ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಭಾಗದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ.
ಶನಿವಾರ ಕೂಡ ಕರಾವಳಿ ಭಾಗದಲ್ಲಿ ಸಾಧಾರಣದಿಂದ ಭಾರೀ ಮಳೆಯಾಗಿದೆ. ಮುಂದಿನ 24 ಗಂಟೆಗಳಲ್ಲಿ ಚಾಮರಾಜನಗರ, ರಾಮನಗರ, ಚಿಕ್ಕಬಳ್ಳಾಪುರ, ಬೆಂಗಳೂರು ನಗರ, ಗ್ರಾಮಾಂತರ, ಮೈಸೂರು, ಮಂಡ್ಯ ಮತ್ತು ಕೋಲಾರ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕಳೆದ ಎರಡು ವಾರಗಳಿಂದ ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದೆ. ಪ್ರವಾಹ ಇಳಿಮುಖವಾಗಿದ್ದು, ಮತ್ತೆ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.