ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಈ ನಡುವೆ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ಕೊವೀಡ್ ಲಕ್ಷಣಗಳು ಕಂಡು ಬಂದ ಹಿನ್ನೆಲೆಯಲ್ಲಿ ಕೋವಿಡ್ ಟೆಸ್ಟ್ ಮಾಡಲಾಗಿದ್ದು, ವರದಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ. ಸದ್ಯ ದೇವೇಗೌಡರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.