ಬೆಂಗಳೂರು ನಗರ

ಮಾರ್ಚ್ 28, 29 ರಂದು ನಡೆಯಲಿರುವ ಅಖಿಲ ಭಾರತ ಮಹಾಮುಷ್ಕರ!

ಸಮಾಜದಲ್ಲಿ ಸಂಪತ್ತನ್ನು ಸ್ರಷ್ಠಿಸುವ ಕಾರ್ಮಿಕ ವರ್ಗದ ಹಿತಾಸಕ್ತಿಯನ್ನು ಕಾಪಾಡಬೇಕಾದ ಕೇಂದ್ರದ ನರೇಂದ್ರ ಮೋದಿ ಸರಕಾರ ಹೆಜ್ಜೆ ಹೆಜ್ಜೆಗೂ ಕಾರ್ಪೋರೇಟ್ ಕಂಪೆನಿಗಳ ಹಿತಾಸಕ್ತಿಯನ್ನು ಕಾಪಾಡುವ ಮೂಲಕ ನವ ಉದಾರೀಕರಣ ನೀತಿಗಳನ್ನು ಆಕ್ರಮಣಕಾರಿಯಾಗಿ ಜಾರಿ ಮಾಡುತ್ತಿದೆ.
ದೇಶದ ಸಂಪತ್ತಾದ ಸಾರ್ವಜನಿಕ ಉದ್ದಿಮೆಗಳನ್ನು ಖಾಸಗೀಕರಣ ಮಾಡುವ ಮೂಲಕ ದೇಶವನ್ನೇ ಕೊಳ್ಳೆ ಹೊಡೆಯುತ್ತಿದೆ. ಇಂತಹ ಸರಕಾರದ ಜನವಿರೋಧಿ ನೀತಿಗಳನ್ನು ಸೋಲಿಸುವ ಮೂಲಕ ದೇಶ ಉಳಿಸುವ ಜೊತೆಗೆ ಜನರ ಬದುಕನ್ನು ರಕ್ಷಿಸಬೇಕಾಗಿದೆ ಎಂದು ಬ್ಯಾಂಕ್ ಅಧಿಕಾರಿಗಳ ಸಂಘಟನೆಯ ರಾಜ್ಯಾಧ್ಯಕ್ಷರಾದ ರಾಘವ ಕೆ ಯವರು ಹೇಳಿದರು.
ಮಾರ್ಚ್ 28, 29 ರಂದು ನಡೆಯಲಿರುವ ಅಖಿಲ ಭಾರತ ಮಹಾಮುಷ್ಕರದ ಸಂದೇಶವನ್ನು ಸಾರಲು ಮಂಗಳೂರು ನಗರದಲ್ಲಿ ಆಯೋಜಿಸಿದ ಪಾದಯಾತ್ರೆಯನ್ನು ಉದ್ಘಾಟಿಸುತ್ತಾ ಅವರು,ಈ ಮಾತುಗಳನ್ನು ಹೇಳಿದರು.
ಪಾದಯಾತ್ರೆಯಲ್ಲಿ ಕೇಂದ್ರ ಕಾರ್ಮಿಕ ಸಂಘಟನೆಗಳ ನಾಯಕರಾದ ಜೆ.ಬಾಲಕ್ರಷ್ಣ ಶೆಟ್ಟಿ, ಸುನಿಲ್ ಕುಮಾರ್ ಬಜಾಲ್, ಎಚ್.ವಿ.ರಾವ್, ಸೀತಾರಾಮ ಬೇರಿಂಜ, ಕರುಣಾಕರ್,ವಿ.ಕುಕ್ಯಾನ್, ಪ್ರವೀಣ್,ಯೋಗೀಶ್ ಜಪ್ಪಿನಮೊಗರು, ಜಯಂತಿ ಶೆಟ್ಟಿ, ಭಾರತಿ ಬೋಳಾರ, ಮುಸ್ತಫಾ, ನಾಗೇಶ್ ಕೋಟ್ಯಾನ್, ಜಯಲಕ್ಷ್ಮಿ ಬ್ಯಾಂಕ್ ನೌಕರರ ಸಂಘಟನೆಯ ನಾಯಕರಾದ ಫಣೀಂದ್ರ,ಸುರೇಶ್ ಹೆಗ್ಡೆ, ಸದಾಶಿವ,ಪುರುಷೋತ್ತಮ ಪೂಜಾರಿ ವಿವಿಧ ಸಂಘಟನೆಗಳ ಮುಖಂಡರಾದ ಡಾ.ಕ್ರಷ್ಣಪ್ಪ ಕೊಂಚಾಡಿ, ಸಂತೋಷ್ ಬಜಾಲ್ ಮುಂತಾದವರು ಉಪಸ್ಥಿತರಿದ್ದರು.
Sneha Gowda

