ಮಕ್ಕಳಲ್ಲಿ ಕೊರೋನಾ ಸೋಂಕು ಇಳಿಕೆ

ಬೆಂಗಳೂರು,ನ.24 : ಕೊರೋನಾ ಮೂರನೇ ಅಲೆ ಮಕ್ಕಳ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂಬ ಆತಂಕ ಈಗ ದೂರಾಗಿರುವ ಲಕ್ಷಣಗಳು ಕಂಡುಬಂದಿವೆ. ರಾಜ್ಯದ ಕೋವಿಡ್ ವಾರ್‍ರೂಮ್ ನೀಡಿರುವ ಮಾಹಿತಿಗಳ ಪ್ರಕಾರ ಮಕ್ಕಳಲ್ಲಿ ಸೋಂಕು ಇಳಿಕೆಯಾಗಿದೆ.

ಈ ವರ್ಷ ಐದು ತಿಂಗಳ (ಜುಲೈ 20 ರಿಂದ ನವೆಂಬರ್ 20) ದತ್ತಾಂಶವು, 0 ರಿಂದ 9 ವರ್ಷ ವಯಸ್ಸಿನ ಮಕ್ಕಳಿನಲ್ಲಿ ಸೋಂಕು ಕ್ಷೀಣಿಸಿರುವುದು ಕಂಡು ಬಂದಿದೆ.

ಜುಲೈ 20 ರಿಂದ ಆಗಸ್ಟ್ 20 ರವರೆಗೆ 2,231ಹೊಸ ಪ್ರಕರಣಗಳು ವರದಿಯಾಗಿ ದ್ದರೆ, ಆಗಸ್ಟ್ 21 ಮತ್ತು ಸೆಪ್ಟೆಂಬರ್ 20 ರ ನಡುವೆ 1,311ಕ್ಕೆ ಇಳಿದಿದೆ.ಸೆಪ್ಟೆಂಬರ್ 21 ಮತ್ತು ಅಕ್ಟೋಬರ್ 20 ರ ನಡುವೆ ಕೇವಲ 630 ಪ್ರಕರಣಗಳು ವರದಿಯಾಗಿದ್ದು, ನವೆಂಬರ್ 20 ರವರೆಗೆ 315 ಪ್ರಕರಣಗಳು ಕಂಡು ಬಂದಿದೆ.

ಕೋವಿಡ್-19 ಮಕ್ಕಳ ಪ್ರಕರಣಗಳು ವಯಸ್ಕರಲ್ಲಿ ನೇರವಾಗಿ ಅನುಪಾತದಲ್ಲಿರುತ್ತವೆ. ಆದ್ದರಿಂದ, ಮಕ್ಕಳಲ್ಲಿ ಹೊಸ ಪ್ರಕರಣಗಳು ಕಡಿಮೆಯಾಗಿದೆ.ಮಕ್ಕಳಲ್ಲಿ ಗಮನಾರ್ಹವಾಗಿರುವ ಸೋಂಕುಗಳನ್ನೋ ನಾವು ಗಮನಿಸಿಲ್ಲ. ಯಾವುದೇ ಪ್ರಕರಣ ಗಳು ವರದಿಯಾಗಿದ್ದರೂ, ಸಾಮಾನ್ಯ ವಾಗಿ ವಯಸ್ಕ ಕುಟುಂಬದ ಸದಸ್ಯರಿಂದ ಹರಡುವ ಸೋಂಕಿನಿಂದ ಉಂಟಾಗುತ್ತದೆ. 3ನೇ ಅಲೆಯು ಮಕ್ಕಳ ಪರಿಣಾಮ ಬೀರುತ್ತದೆ ಎನ್ನಲು ಸಾಧ್ಯವಿಲ್ಲ ಎಂದು ಸರ್ಕಾರದ ತಾಂತ್ರಿಕ ಸಲಹಾ ಸಮಿತಿಯ ಸದಸ್ಯರೊಬ್ಬರುತಿಳಿಸಿದ್ದಾರೆ.

ಕೋವಿಡ್ ಮೊದಲ ಮತ್ತು ಎರಡನೇ ಅಲೆಯಲ್ಲಿ ಮಕ್ಕಳಲ್ಲಿ ಹೆಚ್ಚು ಸೋಂಕು ಹಾಗೂ ಸಾವುಗಳು ಕಂಡು ಬರಲಿಲ್ಲ. ಶಾಲೆಗಳ ಪುನರಾರಂಭ ಮಾಡಿರುವುದು ಉತ್ತಮ ನಿರ್ಧಾರವಾಗಿದೆ. ಮಕ್ಕಳಲ್ಲಿನ ಸೋಂಕು ಇತರರಿಗೆ ಹೆಚ್ಚಾಗಿ ಹರಡುವುದಿಲ್ಲ ಎಂದು ಪಶ್ಚಿಮ ಯುರೋಪ್‍ನಲ್ಲಿನ ಅಧ್ಯಯನಗಳು ತಿಳಿಸಿವೆ ಎಂದಿದ್ದಾರೆ.

