ಭಜರಂಗದಳ ಕಾರ್ಯಕರ್ತ ಹರ್ಷನ ಕುಟುಂಬಕ್ಕೆ 10 ಲಕ್ಷ ರೂ. ನೆರವು ಘೋಷಿಸಿದ ಸಚಿವ ಅಶ್ವತ್ಥನಾರಾಯಣ

ಬೆಂಗಳೂರು, ಫೆ.23 : ಶಿವಮೊಗ್ಗದಲ್ಲಿ ಹತ್ಯೆಗೀಡಾಗಿರುವ ಭಜರಂಗದಳದ ಕಾರ್ಯಕರ್ತ ಹರ್ಷ ಅವರ ಕುಟುಂಬಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ 10 ಲಕ್ಷ ರೂ.ಗಳ ನೆರವು ಘೋಷಿಸಿದ್ದಾರೆ.

ಈ ಬಗ್ಗೆ ಹೇಳಿಕೆ‌ ನೀಡಿರುವ ಅವರು ಡಾ.ಸಿ.ಎನ್ ಅಶ್ವತ್ಥನಾರಾಯಣ ಫೌಂಡೇಶನ್ ನಿಂದ ಪರಿಹಾರದ ಮೊತ್ತ ನೀಡಲಾಗುವುದು ಎಂದು ತಿಳಿಸಿದ್ದಾರೆ. ಸಚಿವರು ಬುಧವಾರ ಸಂಜೆ ಹರ್ಷ ಅವರ ತಾಯಿ ಜತೆ ದೂರವಾಣಿ ಮೂಲಕ ಮಾತನಾಡಿ ಸಾಂತ್ವನ ಹೇಳಿದರು.

ಹರ್ಷ ಈ ದೇಶ ಮತ್ತು ಸಮಾಜಕ್ಕಾಗಿ ತನ್ನ ಪ್ರಾಣವನ್ನೇ ಸಮರ್ಪಿಸಿದ್ದಾನೆ. ಇಂತಹ ಸಂಕಷ್ಟದ ಸಮಯದಲ್ಲಿ ಆತನ ಕುಟುಂಬದ ನೆರವಿಗೆ ನಿಲ್ಲುವುದು ನಮ್ಮ ಕರ್ತವ್ಯವಾಗಿದೆ. ಘೋಷಿಸಿರುವ ಹಣವನ್ನು ಹರ್ಷನ ತಾಯಿಯವರ ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು,’ ಎಂದಿದ್ದಾರೆ.

ಮೂಲಭೂತವಾದಿಗಳು ಹರ್ಷನಂತಹ ಒಬ್ಬ ಸೇವಾ ಮನೋಭಾವದ ವ್ಯಕ್ತಿಯನ್ನು ಬಲಿ ತೆಗೆದುಕೊಂಡಿದ್ದಾರೆ. ದುಷ್ಕರ್ಮಿಗಳನ್ನು ಈಗಾಗಲೇ ಬಂಧಿಸಲಾಗಿದ್ದು, ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಶಿವಮೊಗ್ಗದಲ್ಲಿ ನಡೆದಿರುವ ಹೇಯ ಕೃತ್ಯವನ್ನು ಸಂವೇದನಾಶೀಲರೆಲ್ಲ ಖಂಡಿಸಬೇಕು’ ಎಂದು ಅವರು ಹೇಳಿದ್ದಾರೆ.

ಬಿಜೆಪಿ ಸರಕಾರವು ಸಮಾಜದಲ್ಲಿ ಸೌಹಾರ್ದ ಸ್ಥಾಪನೆಗೆ ಬದ್ಧವಾಗಿದೆ. ನಾಗರಿಕ ಸಮಾಜದಲ್ಲಿ ವಾದ-ವಿವಾದಗಳು ಸಹಜ. ಆದರೆ ಶಿವಮೊಗ್ಗದಲ್ಲಿ ನಡೆದಿರುವುದು ಬರ್ಬರ ಮತ್ತು ಅಮಾನವೀಯ ಘಟನೆಯಾಗಿದೆ. ಸಮಾಜವಿರೋಧಿ ಶಕ್ತಿಗಳನ್ನು ಸರಕಾರವು ನಿರ್ದಾಕ್ಷಿಣ್ಯವಾಗಿ ಮಟ್ಟ ಹಾಕಲಿದೆ. ಈ ಘಟನೆಯ ಹಿಂದೆ ಯಾರಾರಿದ್ದಾರೆ ಮತ್ತು ಯಾವ್ಯಾವ ಸಂಘಟನೆಗಳ ಕುಮ್ಮಕ್ಕಿದೆ ಎನ್ನುವುದನ್ನು ಶೀಘ್ರವೇ ಪತ್ತೆ ಹಚ್ಚಲಾಗುವುದು’ ಎಂದು ಅಶ್ವತ್ಥನಾರಾಯಣ ತಿಳಿಸಿದ್ದಾರೆ.

