ಬೆಂಗಳೂರು: ತೆರಿಗೆ ಪಾವತಿಸದ ಕಾರಣ ಮಲ್ಲೆಶ್ವರದಲ್ಲಿರುವ ಮಂತ್ರಿ ಮಾಲ್ಗೆ ಹಾಕಿರುವ ಬೀಗ ಮುದ್ರೆ ತೆರವುಗೊಳಿಸುವಂತೆ ಹೈಕೋರ್ಟ್ ಬಿಬಿಎಂಪಿಗೆ ಆದೇಶಿಸಿದೆ.ಮಂತ್ರಿ ಮಾಲ್ ಆಡಳಿತ ಮಂಡಳಿಯ ಮೆಸರ್ಸ್ ಅಭಿಷೇಕ್ ಪ್ರೊಪ್ಬಿಲ್ಡ್ ಪ್ರೆವೆಟ್ ಲಿಮಿಟೆಡ್ ಕಂಪನಿ ಹಾಗೂ ಮೆಸರ್ಸ್ ಹಮಾರಾ ಶೆಲ್ಟರ್ಸ್ ಪ್ರೆವೆಟ್ ಲಿಮಿಟೆಡ್ ಕಂಪನಿ ಸಲ್ಲಿ ಸಿದ ಅರ್ಜಿಯನ್ನು ಆಲಿಸಿದ ನ್ಯಾಯಮೂರ್ತಿ ಎಂ. ನಾಗ ಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಆದೇಶ ನೀಡಿದೆ.
4 ಕೋಟಿ ರೂಪಾಯಿ ಸೆಕ್ಯೂರಿಟಿ ಡೆಪಾಸಿಟ್ ನೀಡಿದ ಹಿನ್ನೆಲೆ ಮಂತ್ರಿ ಮಾಲ್ಗೆ ಹಾಕಿದ್ದ ಬೀಗ ಓಪನ್ ಮಾಡಿದ ಬಿಬಿಎಂಪಿ.