ಮಾ.24 ರಂದು ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ರಾಜ್ಯ ಭೇಟಿಗೆ ಮುಂದಾಗಿರುವುದು ಭಾರೀ ಕುತೂಹಲ ಮೂಡಿಸಿದೆ.ಪಂಚ ರಾಜ್ಯಗಳ ಚುನಾವಣೆಯಲ್ಲಿ ಭರ್ಜರಿ ಜಯಭೇರಿ ಬಾರಿಸಿರುವ ಬಿಜೆಪಿಗೆ ಮುಂದಿನ ವರ್ಷ ಕರ್ನಾಟಕದಲ್ಲಿ ನಡೆಯುವ ಚುನಾವಣೆ ಪ್ರತಿಷ್ಠೆಯ ಕಣವಾಗಿದೆ.

ಈ ನಿಟ್ಟಿನಲ್ಲಿ ಈಗಿನಿಂದಲೇ ಚುನಾವಣಾ ತಯಾರಿಗೆ ಪಕ್ಷಗಳು ಸಿದ್ಧತೆ ಮಾಡಿಕೊಳ್ಳುತ್ತಿದೆ. ಇದರ ಭಾಗವೆಂಬಂತೆ ಇದೀಗ ಪ್ರಧಾನಿಗಳು ಮಾ.24 ರಂದು ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ಕಲಬುರಗಿಗೆ ಭೇಟಿ ನೀಡುತಿರುವುದು ವಿಶೇಷವಾಗಿದೆ. ಕಲಬುರಗಿ ಜಿಲ್ಲೆಗೇ ಯಾಕೆ ಎಂಬ ಕುತೂಹಲ ಮೂಡಿಸಿದೆ.

ಸದ್ಯದ ಮಾಹಿತಿ ಪ್ರಕಾರ ಮೋದಿ ಕೇಂದ್ರದ ಮಹತ್ವದ ಸ್ವಾಮಿತ್ವ ಯೋಜನೆಯ ಪ್ರಾಯೋಗಿಕ ಚಾಲನೆ ನೀಡಲು ಕಲಬುರಗಿಗೆ ಆಗಮಿಸಲಿದ್ದಾರೆ ಎಂದು ಮಾಹಿತಿ ಇದೆ. ಆದರೆ ಈ ಹಿಂದಿನ ಇತಿಹಾಸವನ್ನು ಗಮನಿಸಿದರೆ, ಈ ಭೇಟಿಯ ಹಿಂದೆ ಭಾರೀ ನಿರೀಕ್ಷೆ ಮತ್ತು ಲೆಕ್ಕಾಚಾರ ಅಡಗಿದೆ. ನಾಲ್ಕು ವರ್ಷಗಳ ಹಿಂದೆ ಕರ್ನಾಟಕದ ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಗಳಿಗೂ ಮುನ್ನ ಮೋದಿ ಕಲಬುರಗಿಗೆ ಭೇಟಿ ನೀಡಿದ್ದರು.

ಅಲ್ಲದೆ ಚುನಾವಣೆ ಕಹಳೆಯನ್ನು ಕೂಡ ಇಲ್ಲಿಂದಲೇ ಮೊಳಗಿಸಿದ್ದರು. ಆಗಿನ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುವ ಮೂಲಕ ಚುನಾವಣೆಗೆ ಮುಂದಾಗಿದ್ದರು. ಇದೀಗ ಮತ್ತೆ ಮೋದಿ ಈ ಬಾರಿಯೂ ಕಲಬುರಗಿಯಿಂದಲೇ ಚುನಾವಣಾ ಸಿದ್ಧತೆಯ ಕಹಳೆ ಮೊಳಗಿಸ್ತಾರಾ ಎಂಬ ಕೂತುಹಲ ಕಾಡಲಾರಂಭಿಸಿದೆ.

ಆದರೆ ಇನ್ನೂ ಕೂಡ ಕಲಬುರಗಿ ಭೇಟಿಯ ಬಗ್ಗೆ ಪ್ರಧಾನಿ ಕಚೇರಿಯಿಂದ ದೃಢವಾಗಿಲ್ಲ. ಸಧ್ಯದಲ್ಲೇ ಅಕೃತವಾಗಿ ಪ್ರಕಟಿಸುವ ಸಾಧ್ಯತೆ ಇದೆ.
ಮೋದಿ ಅವರ ಮೊದಲ ಅವಯಲ್ಲಿ ಮಲ್ಲಿಕಾರ್ಜುನ ಖರ್ಗೆ ಲೋಕಸಭೆಯ ಕಾಂಗ್ರೆಸ್ ಪಕ್ಷದ ನಾಯಕರಾಗಿದ್ದರು. 2019ರ ಚುನಾವಣೆಯಲ್ಲಿ ಕಲಬುರಗಿಯಲ್ಲಿ ಖರ್ಗೆ ಅವರನ್ನು ಸೋಲಿಸಲೇಬೇಕೆಂದು ಬಿಜೆಪಿ ಹೈಕಮಾಂಡ್ ಪಣ ತೊಟ್ಟಿತ್ತು.

ಈ ಕಾರಣಕ್ಕೆ ಕಾಂಗ್ರೆಸ್ ಶಾಸಕರಾಗಿದ್ದ ಉಮೇಶ್ ಜಾಧವ್ ಅವರು ಬಿಜೆಪಿಗೆ ಸೇರ್ಪಡೆಯಾಗಿದ್ದರು. ಖರ್ಗೆ ವಿರುದ್ಧ ಸ್ರ್ಪಧಿಸಿದ್ದ ಜಾಧವ್ ಅಂತಿಮವಾಗಿ ಗೆಲುವಿನ ನಗೆ ಬೀರಿದ್ದರು.

Swathi MG

Recent Posts

ಪತ್ನಿಯ ಗುಪ್ತಾಂಗವನ್ನು ಮೊಳೆಗಳಿಂದ ವಿರೂಪಗೊಳಿಸಿ,ಬೀಗ ಹಾಕಿದ ಕ್ರೂರ ಪತಿ

ಪುಣೆಯಲ್ಲಿ ಭೀಕರ ಘಟನೆಯೊಂದರಲ್ಲಿ, ವ್ಯಕ್ತಿಯೊಬ್ಬ ತನ್ನ ಪತ್ನಿಯ ಜನನಾಂಗವನ್ನು ಕಬ್ಬಿಣದ ಮೊಳೆಗಳಿಂದ ವಿರೂಪಗೊಳಿಸಿದ್ದಾನೆ ಮತ್ತು ಆಕೆಯ ಮೇಲೆ ಸಂದೇಹ ವ್ಯಕ್ತಪಡಿಸಿದ…

12 mins ago

ಬೀದರ್: ಕಾರ್ಮಿಕರ ಮಕ್ಕಳಿಗೆ ‘ಕೂಸಿನ ಮನೆ’ ಆಸರೆ

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ (ನರೇಗಾ) ಯೋಜನೆಯಡಿ ಮಹಿಳಾ ಕಾರ್ಮಿಕರ ಮಕ್ಕಳಿಗೆ ಕೂಸಿನ ಮನೆ ಆಸರೆಯಾಗಿದೆ.

19 mins ago

ಬಿಜೆಪಿ ಮುಖಂಡ ಅರೆಸ್ಟ್: ರಾತ್ರೋರಾತ್ರಿ ಠಾಣೆಯಲ್ಲಿ ಧರಣಿ ನಡೆಸಿದ ಶಾಸಕ ಹರೀಶ್ ಪೂಂಜಾ

ಅಕ್ರಮವಾಗಿ ಕಲ್ಲುಕೋರೆ ಗಣಗಾರಿಕೆ ನಡೆಸುತ್ತಿದ್ದಾರೆ ಎಂಬ ಆರೋಪದ ಮೇಲೆ ಬೆಳ್ತಂಗಡಿ ಪೊಲೀಸರು ಬಿಜೆಪಿ ಯುವಮೋರ್ಚಾ ಮುಖಂಡ ಶಶಿರಾಜ್ ಶೆಟ್ಟಿಯನ್ನು ಅರೆಸ್ಟ್…

37 mins ago

ತಾಯಿ ಎದುರೇ ಅಪ್ರಾಪ್ತ ಮಗಳ ಮೇಲೆ ಸಾಮೂಹಿಕ ಅತ್ಯಾಚಾರ

ತಾಯಿ ಎದುರೇ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಬಿಹಾರದಲ್ಲಿ ನಡೆದಿದೆ. ಪಾಟ್ನಾದ ನೌಬತ್‌ಪುರ ಪ್ರದೇಶದಲ್ಲಿ ಚಲಿಸುತ್ತಿದ್ದ…

42 mins ago

ರಘುಪತಿ ಭಟ್ ಆರೋಪಕ್ಕೆ ಡಾ. ಧನಂಜಯ ಸರ್ಜಿ ತಿರುಗೇಟು

ಶಿವಮೊಗ್ಗ ಹರ್ಷಾ ಹತ್ಯೆ ವೇಳೆ ಕಮ್ಯುನಿಸ್ಟರ ಜೊತೆ ಸರ್ಜಿ ಪೌಂಡೇಷನ್ ಶಾಂತಿ ನಡಿಗೆ ಆರೋಪ ವಿಚಾರಕ್ಕೆ ಸಂಬಂಧಿಸಿದಂತೆ ನೈರುತ್ಯ ಪದವೀಧರ…

57 mins ago

ಕುಡಿಯುವ ನೀರಿನ ಸಮಸ್ಯೆ: ಕಲುಷಿತ ನೀರು ಸೇವಿಸಿ 114 ಮಂದಿಗೆ ಕಾಲರಾ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿಧಾನಸಭೆ ಕ್ಷೇತ್ರವಾದ ವರುಣದ ತಗಡೂರು ಗ್ರಾಮದಲ್ಲಿ ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಇಲ್ಲದೆ ಅಲ್ಲಿನ ಜನ…

1 hour ago