ಮಕ್ಕಳಿಗೆ ಅತ್ಯುತ್ತಮ ದೈಹಿಕ ಶಿಕ್ಷಣ ಕಲಿಸಲು ಹೊಸ ವ್ಯವಸ್ಥೆ; ಅಶ್ವತ್ಥ ನಾರಾಯಣ

ಬೆಂಗಳೂರು : ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿರುವ 13 ಸರಕಾರಿ ಶಾಲೆಗಳ ಮಕ್ಕಳಿಗೆ ಅತ್ಯುತ್ತಮ ದೈಹಿಕ ಶಿಕ್ಷಣ ಕಲಿಸಲು ಒಂದು ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದ್ದು, ಇದು ಸದ್ಯದಲ್ಲೇ ಜಾರಿಗೆ ಬರಲಿದೆ ಎಂದು ಕ್ಷೇತ್ರದ ಶಾಸಕರೂ ಆಗಿರುವ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥ ನಾರಾಯಣ ಹೇಳಿದ್ದಾರೆ.

ಕ್ಷೇತ್ರದ ಪ್ಯಾಲೇಸ್ ಗುಟ್ಟಹಳ್ಳಿಯಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ಅವರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ವತಿಯಿಂದ ಸಮುದಾಯದ ಸದಸ್ಯರಿಗೆ ವಿವಿಧ ಯೋಜನೆಗಳಡಿ ಮಂಜೂರಾದ ಸಾಲ ಸೌಲಭ್ಯಗಳನ್ನು ವಿತರಿಸಿ ಮಾತನಾಡಿದರು.

ಹಲವು ಸರಕಾರಿ ಶಾಲೆಗಳಲ್ಲಿ ಮೈದಾನದ ಕೊರತೆ ಇದೆ. ಈ ಶಾಲೆಗಳ ಮಕ್ಕಳನ್ನೆಲ್ಲ ಹತ್ತಿರದ ಮೈದಾನಕ್ಕೆ ವಾಹನದಲ್ಲಿ ಕರೆದುಕೊಂಡು ಹೋಗಿ, ದೈಹಿಕ ಶಿಕ್ಷಣ ಕೊಡಲಾಗುವುದು. ನಂತರ, ಅದೇ ವಾಹನದಲ್ಲಿ ಪುನಃ ಶಾಲೆಗೆ ಸುರಕ್ಷಿತವಾಗಿ ಬಿಡಲಾಗುವುದು. ಸರಕಾರಿ ಶಾಲೆಗಳು ಅಂತಾರಾಷ್ಟ್ರೀಯ ಗುಣಮಟ್ಟವನ್ನು ಹೊಂದಿದ್ದು, ಸಂಪೂರ್ಣ ಡಿಜಿಟಲೀಕರಣ ಹೊಂದಿವೆ ಎಂದು ಅವರು ಹೇಳಿದರು.

ಅಲ್ಪಸಂಖ್ಯಾತರ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಕೊಡಲು ಸರಕಾರ ಬದ್ಧವಾಗಿದ್ದು, ಕೌಶಲ್ಯವನ್ನು ಕಲಿಸುವುದರೊಂದಿಗೆ ಉದ್ಯೋಗವನ್ನು ಕೊಡಿಸಲೂ ಸಿದ್ಧವಾಗಿದೆ. ಈ ಮಕ್ಕಳಿಗೆ ಉಚಿತವಾಗಿ ಟ್ಯಾಬ್, ಲ್ಯಾಪ್-ಟಾಪ್ ಕೊಡಲಾಗುತ್ತಿದೆ ಎಂದು ಅವರು ವಿವರಿಸಿದರು.

ಈ ಸಂದರ್ಭದಲ್ಲಿ ಸಮುದಾಯದ 45 ಸದಸ್ಯರಿಗೆ ನಿಗಮದ ಸಾಲ ಸೌಲಭ್ಯ ವಿತರಿಸಿದ ಅವರು, ಸರಕಾರವು ಮಧ್ಯವರ್ತಿಗಳ ಕಾಟವನ್ನು ತಪ್ಪಿಸಿದ್ದು, ಫಲಾನುಭವಿಗಳಿಗೆ ನೇರವಾಗಿ ಸೌಲಭ್ಯಗಳನ್ನು ತಲುಪಿಸಲಾಗುತ್ತಿದೆ. ಈ ಸಾಲದಲ್ಲಿ ಶೇ.50 ಸಬ್ಸಿಡಿ ಕೊಡಲಾಗುತ್ತಿದೆ ಎಂದರು.

ಇದರ ಜತೆಗೆ, ರಾಜಮಹಲ್ ಗುಟ್ಟಹಳ್ಳಿಯಲ್ಲಿರುವ ಸರಕಾರಿ ಆಸ್ಪತ್ರೆಯನ್ನು ಇನ್ನೊಂದು ತಿಂಗಳಲ್ಲಿ 100 ಹಾಸಿಗೆಗಳ ಮಟ್ಟಕ್ಕೆ ಏರಿಸಲಾಗುತ್ತಿದ್ದು, ಹೈಟೆಕ್ ಆಸ್ಪತ್ರೆಯನ್ನಾಗಿ ಮಾಡಲಾಗುವುದು. ಇಲ್ಲಿ ಅತ್ಯುತ್ತಮ ಪ್ರಯೋಗಾಲಯ, ಉಚಿತ ಎಕ್ಸ್-ರೇ, ಔಷಧಿ ಎಲ್ಲವೂ ಸಿಗಲಿದೆ ಎಂದು ಸಚಿವರು ತಿಳಿಸಿದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಮಲ್ಲೇಶ್ವರಂ ಮಂಡಲದ ಬಿಜೆಪಿ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಶಕೀಲ್, `ಬಿಜೆಪಿ ಸರಕಾರವು ಅಲ್ಪಸಂಖ್ಯಾತ ಸಮುದಾಯದ 14 ಜನರನ್ನು ನಾನಾ ವಿಶ್ವವಿದ್ಯಾಲಯಗಳ ಸಿಂಡಿಕೇಟ್ ಸದಸ್ಯರನ್ನಾಗಿ ಮಾಡಿದೆ. ಹಿಂದೆ ಯಾವ ಸರಕಾರವೂ ಇಂಥ ಸಹಾಯ ಮಾಡಿರಲಿಲ್ಲ. ಇವರು ಸದ್ದಿಲ್ಲದೆ ಕ್ರಾಂತಿಕಾರಕ ಕೆಲಸ ಮಾಡುತ್ತಿದ್ದು, ಅಲ್ಪಸಂಖ್ಯಾತರನ್ನು ಮೇಲೆತ್ತುತ್ತಿದ್ದಾರೆ’ ಎಂದು ಬಣ್ಣಿಸಿದರು.

ಕಾರ್ಯಕ್ರಮದಲ್ಲಿ ಕನ್ನಡ ವಿವಿ ಸಿಂಡಿಕೇಟ್ ಸದಸ್ಯ ಸಮೀವುಲ್ಲಾ ಸೇರಿದಂತೆ ಹಲವರು ಉಪಸ್ಥಿತರಿದ್ದರು.

Gayathri SG

Recent Posts

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

18 mins ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

45 mins ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

1 hour ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

1 hour ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

2 hours ago

ನಟಿ ರೂಪಾ ಅಯ್ಯರ್‌ ಗೆ ಆನ್ ಲೈನ್ ನಲ್ಲಿ ವಂಚನೆ: ಹಣ ದೋಚೋಕೆ ಟ್ರೈ ಮಾಡಿದ ಕಳ್ಳರು

ಸ್ಯಾಂಡಲ್‌ವುಡ್ ನಟಿ, ನಿರ್ದೇಶಕಿ ರೂಪಾ ಅಯ್ಯರ್‌ ಅವರಿಗೆ ಆನ್ ಲೈನ್ ಕಳ್ಳರು ಕಾಟ ಕೊಟ್ಟಿದ್ದಾರೆ. ಸಿಸಿಬಿ ಸಿಸಿಬಿ ಅಧಿಕಾರಿಗಳೆಂದು ಕಾಲ್…

2 hours ago