News Karnataka Kannada
Saturday, May 04 2024
ಬೆಂಗಳೂರು ನಗರ

ಭಾರೀ ಮಳೆ ಹಿನ್ನೆಲೆ, ಬೆಂಗಳೂರು, ಕರಾವಳಿ ಜಿಲ್ಲೆಗಳಲ್ಲಿ 4 ದಿನ ಯೆಲ್ಲೋ ಅಲರ್ಟ್ ಘೋಷಣೆ

Heavy rain warning issued for 10 districts
Photo Credit : News Kannada

ಬೆಂಗಳೂರು, ಜೂ.3: ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಶುಕ್ರವಾರದಿಂದ ನಾಲ್ಕು ದಿನಗಳ ಕಾಲ ಕರ್ನಾಟಕದಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ನೀಡಿದ್ದು, ಬೆಂಗಳೂರು ಮತ್ತು ಕರಾವಳಿ ಪ್ರದೇಶಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ.

ಹಾಸನ, ಶಿವಮೊಗ್ಗ, ರಾಮನಗರ, ಕೊಡಗು ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ದಕ್ಷಿಣ ಕರ್ನಾಟಕದ ಮೈಸೂರು, ಮಂಡ್ಯ, ಚಾಮರಾಜನಗರ ಜಿಲ್ಲೆಗಳಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆ ಇದೆ. ಬೆಂಗಳೂರು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ರಾಜ್ಯದ ಹೆಚ್ಚಿನ ಜಿಲ್ಲೆಗಳಲ್ಲಿ ಮಿಂಚು ಮತ್ತು ಗುಡುಗು ಸಹಿತ ಮಳೆಯಾಗುವ ಬಗ್ಗೆಯೂ ಎಚ್ಚರಿಕೆ ನೀಡಲಾಗಿದೆ. ಬೆಂಗಳೂರಿನಲ್ಲಿ ಶುಕ್ರವಾರ ಮತ್ತು ಶನಿವಾರ ಮಿಂಚು ಮತ್ತು ಗುಡುಗು ಸಹಿತ ಮಳೆಯಾಗಲಿದೆ.

ಉತ್ತರ ಕರ್ನಾಟಕದ ಜಿಲ್ಲೆಗಳಾದ ಬಾಗಲಕೋಟೆ, ಬೀದರ್, ಗದಗ, ಕೊಪ್ಪಳ, ರಾಯಚೂರು ಜಿಲ್ಲೆಗಳು ಮಳೆಯಿಂದ ಬಾಧಿತವಾಗುವುದಿಲ್ಲ. ಯೆಲ್ಲೋ ಅಲರ್ಟ್ ಎಂಬುದು ಕೇವಲ ವೀಕ್ಷಣೆಯ ಸಂಕೇತವಾಗಿದೆ ಮತ್ತು ಈ ಎಚ್ಚರಿಕೆಯ ಸಮಯದಲ್ಲಿ ಹವಾಮಾನ ಸ್ಥಿತಿಯು ೭.೫ ರಿಂದ ೧೫ ಮಿ.ಮೀ.ವರೆಗೆ  ಮಳೆಯಾಗುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು