ಮುಂದಿನ ಮೂರು ದಿನ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ಮುಂದಿನ ಮೂರು ದಿನಗಳ ಕಾಲ ರಾಜ್ಯದ ಬಹುತೇಕ ಭಾಗಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ.

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಉಂಟಾಗುವ ಸುಳಿವು ಕಂಡುಬರುತ್ತಿದೆ. ಹೀಗಾಗಿ ರಾಜ್ಯದ ದಕ್ಷಿಣ ಒಳನಾಡಿನ ಹಲವು ಭಾಗಗಳಲ್ಲಿ ಮಳೆ ಮುಂದುವರೆಯಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಭಾನುವಾರದವರೆಗೂ ಮುಂಗಾರು ಪೂರ್ವಮಳೆ ಮುಂದುವರೆಯಲಿದ್ದು, ಗುಡುಗು, ಸಿಡಿಲು, ಮಿಂಚಿನಿಂದ ಕೂಡಿದ ಮಳೆ ಚದುರಿದಂತೆ ಆಗುವ ಲಕ್ಷಣಗಳು ಗೋಚರಿಸುತ್ತಿವೆ.

ಇಂದು ಮತ್ತೆ ನಾಳೆ ಕಲ್ಯಾಣ ಕರ್ನಾಟಕ ಸೇರಿದಂತೆ ಉತ್ತರ ಒಳನಾಡಿನಲ್ಲಿ ಬಹಳಷ್ಟು ಕಡೆ ಚದುರಿದಂತೆ ಮಳೆಯಾಗುವ ಮುನ್ಸೂಚನೆಗಳಿವೆ. ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಕೆಲವೆಡೆ ವ್ಯಾಪಕ ಮಳೆಯಾದರೆ, ಹಲವು ಭಾಗಗಳಲ್ಲಿ ಚದುರಿದಂತೆ ಅಲ್ಲಲ್ಲಿ ಸಾಧಾರಣ ಮಳೆ ಬೀಳಲಿದೆ ಎಂದು ತಿಳಿಸಿದ್ದಾರೆ.

Swathi MG

Recent Posts

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

10 mins ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

15 mins ago

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

27 mins ago

ಸರಣಿ ಅಪಘಾತ: ಎರ್ಟಿಗಾ ಕಾರು ಸಂಪೂರ್ಣ ‌ನಜ್ಜುಗುಜ್ಜು

ಭೀಕರ ಸರಣಿ ಅಪಘಾತವು ಬೆಳಗಿನ ಜಾವ 4 ಗಂಟೆ ಸಮಯದಲ್ಲಿ ನರಗುಂದ ತಾಲೂಕಿನ ಭೈರನಹಟ್ಟಿ ಗ್ರಾಮದ ಬಳಿ ನಡೆದಿದೆ.

31 mins ago

ಆರ್​ಸಿಬಿ ಪ್ಲೇ ಆಫ್​ಗೆ ಎಂಟ್ರಿ : ಅದೃಷ್ಟ ತಂದ ಅಶ್ವಿನಿ ಪುನೀತ್ ರಾಜ್​ಕುಮಾರ್ ಎಂಬ ಪೋಸ್ಟ್ ವೈರಲ್‌

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್​ವುಡ್​ ನಟ ದಿವಂಗತ ಪುನೀತ್ ರಾಜ್​ಕುಮಾರ್​ ಅವರ ಪತ್ನಿ ಅಶ್ವಿನಿಯವರನ್ನು…

1 hour ago

ಮೋದಿ ಪಾತ್ರದಲ್ಲಿ ‘ಬಾಹುಬಲಿ’ ಖ್ಯಾತಿಯ ನಟ ಸತ್ಯರಾಜ್

ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…

1 hour ago