆ ಆದೇಶ

ಸಿಂಗಾಪುರದಲ್ಲಿ ಕೊರೊನಾ ಸೋಂಕಿನ ಹೊಸ ಅಲೆ ಭೀತಿ ಎದುರಾಗಿದ್ದು, ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಸಂಖ್ಯೆಯಲ್ಲಿ ಏರಿಕೆಯಾಗಿದೆ. ಜನರಿಗೆ ಮಾಸ್ಕ್‌…

34 mins ago

ಸುರತ್ಕಲ್: ಶಬರಿಮಲೆ ಹದಿನೆಂಟು ಮೆಟ್ಟಿಲು ಹತ್ತುವ ವೇಳೆ ಹೃದಯಾಘಾತ !

ಮಗನ ಹೆಸರಲ್ಲಿ ಹೇಳಿಕೊಂಡಿದ್ದ ಹರಕೆ ತೀರಿಸಲು ಶಬರಿಮಲೆಗೆ ತೆರಳಿದ್ದ ಸುರತ್ಕಲ್ ಕಾಟಿಪಳ್ಳ ನಿವಾಸಿ ಸಂದೀಪ್‌ ಶೆಟ್ಟಿ (37) ಅವರು ಹೃದಯಾಘಾತದಿಂದ…

46 mins ago

ಸಿಎಂ ಸಿದ್ದು ತವರು ಕ್ಷೇತ್ರದಲ್ಲಿ ವಾಂತಿ-ಬೇದಿಯಿಂದ ತತ್ತರಿಸಿದ ಗ್ರಾಮಸ್ಥರು ..!

ಬಿಸಿಲಿನ ಬೇಗೆಯಿಂದ ತತ್ತರಿಸುತ್ತಿರುವ ಜನರಿಗೆ ತಂಪೆರೆಯುವ ಸಲುವಾಗಿ ಕಳೆದ ಒಂದು ವಾರಗಳಿಂದ ಮಳೆಯು ಧಾರಾಕಾರವಾಗಿ ಸುರಿಯುತ್ತಿದೆ ಇಂತಹ ಸಂದರ್ಭದಲ್ಲಿ ರಾಜ್ಯದ…

55 mins ago