ಬೆಂಗಳೂರು : ಮೇ. 16 ರಿಂದ ಶೈಕ್ಷಣಿಕ ವರ್ಷವನ್ನು ಪ್ರಾರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಹೀಗಾಗಿ ಅಂದಿನಿಂದಲೇ ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೊರೊನಾದಿಂದಾಗಿ ಕಳೆದ ಎರಡೂವರೆ ವರ್ಷಗಳಿಂದ ಶಾಲೆಗಳು ಸರಿಯಾಗಿ ಭೌತಿಕ ತರಗತಿಗಳು ನಡೆದಿಲ್ಲ. ವಿದ್ಯಾರ್ಥಿಗಳು ಸಹ ಶೈಕ್ಷಣಿಕವಾಗಿ ಹಿಂದುಳಿದಿದ್ದಾರೆ. ಹೀಗಾಗಿ ಮೇ. 16 ರಿಂದಲೇ ಭೌತಿಕ ತರಗತಿಗಳನ್ನು ಆರಂಭಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಬಿಸಿಲು ಹೆಚ್ಚಾಗಿರುವ ಭಾಗಗಳಲ್ಲಿ ಶಾಲೆ ಆರಂಭಿಸುವಂತೆ ಪಾಲಕರು ಮನವಿ ಮಾಡಿಲ್ಲ.ಸದ್ಯಕ್ಕೆ ಶಾಲೆ ಆರಂಭದ ದಿನಾಂಕವನ್ನು ಮುಂದೂಡುವ ಬಗ್ಗೆ ಯೋಚನೆ ಮಾಡಿಲ್ಲ ಎಂದರು.