ಈ ನಡುವೆ 10 ರಿಂದ 19 ವಯೋಮಾನದವರಲ್ಲಿ ಕೂಡ ಸೋಂಕು ಇಳಿಕೆಯಾಗಿರುವುದು ಕಂಡು ಬಂದಿದೆ. ಮೊದಲಿದ್ದ ಸೋಂಕು 5,107 ರಿಂದ 4,040ಕ್ಕೆ, 2,520ಕ್ಕೆ ಮತ್ತು ಇದೀಗ 1,184ಕ್ಕೆ ಇಳಿಕೆಯಾಗಿದೆ ಎಂದು ತಿಳಿದುಬಂದಿದೆ. ಪ್ರಸ್ತುತ ದೇಶದಲ್ಲಿ ಕೋವಿಡ್-19 ದೊಡ್ಡ ಸಮಸ್ಯೆಯಾಗಿಲ್ಲ. ಸೋಂಕಿನ ಗಂಭೀರತೆ ಇದೀಗ ಇಳಿಕೆಯಾಗಿದೆ. ಪ್ರಸ್ತುತ ಇರುವ ಸೋಂಕಿನಿಂದ ದೂರ ಉಳಿಯಲು ಜನರಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿದೆ.

ಮುಂಬರುವ ದಿನಗಳಲ್ಲಿ ಎಂತಹ ರೂಪಾಂತರಿ ವೈರಸ್ ಎದುರಾಗಲಿದೆ ಎಂಬುದು ತಿಳಿದಿಲ್ಲ. ಆದರೀಗ ಮಕ್ಕಳು ಹಾಗೂ ವಯಸ್ಕರಲ್ಲಿ ಯಾವುದೇ ಸಮಸ್ಯೆಗಳಿಲ್ಲ. ಇತರೆ ಯಾವುದೇ ರೋಗಗಳೂ ಮಕ್ಕಳಲ್ಲಿ ಹೆಚ್ಚಾಗಿ ಕಾಣಿಸಿಕೊಂಡಿಲ್ಲ. ಆದರೂ ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಕೂಡ ಹೆಚ್ಚಾಗದೇ ಇರುವುದು ಆತಂಕಕ್ಕೆ ಕಾರಣವಾಗಿದೆ ಎಂದು ಅವರು ತಿಳಿಸಿದ್ದಾರೆ.

Gayathri SG

Recent Posts

ಅಧಿಕಾರಿಗಳಿಂದಲೇ ಕಾಂಗ್ರೆಸ್ ಪಕ್ಷಕ್ಕೆ ಮತದಾನದ ಆರೋಪ: ಸ್ಥಳಕ್ಕೆ ಉಮೇಶ ಜಾಧವ್ ಭೇಟಿ

ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…

2 hours ago

ಅತನೂರ ಗ್ರಾಮದಲ್ಲಿ ಸರ್ವಧರ್ಮಗಳ ಆರಾಧ್ಯದೈವ ನಂದಿ ಬಸವನ ಜಾತ್ರೆಯ ಸಡಗರ

ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.

2 hours ago

ಪ್ರೀತಿಸಿ ಮದುವೆಯಾದ ಅನ್ಯಕೋಮಿನ ಜೋಡಿ: ಹಿಂದೂ ಪರ ಸಂಘಟನೆಗಳಿಂದ ಪ್ರತಿಭಟನೆ

ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ‌ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…

2 hours ago

ಮೆಲ್ಬೋರ್ನ್‌ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಹತ್ಯೆ

ಆಸ್ಟ್ರೇಲಿಯಾದ ಮೆಲ್ಬೋರ್ನ್‌ನಲ್ಲಿ  ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.

3 hours ago

ಮಾದಪ್ಪನ ಸನ್ನಿಧಿಯಲ್ಲಿ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…

3 hours ago

ಅಕ್ಷಯ ತೃತೀಯದಂದು ಬಾಲ್ಯವಿವಾಹ ನಡೆಯದಂತೆ ಕ್ರಮ

ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…

3 hours ago