Recent Posts

ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದ ಸಿಬ್ಬಂದಿ

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಪ್ರಥಮ ದರ್ಜೆ ಸಹಾಯಕ ವಿಜಯ್ ಕುಮಾರ್ ಕೆಲಸದ ವಿಚಾರವಾಗಿ ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

7 mins ago

ದುರಸ್ತಿ ಮಾಡಿ ವಾರ ಕಳೆಯುವ ಮೊದಲೇ ಕಿತ್ತು ಬಂದ ರಸ್ತೆ

ಪಟ್ಟಣದ ಬಸವಕಲ್ಯಾಣ-ಭಾಲ್ಕಿ ಮುಖ್ಯ ರಸ್ತೆ ಸಂಪೂರ್ಣ ಕೆಟ್ಟು ಹೋಗಿದೆ. ವಾರದ ಹಿಂದೆ ರಸ್ತೆ ದುರಸ್ತಿ ಕಾಮಗಾರಿ ಮಾಡಲಾಗಿದ್ದು, ವಾರ ಕಳೆಯುವ…

14 mins ago

ಬಿರುಗಾಳಿ ಸಹಿತ ಮಳೆಗೆ ಕಬ್ಬಿಣದ ಬಸವ ಮಹಾದ್ವಾರ ಕುಸಿತ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

26 mins ago

ನೂರಕ್ಕೆ ನೂರು ‘ಇಂಡಿಯಾ’ ಮೈತ್ರಿಗೆ ಅಧಿಕಾರ: ಈಶ್ವರ ಖಂಡ್ರೆ

'ದೇಶದಲ್ಲಿ ಈ ಸಲ 'ಇಂಡಿಯಾ' ಒಕ್ಕೂಟ ಅಧಿಕಾರಕ್ಕೆ ಬರುವುದು ನೂರಕ್ಕೆ ನೂರು ಖಚಿತ' ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ…

31 mins ago

ನಾನು ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದ ವಿರಾಟ್​​ ಕೊಹ್ಲಿ

ವಿರಾಟ್​​ ಕೊಹ್ಲಿ ಶೀಘ್ರದಲ್ಲೇ ಪಾಕಿಸ್ತಾನಕ್ಕೆ ಭೇಟಿ ನೀಡುತ್ತೇನೆ ಎಂದು ಹೇಳಿದ್ದಾರೆ. ಅವರು ಹೇಳಿರುವ ಆಡಿಯೋ ಸಮೇತ ದೃಶ್ಯ ವೈರಲ್​ ಆಗಿದೆ. 

45 mins ago

ಕೆಎಸ್‌ಆರ್‌ಟಿಸಿ ಬಸ್‌ನ ಕಿಟಕಿಯಲ್ಲಿ ಮಹಿಳೆಯ ತಲೆ ಸಿಕ್ಕಿಕೊಂಡು ಪರದಾಟ

ಕೆಎಸ್‌ಆರ್‌ಟಿಸಿ ಬಸ್‌ ನ ಕಿಟಕಿಯಿಂದ ಉಗುಳಲು ಹೋಗಿ ಮಹಿಳೆಯೊಬ್ಬರ ತಲೆ ಸಿಕ್ಕಿಕೊಂಡಿರುವ ಘಟನೆ ನಡೆದಿದೆ.

1 hour ago