ಬೆಂಗಳೂರು: ರಾಜ್ಯ ಬ್ರೆನ್ ಹೆಲ್ತ್ ಇನಿಶಿಯೇಟಿವ್ ಮತ್ತು ಮಾನಸಿಕ ಆರೋಗ್ಯ ರಾಯಭಾರಿಯಾಗಿ ಅಂತರಾಷ್ಟ್ರೀಯ ಕ್ರಿಕೆಟ್ ಆಟಗಾರ ರಾಬಿನ್ ಉತ್ತಪ್ಪ ಅವರನ್ನು ಸರ್ಕಾರ ನೇಮಕ ಮಾಡಿದೆ.
ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಬ್ರೆನ್ ಹೆಲ್ತ್ ಇನಿಶಿಯೇಟಿವ್ ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಕೇಂದ್ರ ಸರ್ಕಾರದ ನೀತಿ ಆಯೋಗ ಮತ್ತು ನಿಮ್ಹಾನ್ಸ್ ಇವರ ನಡುವಿನ ಸಹಯೋಗದ ಹೊಸ ಕಾರ್ಯಕ್ರಮವಾಗಿದೆ ಎಂದು ತಿಳಿಸಿದ್ದಾರೆ.
ಕರ್ನಾಟಕ ರಾಜ್ಯಾಧ್ಯಂತ ನಗರಗಳು, ಪಟ್ಟಣಗಳು ಮತ್ತು ದೂರದ ಹಳ್ಳಿಗಳಲ್ಲಿನ ದುರ್ಬಲ ಜನರ ಮೆದುಳು ಮತ್ತು ಮಾನಸಿಕ ಆರೋಗ್ಯದ ಬಗ್ಗೆ ಜಾಗೃತಿ ಮೂಡಿಸುವ ಸಲುವಾಗಿ ಸಾರ್ವತ್ರಿಕವಾಗಿ ಮೆಚ್ಚುಗೆ ಮತ್ತು ವಿಶ್ವಾಸಾರ್ಹವಾಗಿರುವ ಹಾಗೂ ಅಂತರಾಷ್ಟ್ರೀಯ ಖ್ಯಾತಿಯ ಕ್ರಿಕೆಟ್ ಆಟಗಾರರಾದ ರಾಬಿನ್ ಉತ್ತಪ್ಪರನ್ನು ಮೆದುಳಿನ ಆರೋಗ್ಯದ ಬಗ್ಗೆ ಅರಿವು ಮೂಡಿಸಲು ಸರ್ಕಾರದ ರಾಯಭಾರಿಯನ್ನಾಗಿ ನೇಮಿಸಿರೋದಾಗಿ ತಿಳಿಸಿದ್ದಾರೆ.
ಯುನೈಟೆಡ್ ಅರಬ್ ಎಮಿರೇಟ್ಸ್ನ ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…
ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…
ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ನಡೆದಿದೆ.
ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…
ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.
ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…