ಶಾಲೆಯಲ್ಲಿ ಭಗವದ್ಗೀತೆ ಕಲಿಸುದಕ್ಕೆ ನಮ್ಮ ವಿರೋಧವಿಲ್ಲ; ಸಿದ್ದರಾಮಯ್ಯ

ಬೆಂಗಳೂರು : ಪಠ್ಯಕ್ರಮದಲ್ಲಿ ಭಗವದ್ಗೀತೆ ಸೇರಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಶಾಲೆಯಲ್ಲಿ ಭಗವದ್ಗೀತೆ ಹೇಳಿಕೊಟ್ಟರೆ ಅದಕ್ಕೆ ನಮ್ಮ ವಿರೋಧವೇನೂ ಇಲ್ಲ. ಸಂವಿಧಾನದಲ್ಲಿ ನಂಬಿಕೆ ಇಡಬೇಕು, ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ ಕೊಡಬೇಕು ಎಂಬುದು ನಮ್ಮ ಒತ್ತಾಯ ಎಂದು ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಶಾಲೆಯಲ್ಲಿ ಭಗವದ್ಗೀತೆಯನ್ನಾದರೂ ಹೇಳಿಕೊಡಲಿ, ಕುರಾನ್, ಬೈಬಲ್ ನ್ನಾದರೂ ಹೇಳಿಕೊಡಲಿ, ಅದಕ್ಕೆ ನಮ್ಮ ತಕರಾರಿಲ್ಲ. ನೈತಿಕ ಶಿಕ್ಷಣದ ಅಗತ್ಯವಿದೆ ಹಾಗಂತ ಸಂವಿಧಾನಕ್ಕೆ ವಿರುದ್ಧವಾಗಿ ನಡೆದುಕೊಳ್ಳುವುದಲ್ಲ. ಭಗವದ್ಗೀತೆ, ಕುರಾನ್ ಯಾವುದಕ್ಕು ನಮ್ಮ ವಿರೋಧವಿಲ್ಲ. ಇಂದಿನ ಸ್ಪರ್ಧಾತ್ಮಕ ಯುಗಕ್ಕೆ ಬೇಕಾದ ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ನೀಡಲಿ ಎಂಬುದು ನಮ್ಮ ಆಗ್ರಹ ಎಂದರು.

ಇದು ಬಹುಸಂಸ್ಕೃತಿ ಇರುವ ರಾಷ್ಟ್ರ. ನಾವೆಲ್ಲರೂ ಒಟ್ಟಿಗೆ ಸಾಗಬೇಕು. ಆ ನಿಟ್ಟಿನಲ್ಲಿ ಸಂವಿಧಾನದ ಸಹಿಷ್ಣತೆ, ಸಹಬಾಳ್ವೆಯಲ್ಲಿ ನಂಬಿಕೆಯನ್ನಿಟ್ಟುಕೊಂಡಿರಬೇಕು. ಈ ನಿಟ್ಟಿನಲ್ಲಿ ಶಿಕ್ಷಣ ಸಾಗಬೇಕು ಎಂದು ಹೇಳಿದರು.

Gayathri SG

Recent Posts

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

32 mins ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

49 mins ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

1 hour ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

1 hour ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

3 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

3 hours ago