ಮೇಕೆದಾಟು ಯೋಜನೆಗೆ ತ್ವರಿತ ಅನುಮೋದನೆ ಪಡೆದು ಯೋಜನೆಗೆ ಚಾಲನೆ ನೀಡಲು ಕ್ರಮ: ಬೊಮ್ಮಾಯಿ

ಬೆಂಗಳೂರು: ಮೇಕೆದಾಟು ಯೋಜನೆಗೆ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರ ಹಾಗೂ ಕೇಂದ್ರ ಪರಿಸರ ಸಚಿವಾಲಯದಿಂದ ತ್ವರಿತವಾಗಿ ಅನುಮೋದನೆ ಪಡೆದುಕೊಂಡು ಯೋಜನೆಗೆ ಚಾಲನೆ ನೀಡಲು ಕ್ರಮ ವಹಿಸಲು ಇಂದಿನ ವಿಧಾನ‌ ಮಂಡಲ ಉಭಯ ಸದನಗಳ ಸಭಾ ನಾಯಕರ ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರು ಅಂತರ ರಾಜ್ಯ ಜಲವಿವಾದಗಳ ಕುರಿತಂತೆ ಉಭಯ ಸದನಗಳ ಸಭಾ ನಾಯಕರ ಜೊತೆ ಸಭೆ ನಡೆಸಿದ ನಂತರ ಮಾಧ್ಯಮದವರಿಗೆ ಈ ವಿಷಯ ತಿಳಿಸಿದರು.

ಕಾವೇರಿ ಜಲನಿರ್ವಹಣಾ ಪ್ರಾಧಿಕಾರದ ಸಭೆಗಳಲ್ಲಿ ಮೇಕೆದಾಟು ಯೋಜನೆಯ ಕುರಿತು ವಿಸ್ತೃತ ಚರ್ಚೆಯಾಗಿದೆ. ಈ ಕುರಿತು ನಡಾವಳಿಗಳಲ್ಲಿ ದಾಖಲಿಸದೆ ಇರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಕೂಡಲೇ ಜಲಶಕ್ತಿ ಸಚಿವರು ಹಾಗೂ ಪ್ರಾಧಿಕಾರದವರೊಂದಿಗೆ ಚರ್ಚಿಸಿ, ನಡಾವಳಿಗಳಲ್ಲಿ ಚರ್ಚೆಯ ಅಂಶಗಳನ್ನು ದಾಖಲಿಸುವ ಕುರಿತು ಕ್ರಮ ವಹಿಸಲಾಗುವುದು ಹಾಗೂ ಮುಂದಿನ ಸಭೆಯಲ್ಲಿ ಯೋಜನೆಗೆ ಅನುಮೋದನೆ ನೀಡಲು ಹಾಗೂ ಪರಿಸರ ಸಚಿವಾಲಯದ ತೀರುವಳಿ ಪಡೆಯಲು ಕ್ರಮ ವಹಿಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಮುಂದಿನ ವಾರ ಜಲಸಂಪನ್ಮೂಲ ಸಚಿವರು ದೆಹಲಿಗೆ ತೆರಳಲಿದ್ದು, ಅಧಿವೇಶನ ಮುಗಿದ ತಕ್ಷಣ ತಾವು ಸ್ವತಃ ದಿಲ್ಲಿಗೆ ತೆರಳಿ ಕೇಂದ್ರ ಸಚಿವರೊಂದಿಗೆ ಈ ಬಗ್ಗೆ ಚರ್ಚಿಸುತ್ತೇನೆ. ಮತ್ತೆ ಅಗತ್ಯವಿದ್ದರೆ ಸರ್ವಪಕ್ಷಗಳ ನಿಯೋಗವನ್ನು‌ ಹೊಸದಿಲ್ಲಿಗೆ ಕರೆದೊಯ್ಯಲಾಗುವುದು ಎಂದು ಅವರು ಹೇಳಿದರು.

ಮಹಾದಾಯಿ ಯೋಜನೆಯಲ್ಲಿ ಈಗಾಗಲೇ ರಾಜ್ಯಕ್ಕೆ ಹಂಚಿಕೆಯಾಗಿರುವ ನೀರಿನ ಬಳಕೆಗಾಗಿ ಯೋಜನೆ ಅನುಷ್ಠಾನಕ್ಕೆ ಪರಿಸರ ಇಲಾಖೆಯ ತೀರುವಳಿ ಪಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಕೃಷ್ಣಾ ಮೇಲ್ದಂಡೆ ಯೋಜನೆ ಹಂತ 3ರ ಕುರಿತು ಕೇಂದ್ರ ಸರಕಾರ ಇನ್ನೂ ಗಜೆಟ್ ಅಧಿಸೂಚನೆ ಹೊರಡಿಸಿಲ್ಲ. ಇದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟಿನಲ್ಲಿ ರಾಜ್ಯ ಸರಕಾರ ಸಲ್ಲಿಸಿದ ಮಧ್ಯಂತರ ಅರ್ಜಿ ವಿಚಾರಣೆಯ ಪೀಠದಿಂದ ಇಬ್ಬರು ನ್ಯಾಯಾಧೀಶರು ಹಿಂದೆ ಸರಿದಿದ್ದಾರೆ. ಹೊಸ ನ್ಯಾಯಾಧೀಶರನ್ನು ನೇಮಕ ಮಾಡುವಂತೆ ಸುಪ್ರೀಂ ಕೋರ್ಟಿನ ಮುಖ್ಯ ನ್ಯಾಯಾಧೀಶರಿಗೆ ಮನವಿ ಸಲ್ಲಿಸಲಾಗುವುದು ಎಂದು ತಿಳಿಸಿದರು

ಭಾರತ ಸರಕಾರದ ನದಿ ಜೋಡಣೆ ಯೋಜನೆಗೆ ಸಂಬಂಧಿಸಿದಂತೆ, ರಾಜ್ಯಕ್ಕೆ ಹಂಚಿಕೆಯಾಗುವ ನೀರಿನ ಪ್ರಮಾಣವನ್ನು ಸ್ಪಷ್ಟ ಪಡಿಸುವಂತೆ ಕೇಂದ್ರವನ್ನು ಕೋರಲಾಗಿದೆ. ಅಲ್ಲದೆ ಈ ಯೋಜನೆಯ ತಾಂತ್ರಿಕ ವರದಿಯ ಮಾಹಿತಿಯನ್ನು ಒದಗಿಸುವಂತೆ ವಿರೋಧ ಪಕ್ಷಗಳು ಕೋರಿದ್ದು, ವರದಿ ಲಭ್ಯವಾದ ಕೂಡಲೇ ಒದಗಿಸಲಾಗುವುದು ಎಂದು ತಿಳಿಸಿದರು.

ಈ ಸಭೆಯಲ್ಲಿ ಜಲ ಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ, ಪ್ರತಿ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ಪ್ರತಿ ಪಕ್ಷದ ನಾಯಕ ಬಿ.ಕೆ. ಹರಿಪ್ರಸಾದ, ಕಾಂಗ್ರೆಸ್ ಮುಖಂಡರಾದ ಎಚ್.ಕೆ. ಪಾಟೀಲ್, ಡಿ.ಕೆ. ಶಿವಕುಮಾರ್, ಎಂ.ಬಿ. ಪಾಟೀಲ್, ಜೆಡಿಎಸ್ ಪಕ್ಷದ ಮುಖಂಡರಾದ ಬಂಡೆಪ್ಪ ಕಾಶೆಂಪೂರ, ಕಾನೂನು ತಜ್ಞರು ಮತ್ತು ಇತರರು ಭಾಗವಹಿಸಿದ್ದರು.

Sneha Gowda

Recent Posts

ಗೀತಾಂಜಲಿ ಸಿಲ್ಕ್, ಶಾಂತಿಸಾಗರ್ ಹೊಟೇಲ್‌ ಸಂಸ್ಥಾಪಕ ನೀರೆ ಬೈಲೂರು ಗೋವಿಂದ ನಾಯಕ್ ನಿಧನ

ಉಡುಪಿಯ ಪ್ರತಿಷ್ಠಿತ ಜವಳಿ ಮಳಿಗೆ ‘ಗೀತಾಂಜಲಿ ಸಿಲ್ಕ್’ ಮತ್ತು ಶಾಂತಿಸಾಗರ್ ಹೊಟೇಲ್‌ನ ಸಂಸ್ಥಾಪಕರಾದ ನೀರೆ ಬೈಲೂರು ಗೋವಿಂದ ನಾಯಕ್ (89)…

10 mins ago

ಸ್ಥಳೀಯ ವಾಹನಗಳಿಗೆ ಟೋಲ್ ಕಡಿತ: ಸ್ಥಳೀಯರಿಂದ ಸಾಸ್ತಾನ ಟೋಲ್ ಗೇಟ್ ಗೆ ಮುತ್ತಿಗೆ

ಕಳೆದ ಹಲವು ದಿನಗಳಿಂದ ಸ್ಥಳೀಯ ವಾಹನಗಳಿಗೆ ಫಾಸ್ಟ್ ಟ್ಯಾಗ್ ನಲ್ಲಿ ಶುಲ್ಕ ಕಡಿತವಾಗುತ್ತಿರುವುದನ್ನು ವಿರೋಧಿಸಿ ಸ್ಥಳೀಯರು ಸಾಸ್ತಾನ ಟೋಲ್ ಗೇಟ್…

26 mins ago

ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ : ತುರ್ತು ಭೂ ಸ್ಪರ್ಶ

ಕೆಂಪೇಗೌಡ ವಿಮಾನ ನಿಲ್ದಾಣದಿಂದ ಕೇರಳದ ಕೊಚ್ಚಿಗೆ ಹೊರಟಿದ್ದ ವಿಮಾನದ ಎಂಜಿನ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಪರಿಣಾಮ ಏರ್ ಇಂಡಿಯಾ ವಿಮಾನವು…

38 mins ago

ಅಕ್ರಮ ಕಲ್ಲು ಗಣಿಗಾರಿಕೆ ಆರೋಪ ಬಿಜೆಪಿ ಮುಖಂಡನ ಬಂಧನ : ಠಾಣೆಗೆ ಹರೀಶ್ ಪೂಂಜ ಮುತ್ತಿಗೆ

ಮೇಲಂತಬೆಟ್ಟು ಅಕ್ರಮ ಕೋರೆಗೆ ತಹಶೀಲ್ದಾರ್ ನೇತೃತ್ವದಲ್ಲಿ ದಾಳಿ ನಡೆಸಿದ್ದು, ಶಾಸಕ ಹರೀಶ್ ಪೂಂಜ ಆಪ್ತ ಬಿಜೆಪಿ ಯುವ ಮೋರ್ಚಾ ಮುಖಂಡ…

1 hour ago

ರಾತ್ರಿ 1:30 ಆದರೂ ನಿಲ್ಲದ ರೆಡ್​ ಆರ್ಮಿ ಹರ್ಷ; ವಿಡಿಯೋ ಮಾಡಿ ಶೇರ್​ ಮಾಡಿದ ಕೊಹ್ಲಿ

ರಾಯಲ್ ಚಾಲೆಂಜರ್ಸ್ ಬೆಂಗಳೂರು ಐಪಿಎಲ್ 2024ರಲ್ಲಿ ಅದ್ಭುತವನ್ನೇ ಮಾಡಿದೆ. ಸತತ ಪಂದ್ಯಗಳಲ್ಲಿ ಸೋತು ಒಂದು ಹಂತದಲ್ಲಿ ಪಾಯಿಂಟ್ ಪಟ್ಟಿಯಲ್ಲಿ ಕೊನೆಯ…

1 hour ago

ಪ್ರಜ್ವಲ್ ರೇವಣ್ಣ ವಿರುದ್ಧ ಅರೆಸ್ಟ್ ವಾರೆಂಟ್

ಅತ್ಯಾಚಾರ ಮತ್ತು ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಹಾಸನ ಸಂಸದ ಪ್ರಜ್ವಲ್ ರೇವಣ್ಣ ತಲೆಮರೆಸಿಕೊಂಡಿದ್ದಾರೆ. ಅವರ ವಿರುದ್ಧ ಶನಿವಾರ ಅರೆಸ್ಟ್ ವಾರಂಟ್…

1 hour ago