ಬೆಂಗಳೂರು: ಕಾಂಗ್ರೆಸ್ ಪಕ್ಷದಲ್ಲಿ ಹಿರಿಯ ನಾಯಕರೆಂದೇ ಗುರುತಿಸಿಕೊಂಡಿದ್ದ ಖ್ಯಾತ ನಟ ಮುಖ್ಯಮಂತ್ರಿ ಚಂದ್ರು ನಾಳೆ ಅಧಿಕೃತವಾಗಿ ಅಮ್ ಆದ್ಮಿ ಪಕ್ಷವನ್ನು ಸೇರ್ಪಡೆಗೊಳ್ಳಲಿದ್ದಾರೆ.
ಈ ಕುರಿತಂತೆ ಎಎಪಿಯಿಂದ ಮಾಹಿತಿ ಬಿಡುಗಡೆ ಮಾಡಿದ್ದು, ನಾಡಿನ ಸಜ್ಜನ ಗಣ್ಯರ ಆಮ್ ಆದ್ಮಿ ಪಾರ್ಟಿ ಸೇರ್ಪಡೆ ಪರ್ವ ಮುಂದುವರಿದಿದ್ದು, ಈಗ ಖ್ಯಾತ ನಟ ಹಾಗೂ ವಿಧಾನಸಭೆ, ವಿಧಾನ ಪರಿಷತ್ ಮಾಜಿ ಸದಸ್ಯ ಮುಖ್ಯಮಂತ್ರಿ ಚಂದ್ರು ಆಮ್ ಆದ್ಮಿ ಪಾರ್ಟಿ ಸೇರ್ಪಡೆಯಾಗುತ್ತಿದ್ದಾರೆ ಎಂಬುದಾಗಿ ತಿಳಿಸಿದೆ.
ನಾಳೆ ಬೆಳಿಗ್ಗೆ 11.30ಕ್ಕೆ ಕರ್ನಾಟಕ ಎಎಪಿ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಅವರ ಸಮ್ಮುಖದಲ್ಲಿ, ಬೆಂಗಳೂರಿನ ಪರಾಗ್ ಹೋಟೆಲ್ ನಲ್ಲಿ ನಡೆಯಲಿರುವ ಸರಳ ಕಾರ್ಯಕ್ರಮದಲ್ಲಿ ನಟ ಮುಖ್ಯಮಂತ್ರಿ ಚಂದ್ರು ಅವರು ಎಎಪಿ ಪಕ್ಷವನ್ನು ಅಧಿಕೃತವಾಗಿ ಸೇರ್ಪಡೆಗೊಳ್ಳಲಿದ್ದಾರೆ.
ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…
ಐಪಿಎಲ್ 2024ರ 66ನೇ ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಹೈದರಾಬಾದ್ನಲ್ಲಿ ಸನ್ರೈಸರ್ಸ್ ತಂಡ ಗುಜರಾತ್ ತಂಡವನ್ನು ಎದುರಿಸಬೇಕಿತ್ತು. ಆದರೆ, ಟಾಸ್ಗೂ ಮುನ್ನವೇ…
ಕೇಂದ್ರ ಸರ್ಕಾರವು 41 ಅಗತ್ಯ ಔಷಧಗಳು ಹಾಗೂ ಹೃದಯ ರಕ್ತನಾಳದ ಕಾಯಿಲೆ, ಸಕ್ಕರೆ ಕಾಯಿಲೆ ಇರುವವರು ಬಳಸುವ 6 ಫಾರ್ಮುಲೇಷನ್ಗಳ…
ಆಡಳಿತ ನಾಯಕರ ನಿರ್ಲಕ್ಷ್ಯದಿಂದ ಬೇಸತ್ತು ಸ್ವತಃ ಮಹಿಳೆಯರೇ ಸೇರಿ ತೆಂಗಿನ ಗರಿಯ ಮೂಲಕ ಬಸ್ ನಿಲ್ದಾಣ ನಿರ್ಮಿಸಿ ಘಟನೆ ಉತ್ತರ…
ಕೇರಳದ ಸರಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಇಂದು 4 ವರ್ಷದ ಬಾಲಕಿಯೊಬ್ಬಳಿಗೆ ಕೈ ಬೆರಳಿಗೆ ಶಸ್ತ್ರ ಚಿಕಿತ್ಸೆ ಮಾಡುವ ಬದಲು…
ತಮಿಳುನಾಡಿನ ಖಾಸಗಿ ಟಿವಿ ಚಾನೆಲ್ನ ನಿರೂಪಕಿ, ಚೆನ್ನೈನ ಪ್ರಮುಖ ಅಮ್ಮನ್ ದೇವಸ್ಥಾನಗಳಲ್ಲಿ ಒಂದಾಗಿರುವ ಕಾಳಿಕಾಂಪಲ್ ದೇವಸ್ಥಾನದ ಅರ್ಚಕ ಕಾರ್ತಿಕ್ ಮುನಿಸ್ವಾಮಿ…