ಬೆಂಗಳೂರು ನಗರ

ಮುಸ್ಲಿಂ ಹೆಣ್ಮಕ್ಕಳು ತಲೆ ಮೇಲೆ ಬಟ್ಟೆ ಹಾಕಿದ್ರೆ ತಪ್ಪೇನು?: ಸಿದ್ಧರಾಮಯ್ಯ

ಬೆಂಗಳೂರು (ಮಾ. 25) : ಶಾಲಾ ಕಾಲೇಜುಗಳಲ್ಲಿ ಹಿಜಾಬ್  ಧರಿಸುವುದಕ್ಕೆ ಅವಕಾಶ ಇಲ್ಲ ಎಂದು ಕರ್ನಾಟಕ ಹೈಕೋರ್ಟ್​ ಬಹುಮತದ ತೀರ್ಪು ನೀಡಿದ್ದರ ಹೊರತಾಗಿಯೂ  ಬೇರೆ ಮಾರ್ಗದ ಮೂಲಕ ಹಿಜಾಬ್ ಗೆ ಅವಕಾಶ ಒದಗಿಸಿಕೊಡುವ ಪ್ರಯತ್ನಗಳು ನಡೆದಿವೆ.

ಮಾಜಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯಅವರನ್ನು ಮುಸ್ಲಿಂ ಮುಖಂಡರು ಭೇಟಿ ಮಾಡಿದ ಬಳಿಕ ಹಿಜಾಬ್ ಪರವಾಗಿ ಬ್ಯಾಟಿಂಗ್ ಮಾಡಲು ಆರಂಭಿಸಿದ್ದಾರೆ.

ಗುರುವಾರ ಕಲಾಪದಲ್ಲಿ ಈ ಬಗ್ಗೆ ಮಾತನಾಡಿದ್ದ ಸಿದ್ಧರಾಮಯ್ಯ, ಶುಕ್ರವಾರ ಮೈಸೂರಿನಲ್ಲಿ ಈ ಬಗ್ಗೆ ಮಾತನಾಡುತ್ತಾ ಹಿಂದೂ ಹೆಣ್ಮಕ್ಕಳು  ಹಾಗೂ ಸ್ವಾಮೀಜಿಗಳು ತಲೆ ಮೇಲೆ ಬಟ್ಟೆ ಹಾಕಿಕೊಳ್ತಾರೆ, ಅದೇ ರೀತಿ ಮುಸ್ಲಿಂ ಹೆಣ್ಣು ಮಕ್ಕಳು ಹಾಕಿಕೊಂಡರೇ ನಿಮಗೇನು ಸಮಸ್ಯೆ ಎಂದು ಸರ್ಕಾರವನ್ನು ಪ್ರಶ್ನಿಸಿದ್ದಾರೆ. ಸಿದ್ದರಾಮಯ್ಯ ಅವರ ವಿವಾದಾತ್ಮಕ ಹೇಳಿಕೆಗೆ ಈಗಾಗಲೇ ಪರ ವಿರೋಧ ಚರ್ಚೆಗಳು ಆರಂಭವಾಗಿದೆ.

ಸೋಮವಾರದಿಂದ ಎಸ್ಸೆಸೆಲ್ಸಿ ಪರೀಕ್ಷೆಗಳು ಆರಂಭವಾಗಲಿದೆ. ಮುಸ್ಲಿಂ ಹೆಣ್ಣುಮಕ್ಕಳಿಗೆ ಹಿಜಾಬ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಬೇಕು. ಈ ಬಗ್ಗೆ ಸದನದಲ್ಲಿ ಮಾತನಾಡುವಂತೆ ಮುಸ್ಲಿಂ ಮುಖಂಡರುಗಳು ಬುಧವಾರ ರಾತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ್ದರು. ಅದರಂತೆ ಗುರುವಾರ ವಿಧಾನಸಭೆಯಲ್ಲಿ ಮಾತನಾಡಿದ್ದ ಸಿದ್ಧರಾಮಯ್ಯ, ಹಿಜಾಬ್ ಇಲ್ಲದೇ ಇದ್ದಲ್ಲಿ ಕನಿಷ್ಠ ದುಪ್ಪಟ್ಟಾ ಆದ್ರೂ ಧರಿಸಿ ಪರೀಕ್ಷೆ ಬರೆಯಲು ಅವಕಾಶ ನೀಡಿ ಎಂದಿದ್ದರು.

Gayathri SG

Recent Posts

40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ: ಡಿ.ಕೆ.ಶಿವಕುಮಾರ್

ಉತ್ತರ ಪ್ರದೇಶದಲ್ಲಿ 40 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಇಂಡಿಯಾ ಮೈತ್ರಿಕೂಟ ಗೆಲ್ಲಲಿದೆ. ದೇಶದೆಲ್ಲೆಡೆ ಕಾಂಗ್ರೆಸ್ ಪಕ್ಷ ಹಾಗೂ ಇಂಡಿಯಾ ಮೈತ್ರಿಕೂಟದ…

6 mins ago

ಕೇಜ್ರಿವಾಲ್ ನಿವಾಸದಲ್ಲಿ ಸ್ವಾತಿ ಮಲಿವಾಲ್ ಜಗಳದ ವಿಡಿಯೋ ತುಣುಕು ವೈರಲ್

ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರ ಸಹಾಯಕ ಬಿಭವ್ ಕುಮಾರ್ ಅವರು ನಗರದ ಸಿವಿಲ್ ಲೈನ್ಸ್‌ನಲ್ಲಿರುವ ದೆಹಲಿ…

16 mins ago

ಕೇಜ್ರಿವಾಲ್‌ ನಾಚಿಕೆಯಿಲ್ಲದೇ ಆರೋಪಿ ಬಿಭವ್‌ ಕುಮಾರ್‌ ಜೊತೆ ತಿರುಗಾಟ: ನಿರ್ಮಲಾ ಸೀತಾರಾಮನ್‌

ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲಿನ ಹಲ್ಲೆಯನ್ನು ಖಂಡಿಸಿ ಮಾತನಾಡದ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ವಿರುದ್ಧ ಕೇಂದ್ರ ಹಣಕಾಸು ಸಚಿವೆ…

17 mins ago

ಈಜಲು ಹೋಗಿ‌ದ್ದ ಮೂವರು ನೀರುಪಾಲು: 5 ಜನ ಪ್ರಾಣಾಪಾಯದಿಂದ ಪಾರು

ಈಜಲು ಹೋಗಿ‌ದ್ದ ಮೂವರು ನೀರುಪಾಲಾಗಿರುವ ಘಟನೆ ರಾಮನಗರ ತಾಲೂಕಿನ ಅಚ್ಚಲು ಗ್ರಾಮದ ಬಳಿ ನಡೆದಿದೆ.

40 mins ago

“ಪಟ್ಲ ಸಂಭ್ರಮ” ಯಶಸ್ವಿಗೊಳಿಸಲು ಪಟ್ಲ ಸತೀಶ್ ಶೆಟ್ಟಿ ಕರೆ

ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ "ಪಟ್ಲ ಸಂಭ್ರಮ" ನಮ್ಮೆಲ್ಲರ ಮನೆಯ ಕಾರ್ಯಕ್ರಮ. ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಪಟ್ಲ…

50 mins ago

ಮಂಗಳೂರು: ಕರ್ತವ್ಯದಲ್ಲಿದ್ದ ವಾಹನದ ಬಗ್ಗೆ ಸುಳ್ಳು ಸಂದೇಶ ರವಾನಿಸಿದ ಸಾರ್ವಜನಿಕ

ಕಳೆದ ದಿನ (ಮೇ 16) ಸಂಜೆ ಮಂಗಳೂರು ನಗರದ ಕುಂಟಿಕಾನ ಬಳಿ ಕರ್ತವ್ಯದಲ್ಲಿದ್ದ ಕೆಎ-19-ಜಿ-1023 ನೊಂದಣೆ ಸಂಖ್ಯೆಯ ಹೆದ್ದಾರಿ ಗಸ್ತು…

55 mins ago