News Karnataka Kannada
Wednesday, May 08 2024
ಬೆಂಗಳೂರು ನಗರ

ಭಜರಂಗದಳ ಕಾರ್ಯಕರ್ತನ ಕೊಲೆ ಪ್ರಕರಣ ಸಂಬಂಧ ಮೂವರನ್ನು ಬಂಧಿಸಲಾಗಿದೆ; ಅರಗ ಜ್ಞಾನೇಂದ್ರ

Araga Jnanendra
Photo Credit :

ಬೆಂಗಳೂರು : ಶಿವಮೊಗ್ಗದಲ್ಲಿ ಭಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣದಲ್ಲಿ ಈಗಾಗಲೇ ಪೊಲೀಸರು ಮೂವರನ್ನು ಬಂಧಿಸಲಾಗಿದೆ. ಐವರು ಈ ಹತ್ಯೆ ಪ್ರಕರಣದ ಹಿಂದೆ ಇದ್ದಾರೆ ಎನ್ನಲಾಗುತ್ತಿದೆ. ಪ್ರಕರಣ ವಿಚಾರಣೆ ಹಂತದಲ್ಲಿ ಇರೋ ಕಾರಣದಿಂದಾಗಿ ಯಾವುದೇ ಮಾಹಿತಿ ನೀಡೋದಕ್ಕೆ ಆಗೋದಿಲ್ಲ ಎಂಬುದಾಗಿ ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು.

ಈ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದಂತ ಅವರು, ಶಿವಮೊಗ್ಗದಲ್ಲಿನ ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ಸಂಬಂಧ ಸ್ವತಹ ಎಡಿಜಿಪಿ ಎಸ್.ಮುರುಗನ್ ಅವರನ್ನೇ ಸ್ಥಳಕ್ಕೆ ಕಳುಹಿಸಿ ಕೊಡಲಾಗಿದೆ. ಪರಿಸ್ಥಿತಿಯನ್ನು ಹತೋಟಿಗೆ ತರೋದಕ್ಕಾಗಿ ಪೊಲೀಸರು ಎಲ್ಲಾ ಕ್ರಮಗಳನ್ನು ಕೈಗೊಂಡಿದ್ದಾರೆ. ಅಲ್ಲಲ್ಲಿ ಸಣ್ಣ ಮಟ್ಟದ ಅಹಿತಕರ ಘಟನೆಗಳು ನಡೆದಿವೆ ಎಂದರು.

ಹರ್ಷ ಹತ್ಯ ಸಂಬಂಧ ಈಗಾಗಲೇ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಈ ಪ್ರಕರಣದಲ್ಲಿ ಐವರು ಇರೋದಾಗಿ ಹೇಳಲಾಗುತ್ತಿದೆ. ಆದ್ರೇ ಆ ನಿಟ್ಟಿನಲ್ಲಿ ತನಿಖೆ ನಡೆಸಲಾಗುತ್ತಿದೆ. ತನಿಖೆಯ ಬಳಿಕ ಸ್ಪಷ್ಟ ಮಾಹಿತಿ ತಿಳಿಯಲಿದೆ. ಪರಿಸ್ಥಿತಿ ನಿಯಂತ್ರಣಕ್ಕಾಗಿ 200 ಪೊಲೀಸರನ್ನು ಬೆಂಗಳೂರಿನಿಂದ ನಿಯೋಜಿಸಲಾಗಿದೆ. ಯಾವುದೇ ಸಂಘಟನೆಯನ್ನು ಬ್ಯಾನ್ ಮಾಡೋ ಮೊದಲು ಕಾನೂನಿನ ಅನುಸಾರವಾಗಿ ಮಾಡಬೇಕು. ಆ ನಿಟ್ಟಿನಲ್ಲಿಯೂ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು