ಬೆಂಗಳೂರು: ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಯುಕೆಯಿಂದ ಬಂದಂತ ಇಬ್ಬರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಿಂದ ದೃಢಪಟ್ಟಿದೆ.
ಇಂದು ಯುಕೆಯಿಂದ ಬೆಂಗಳೂರಿಗೆ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ಆಗಮಿಸಿದಂತ ಇಬ್ಬರಿಗೆ ಕೊರೋನಾ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ. ಹೀಗಾಗಿ ಅವರನ್ನು ಬೌರಿಂಗ್ ಆಸ್ಪತ್ರೆಯಲ್ಲಿ ಐಸೋಲೇಷನ್ ಮಾಡಿದ್ದು, ಅವರ ಗಂಟಲು ದ್ರವದ ಮಾದರಿಯನ್ನು ಒಮಿಕ್ರಾನ್ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ.
20 ವರ್ಷದ ಯುವಕ ಹಾಗೂ 9 ವರ್ಷದ ಬಾಲಕಿ ಇಬ್ಬರಿಗೂ ಕೋವಿಡ್ ಪಾಸಿಟಿವ್ ಎಂಬುದಾಗಿ ಆರ್ ಟಿ ಪಿಸಿಆರ್ ಪರೀಕ್ಷೆಯಲ್ಲಿ ಖಚಿತಗೊಂಡಿದೆ. ಈ ಹಿನ್ನಲೆಯಲ್ಲಿ ಅವರನ್ನು ಬೌರಿಂಗ್ ಆಸ್ಪತ್ರೆಯಲ್ಲಿ ಐಸೋಲೇಷನ್ ಮಾಡಲಾಗಿದೆ. ಅಲ್ಲದೇ ಅವರ ಗಂಟಲು ಮಾದರಿಯನ್ನು ಜಿನೋಮಿಕ್ ಸೀಕ್ವೆನ್ಸ್ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿದೆ.