News Karnataka Kannada
Monday, May 06 2024
ಬೆಂಗಳೂರು ನಗರ

ಭಾರೀ ಮಳೆ ಹಿನ್ನೆಲೆ, ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಣೆ

Heavy rain warning issued for 10 districts
Photo Credit : News Kannada

ಬೆಂಗಳೂರು: ರಾಜ್ಯಾದ್ಯಂತ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಹಾವೇರಿ ಜಿಲ್ಲೆಯಲ್ಲಿ ಮಳೆಯ ಆರ್ಭಟ ಮುಂದುವರೆದಿದೆ. ಭಾರೀ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಎಲ್ಲಾ ಶಾಲೆಗಳಿಗೆ ಇಂದು ಮತ್ತು ನಾಳೆ ರಜೆ ಘೋಷಣೆ ಮಾಡಲಾಗಿದೆ. ಹಾವೇರಿಯಲ್ಲಿ ಬಿಟ್ಟು ಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಶಾಲೆಗೆ ಹೋಗಲು ಮಕ್ಕಳಿಗೆ ಸಮಸ್ಯೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಮತ್ತು ನಾಳೆ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ದಾವಣಗೆರೆ ಜಿಲ್ಲೆಯಲ್ಲಿ ಭಾರೀ ಮಳೆಯಿಂದಾಗಿ 1 ರಿಂದ 10 ನೇ ತರಗತಿ ಮಕ್ಕಳಿಗೆ ಶಾಲೆಗೆ ಹೋಗಲು ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಇಂದು ಜಿಲ್ಲಾದ್ಯಂತ ಶಾಲೆಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಆದೇಶ ಹೊರಡಿಸಿದ್ದಾರೆ.ಶಾಲೆಗಳಿಗೆ ಮಕ್ಕಳು ಹೋಗಿ ಬರುವುದಕ್ಕೆ ತೊಂದರೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತೆಯಾಗಿ ಮೇ. 20 ರ ಇಂದು ಜಿಲ್ಲಾದ್ಯಂತ ಅನ್ವಯವಾಗುವಂತೆ 1 ರಿಂದ 10 ನೇ ತರಗತಿವರೆಗೆ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಬಿಡುವಿಲ್ಲದೆ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯಾದ್ಯಂತ ಮೇ. 20 ರ ಇಂದು ಎಲ್ಲಾ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿ ಡಾ. ಸೆಲ್ವಮಣಿ ಅದೇಶ ಹೊರಡಿಸಿದ್ದಾರೆ. ಗುರುವಾರವೂ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಮಳೆ ಮುಂದುವರೆದಿರುವುದರಿಂದ ಇಂದೂ ಶಾಲೆಗಳಿಗೆ ರಜೆ ನೀಡಲಾಗಿದೆ.

ಧಾರವಾಡ ಜಿಲ್ಲೆಯಲ್ಲೂ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದ್ದು, ಧಾರವಾಡ ಜಿಲ್ಲೆಯಲ್ಲಿ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಇಂದು ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು