News Karnataka Kannada
Monday, April 29 2024
ಬೆಂಗಳೂರು ನಗರ

‘ಮೊದಲ ಡೋಸ್ ಲಸಿಕೆ’ಯನ್ನು ಶೇ.100ರಷ್ಟು ಗುರಿ ಸಾಧಿಸಲಾಗಿದೆ – ಸಚಿವ ಡಾ.ಕೆ.ಸುಧಾಕರ್

Dr.sudhakar
Photo Credit :

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ ಲಸಿಕೆಯ ಮೊದಲ ಡೋಸ್ ನಲ್ಲಿ 100% ಹಾಗೂ ಎರಡನೇ ಡೋಸ್ ನಲ್ಲಿ 85.3% ಪ್ರಗತಿಯಾಗಿದೆ,15-17 ವರ್ಷದ ಮಕ್ಕಳಲ್ಲಿ ಶೇ.67.5% ಮೊದಲ ಡೋಸ್ ಆಗಿದೆ. 4,85,818 ಬೂಸ್ಟರ್ ಡೋಸ್ ನೀಡಲಾಗಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್  ತಿಳಿಸಿದರು.

ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು,  ಒಟ್ಟು 9,33,92,626 ಡೋಸ್ ಗಳನ್ನು ಈವರೆಗೆ ನೀಡಲಾಗಿದೆ. ಲಸಿಕಾಕರಣದಲ್ಲಿ ರಾಜ್ಯ ಮುಂಚೂಣಿಯಲ್ಲಿದ್ದು ಉತ್ತಮ ಪ್ರಗತಿ ಇದೆ ಎಂದು ತಿಳಿಸಿದರು.

ಕೆಲ ಜಿಲ್ಲೆಗಳಲ್ಲಿ ಕೋವಿಡ್ ಪ್ರಕರಣ ಏರುತ್ತಿದೆ. ಮತ್ತೆ ಎರಡು ಮೂರು ವಾರಗಳಲ್ಲಿ ಕಡಿಮೆಯಾಗಲಿದೆ. ಆಸ್ಪತ್ರೆ ದಾಖಲಾತಿಗೆ ಹೆಚ್ಚು ಗಮನ ನೀಡಲಾಗಿದೆ. ಹೆಚ್ಚು ಆಸ್ಪತ್ರೆ ದಾಖಲಾತಿ ಕಂಡುಬರುವಲ್ಲಿ ಕ್ರಮ ವಹಿಸಲಾಗುತ್ತದೆ. ಆದರೆ ಅಂತಹ ಪರಿಸ್ಥಿತಿ ಇನ್ನೂ ಬಂದಿಲ್ಲ. ಕಳೆದ ಮೂರು ದಿನದಲ್ಲಿ ರೋಗ ಲಕ್ಷಣ ಇಲ್ಲದವರಿಗೆ ಪರೀಕ್ಷೆ ಮಾಡುವ ಅವಶ್ಯಕತೆಯೂ ಇಲ್ಲ ಎಂದು ಐಸಿಎಂಆರ್ ಹೇಳಿದೆ. ಅದರನ್ವಯ ಕ್ರಮ ವಹಿಸಲಾಗುತ್ತಿದೆ ಎಂದರು.

ಜನವರಿಯಲ್ಲಿ 32 ಲಕ್ಷ ಜನರಿಗೆ ಕೊರೊನಾ ಪರೀಕ್ಷೆ ಮಾಡಲಾಗಿದೆ. ಯಾವ ರಾಜ್ಯವೂ ಇಷ್ಟು ಅಧಿಕ ಸಂಖ್ಯೆಯಲ್ಲಿ ಪರೀಕ್ಷೆ ಮಾಡಿಲ್ಲ. ಒಟ್ಟು 6 ಕೋಟಿ ಪರೀಕ್ಷೆಗಳನ್ನು ಮಾಡಿದ್ದು, ಇದು ಬೇರೆ ರಾಜ್ಯಗಳಿಗೆ ಮಾದರಿಯಾಗಿದೆ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು