ಬೆಂಗಳೂರು: ಅನಾರೋಗ್ಯಕ್ಕೊಳಗಾಗಿರುವ ಭೂಗತ ಪಾತಕಿ ರವಿ ಪೂಜಾರಿಯನ್ನು ಪರಪ್ಪನ ಅಗ್ರಹಾರ ಜೈಲಿನಿಂದ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.
ಫೆ.23ರಂದು ದಕ್ಷಿಣ ಆಫ್ರಿಕಾದಿಂದ ಗಡಿಪಾರಾದ ಬಳಿಕ ಪರಪ್ಪನ ಅಗ್ರಹಾರ ಜೈಲಿನಲ್ಲಿ ರವಿ ಪೂಜಾರಿಯನ್ನು ಇಡಲಾಗಿದೆ. ಈಗ ಆತನಿಗೆ ಹರ್ನಿಯಾ ಶಸ್ತ್ರಚಿಕಿತ್ಸೆ ಮಾಡಲು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.
ಕೆಲವು ದಿನಗಳ ಮೊದಲು ಹೊಟ್ಟೆ ನೋವಿನಿಂದ ಬಳಲುತ್ತಿದ್ದ ರವಿ ಪೂಜಾರಿ ಪರೀಕ್ಷೆ ವೇಳೆ ಹರ್ನಿಯಾ ಶಸ್ತ್ರಚಿಕಿತ್ಸೆ ನಡೆಸುವುದು ಅನಿವಾರ್ಯವೆಂದು ಕಂಡುಬಂದಿದೆ. ಇದಕ್ಕಾಗಿ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿರುವರು.