ಮದರಸಾಗಳಲ್ಲಿ ಶಿಕ್ಷಣ ಇಲಾಖೆ ಪಠ್ಯ ಅಳವಡಿಕೆಗೆ ಬೇಡಿಕೆ: ಸಚಿವ ಬಿ.ಸಿ.ನಾಗೇಶ್

ಬೆಂಗಳೂರು : ಶಿಕ್ಷಣ ಇಲಾಖೆಯ ಪಠ್ಯವನ್ನು ಮದರಸಾಗಳಲ್ಲಿ ಅಳವಡಿಸಲು ಪೋಷಕರು ಮನವಿ ಮಾಡಿದ್ದಾರೆ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ತಿಳಿಸಿದರು.

ವಿಧಾನಸೌಧದದಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಮದರಸಾಗಳಲ್ಲಿ ಶಿಕ್ಷಣ ಇಲಾಖೆಯ ಪಠ್ಯಕ್ರಮ ಅಳವಡಿಕೆಗೆ ಮದರಸಾಗಳಿಂದ ಬೇಡಿಕೆ ಬಂದಿಲ್ಲ.

ಆದರೆ ಪೋಷಕರು ಮದರಸಾ ಶಿಕ್ಷಣದಿಂದ ನಮ್ಮ ಮಕ್ಕಳು ಇವತ್ತಿನ ಸ್ಪರ್ಧಾತ್ಮಕ ಜಗತ್ತಿನಲ್ಲಿ ಬದುಕಲು ಆಗುವುದಿಲ್ಲ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುವುದು ಕಷ್ಟ ಆಗುತ್ತಿದೆ. ವೃತ್ತಿಪರ ಕೋರ್ಸ್ ಪಡೆದುಕೊಳ್ಳುವುದು ಕಷ್ಟ. ಬೇರೆ ಮಕ್ಕಳಿಗೆ ‌ಕೊಟ್ಟ ಹಾಗೆ ಶಿಕ್ಷಣ ಕೊಡಿ ಎಂಬ ಮನವಿ ಮಾಡಿದ್ದಾರೆ ಎಂದರು‌.

ಆದರೆ ಮದರಸಾ ಕಡೆಯಿಂದ ಹಾಗೂ ಅಲ್ಪಸಂಖ್ಯಾತ ಇಲಾಖೆಯಿಂದ ಯಾವುದೇ ಮನವಿ ಬಂದಿಲ್ಲ. ಪೋಷಕರೇನೂ ಅಧಿಕೃತವಾಗಿ ಮನವಿ ಮಾಡಿಲ್ಲ ಎಂದು ಬಿ.ಸಿ.ನಾಗೇಶ್ ಸ್ಪಷ್ಟಪಡಿಸಿದರು.

Gayathri SG

Recent Posts

ಕಲಬುರಗಿ: ಮದುವೆಗೆ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ

ಮದುವೆಗೆ ನಿರಾಕರಿಸಿದ್ದಕ್ಕೆ  ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರ ಹೊರವಲಯದ ಯಲ್ಲಾಲಿಂಗ್ ಕಾಲೋನಿಯಲ್ಲಿ ನಡೆದಿದೆ.

30 mins ago

ಮುಂದಿನ 6 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಮುಂದಿನ 6 ದಿನಗಳ ಕಾಲ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ  ನೀಡಿದೆ.

46 mins ago

ಜೈಲಿನಿಂದ ಹೊರಬಂದ ಕೇಜ್ರಿವಾಲ್​ಗೆ ಆರತಿ ಬೆಳಗಿ ಸ್ವಾಗತಿಸಿದ ಕುಟುಂಬಸ್ಥರು

ಅಕ್ರಮ ಮದ್ಯ ನೀತಿ ಪ್ರಕರಣದ ಆರೋಪದಲ್ಲಿ ಜೈಲು ಸೇರಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​​ ಅವರಿಗೆ ನಿನ್ನೆ ಸುಪ್ರೀಂ ಕೋರ್ಟ್…

1 hour ago

ಲೈಂಗಿಕ ದೌರ್ಜನ್ಯ ಆರೋಪ: ವಕೀಲ ದೇವರಾಜೇಗೌಡರನ್ನು ವಶಕ್ಕೆ ಪಡೆದ ಪೊಲೀಸರು

ಲೈಂಗಿಕ ದೌರ್ಜನ್ಯ ಆರೋಪ ಹಿನ್ನೆಲೆ ವಕೀಲ ದೇವರಾಜೇಗೌಡರನ್ನು ಹಿರಿಯೂರು ಪೊಲೀಸರು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಗುಯಿಲಾಳ್ ಟೋಲ್ ಬಳಿ …

2 hours ago

ನೂತನ ಆದಿ ಬಸವಮಂದಿರ ಮೂರ್ತಿ ಪ್ರತಿಷ್ಠಾನ ಮತ್ತು ಕಳಸಾರೋಹಣ ಕಾರ್ಯಕ್ರಮ

ಅಫಜಲಪುರ ತಾಲೂಕಿನ ಆನೂರ ಗ್ರಾಮದ ಆದಿ ಬಸವೇಶ್ವರ ನೂತನ ಕಳಸಾರೋಹಣ ಮತ್ತು ನೂತನ ಮಂದಿರ ಉದ್ಘಾಟನಾ ಕಾರ್ಯಕ್ರಮ ಹನ್ನೊಂದು ಮಠಗಳ…

2 hours ago

ಎಸ್ಎಸ್ಎಲ್ ಸಿ ಬಾಲಕಿಯ ಹತ್ಯೆ ಪ್ರಕರಣ: ಆರೋಪಿಯ ಬಂಧನ

ಎಸ್ಎಸ್ಎಲ್ ಸಿ ಬಾಲಕಿಯ ರುಂಡ ಕತ್ತರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋವಿ ಹಿಡಿದು ಕಾಡಿನಲ್ಲಿ ತಲೆಮರಿಸಿಕೊಂಡಿದ್ದ ಆರೋಪಿ ಪ್ರಕಾಶನನ್ನ ಪೊಲೀಸರು ಬಂಧಿಸಿದ್ದಾರೆ. 

2 hours ago