News Karnataka Kannada
Saturday, May 11 2024
ಬೆಂಗಳೂರು ನಗರ

ಮಲೆನಾಡು, ಕರಾವಳಿ, ಕೊಡಗಿನಲ್ಲಿ ಇಂದೂ ಮಳೆಯ ಆರ್ಭಟ; ಇನ್ನೆರಡು ದಿನ ಹಳದಿ ಅಲರ್ಟ್​ ಘೋಷಣೆ

Photo Credit :

ಮಲೆನಾಡು, ಕರಾವಳಿ, ಕೊಡಗಿನಲ್ಲಿ ಇಂದೂ ಮಳೆಯ ಆರ್ಭಟ; ಇನ್ನೆರಡು ದಿನ ಹಳದಿ ಅಲರ್ಟ್​ ಘೋಷಣೆ

ಬೆಂಗಳೂರು : ಸುಡು ಬಿಸಿಲಿನಿಂದ ಬಸವಳಿದಿದ್ದ ಭೂಮಿಗೆ ಕಳೆದ ಮೂರು ದಿನಗಳಿಂದ ಮಳೆಯ ಸಿಂಚನವಾಗುತ್ತಿದೆ. ಕರ್ನಾಟಕದ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಇಂದು ಕೂಡ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದ್ದು, ಇನ್ನು ಮೂರು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಳೆಯಿಂದ ರಾಜ್ಯದ ಹಲವು ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಏ 17ರ ನಂತರ ಮಳೆಯ ಪ್ರಮಾಣ ಕಡಿಮೆಯಾಗಲಿದ್ದು, ಬಿಸಿಲು ಹೆಚ್ಚಾಗಲಿದೆ.
ಮಲೆನಾಡು, ಕರಾವಳಿ, ಕೊಡಗಿನಲ್ಲಿ ನಿನ್ನೆ ಗುಡುಗು ಸಹಿತ ಭಾರೀ ಮಳೆಯಾಗಿದೆ. ಬೆಂಗಳೂರಿನಲ್ಲೂ ಧಾರಾಕಾರ ಮಳೆ ಸುರಿದಿದೆ. ಇಂದು ಮಲೆನಾಡು ಮಾತ್ರವಲ್ಲದೆ, ಉತ್ತರ ಕರ್ನಾಟಕ ಭಾಗದಲ್ಲೂ ಮಳೆಯಾಗಲಿದ್ದು, ಶಿವಮೊಗ್ಗ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಾಗಲಕೋಟೆ, ಬೆಳಗಾವಿ, ಧಾರವಾಡ, ಬೀದರ್, ಹಾವೇರಿ, ಕಲಬುರ್ಗಿ, ವಿಜಯಪುರ, ರಾಯಚೂರು, ಯಾದಗಿರಿ, ಬಳ್ಳಾರಿ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರಿನಲ್ಲಿ ಇಂದು ಮತ್ತು ನಾಳೆ ಹಳದಿ ಅಲರ್ಟ್​ ಘೋಷಿಸಲಾಗಿದೆ.
ರಾಜ್ಯಾದ್ಯಂತ ಮಳೆಯಿಂದ ತಾಪಮಾನ ಕುಸಿದಿದೆ. ಎರಡು ದಿನಗಳ ಕಾಲ ಹಲವು ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡಿನ‌ ಜಿಲ್ಲೆಗಳಿಗೆ ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಕೊಪ್ಪಳ ಮತ್ತು ಗದಗ ಹೊರತುಪಡಿಸಿ ಉತ್ತರ ಒಳನಾಡಿನ‌ ಎಲ್ಲ ಜಿಲ್ಲೆಗಳಿಗೆ ಇಂದು ಹಳದಿ ಅಲರ್ಟ್ ಘೋಷಣೆ ಮಾಡಲಾಗಿದೆ. ಏಪ್ರಿಲ್ 17, 18ರಂದು ಕೂಡ ಅಲ್ಲಲ್ಲಿ ತುಂತುರು ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇಂದು ಮತ್ತು ನಾಳೆ ಮಲೆನಾಡು, ಕರಾವಳಿಯಲ್ಲಿ ಮಳೆ ಹೆಚ್ಚಳವಾಗುವ ಸಾಧ್ಯತೆಯಿದ್ದು, ಬಾಗಲಕೋಟೆ, ಹುಬ್ಬಳ್ಳಿ, ಯಲ್ಲಾಪುರ, ಶಿರಸಿ, ರಿಪ್ಪನ್​ಪೇಟೆ, ಹೊಸನಗರ, ತೀರ್ಥಹಳ್ಳಿ, ಸಾಗರ, ಭದ್ರಾವತಿ, ಕೊಡಗು, ಚಿಕ್ಕಮಗಳೂರು, ಬಾಳೆ ಹೊನ್ನೂರಿನಲ್ಲಿ ನಿನ್ನೆ ಭಾರೀ ಮಳೆಯಾಗಿದೆ. ನಿನ್ನೆ ಸುರಿದ ಮಳೆಯಿಂದ ಕರ್ನಾಟಕದ ಹಲವೆಡೆ ನಾಲ್ವರು ಸಾವನ್ನಪ್ಪಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
145

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು