ಬೆಂಗಳೂರು: ಇತ್ತೀಚೆಗಷ್ಟೇ ರಾಜ್ಯಸಭಾ ಸದಸ್ಯರಾಗಿ ನೇಮಕವಾಗಿದ್ದ ಅಶೋಕ ಗಸ್ತಿ ಅವರು ಬೆಂಗಳೂರಿನ ಮಣಿಪಾಲ ಆಸ್ಪತ್ರೆಯಲ್ಲಿ ಇಂದು ನಿಧನರಾದರು.
ಕಳೆದ 15 ದಿನಗಳಿಂದ ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಅವರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಜುಲೈ 12ರಂದು ಅವರು ರಾಜ್ಯಸಭಾ ಸದಸ್ಯರಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಆದರೆ ಸಂಸತ್ತಿನಲ್ಲಿ ಒಂದು ಅಧಿವೇಶಕ್ಕೂ ಹಾಜರಾಗಲು ಅವರಿಗೆ ಸಾಧ್ಯವಾಗಲಿಲ್ಲ.
ಸವಿತಾ ಸಮಾಜದಿಂದ ರಾಜ್ಯಸಭೆಗೆ ಆಯ್ಕೆಯಾದ ಮೊದಲ ವ್ಯಕ್ತಿ ಅಶೋಕ ಗಸ್ತಿ. ನಿಷ್ಠಾವಂತ ಕಾರ್ಯಕರ್ತರನ್ನು ಕಳೆದುಕೊಂಡಿರುವ ಬಿಜೆಪಿ ಹಾಗೂ ಆರ್ ಎಸ್ ಎಸ್ ನಾಯಕರು ಆಘಾತಕ್ಕೆ ಒಳಗಾಗಿದ್ದಾರೆ.