Gayathri SG

Recent Posts

ಹಾಸನ ವಿಡಿಯೋ ಪ್ರಕರಣ: ಸುಳ್ಳು ದೂರಿನ ಒತ್ತಡ

ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಸಂಸದ ಪ್ರಜ್ವಲ್ ರೇವಣ್ಣ ನಾಪತ್ತೆಯಾಗಿದ್ದಾರೆ. ಶಾಸಕ ರೇವಣ್ಣ ಜೈಲು ಶಿಕ್ಷೆಗೆ ಗುರಿಗಾಗಿದ್ದಾರೆ. ಈ…

12 mins ago

ಮದುವೆ ರದ್ದು, ಕೋಪದಿಂದ ಅಪ್ರಾಪ್ತ ಬಾಲಕಿಯ ರುಂಡ ಕತ್ತರಿಸಿ ಕೊಲೆ ಮಾಡಿದ ಪ್ರೇಮಿ

ಮದುವೆ ಕ್ಯಾನ್ಸಲ್ ಆದ ಕೋಪಕ್ಕೆ ಬಾಲಕಿಯನ್ನು ಎಳೆದೊಯ್ದು ರುಂಡ ಕತ್ತರಿಸಿ ಕೊಲೆ ಮಾಡಿದ ಘಟನೆ ಕೊಡಗಿನ ಸೋಮವಾರಪೇಟೆಯ ಸುರ್ಲಬ್ಬಿಯಲ್ಲಿ ನಡೆದಿದೆ.

28 mins ago

ಅಕ್ಷಯ ತೃತೀಯದಂದು ಲಕ್ಷ್ಮಿ ಮತ್ತು ಕುಬೇರನಿಗೆ ವಿಶೇಷ ಪೂಜೆ

ಅಕ್ಷಯ ತೃತೀಯವನ್ನು ವೈಶಾಖ ಮಾಸದ ಶುಕ್ಲ ಪಕ್ಷದ ಮೂರನೇ ದಿನದಂದು ಈ ಹಬ್ಬವನ್ನು ಆಚರಿಸಲಾಗುತ್ತದೆ. ಅಂದಿನ ದಿನ ಭರವಸೆ, ಸಂತೋಷ,…

53 mins ago

ಅಕ್ಷಯ ತೃತೀಯ ದಿನದಂದು ಚಿನ್ನ, ಬೆಳ್ಳಿ ದರ ಪಟ್ಟಿ ಹೀಗಿದೆ!

ಇಂದು ಅಕ್ಷಯ ತೃತೀಯ ದಿನವಾಗಿದ್ದು, ಚಿನ್ನದ ಬೆಲೆ ಸ್ವಲ್ಪ ಮಟ್ಟಿಗೆ ಕಡಿಮೆಯಾಗಿದೆ. ಸತತ ಏರಿಕೆಯ ಬಳಿಕ ಎರಡು ದಿನ ಸತತ ಬೆಲೆ…

1 hour ago

ಚಿರಂಜೀವಿ, ನಟಿ ವೈಜಯಂತಿಮಾಲಾ ಸೇರಿ ಹಲವು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ತೆಲುಗು ನಟ ಕೊನಿಡೆಲಾ ಚಿರಂಜೀವಿ, ಹಿರಿಯ ನಟಿ ವೈಜಯಂತಿಮಾಲಾ ಬಾಲಿ,  ಸುಪ್ರೀಂ ಕೋರ್ಟ್‍ನ ಮೊದಲ ಮಹಿಳಾ ನ್ಯಾಯಾಧೀಶೆ ದಿ.ಎಂ ಫಾತಿಮಾ…

9 hours ago

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

9 hours ago