ಬೆಂಗಳೂರು: ಮಾಜಿ ಬಿಜೆಪಿ ಕಾರ್ಪೋರೇಟರ್ ವೇದವ್ಯಾಸ್ ಭಟ್ ಮೇಲೆ ದುಷ್ಕರ್ಮಿಗಳು ದಾಳಿ ನಡೆಸಿದ ಘಟನೆ ಸೋಮವಾರ ನಗರದ ಸಜ್ಜನ್ ರಾವ್ ಸರ್ಕಲ್ ಬಳಿ ಸೋಮವಾರ ಬೆಳಗಿನ ಜಾವ ನಡೆದಿದೆ.
ಹಿಂದಿನಿಂದಲೂ ಪತ್ರಿಕಾ ವಿತರಕರಾಗಿ ಕೆಲಸ ಮಾಡುತ್ತಿದ್ದ ಭಟ್ ಅವರು ಇಂದು ಬೆಳಗ್ಗೆ ಹುಡುಗರಿಗೆ ಮಾರ್ಗದರ್ಶನ ನೀಡಲು ತೆರಳಿದ್ದರು. ಈ ವೇಳೆ ಬೈಕ್ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಅವರ ಮೇಲೆ ಮಾರಣಾಂತಿಕವಾಗಿ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.
ಹಳೇ ವೈಷಮ್ಯವೇ ಕಾರಣ: ಈ ದಾಳಿಗೆ ಹಳೇ ವೈಷಮ್ಯವೇ ಕಾರಣ ಎನ್ನಲಾಗಿದ್ದು, ಕಾಂಗ್ರೆಸ್ ಬೆಂಬಲಿತರು ಸೋಲಿನ ಹತಾಶೆಯಿಂದ ದಾಳಿ ನಡೆಸಿದ್ದಾರೆ ಎಂದು ವೇದವ್ಯಾಸ್ ಭಟ್ ಅವರ ಸಹೋದರಿ ಆರೋಪ ಮಾಡಿದ್ದಾರೆ.
ವಿ.ವಿ.ಪುರಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.