ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಡೆಸಿದ ಯುಜಿಸಿ-ಎನ್ಇಟಿ ಕನ್ನಡ ಐಚ್ಛಿಕ ಭಾಷೆಯ ಪ್ರಶ್ನೆ ಪತ್ರಿಕೆಯ ಪ್ರಶ್ನೆಗಳು ಹಿಂದಿ ಭಾಷೆಯಲ್ಲಿದ್ದದ್ದಕ್ಕೆ ಮಾಜಿ ಸಿಎಂ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈಗಾಗಲೇ ಹೇಳಿದ್ದೇನೆ ಕನ್ನಡ ಕಟುಕರ ಕೈಯಲ್ಲಿ ಸಿಕ್ಕಿಕೊಂಡಿದೆ. ಈ ಮಾತನ್ನು ಪದೇ ಪದೆ ಹೇಳುತ್ತೇನೆ. ಈ ರೀತಿ ಮತ್ತೆ ಮತ್ತೆ ಹೇಳಲು ನನಗೂ ನೋವಾಗುತ್ತದೆ. ಕೇಂದ್ರ ಸರ್ಕಾರದ ಉದ್ಯೋಗ ಅವಕಾಶಗಳಲ್ಲಿ ಕನ್ನಡಿಗರನ್ನು ಹತ್ತಿಕ್ಕುವ ಮತ್ತು ಅವಕಾಶಗಳನ್ನು ನಿರಾಕರಿಸುವ ಕುತಂತ್ರ ನಡೆಯುತ್ತಲೇ ಇದೆ ಎಂದಿದ್ದಾರೆ.
ಇದು ಕನ್ನಡದ ಮೇಲಿನ ತಾತ್ಸಾರ ಹಾಗೂ ಹಿಂದಿ ಹೇರಿಕೆಯ ವಿಪರೀತ. ಅಲ್ಲದೆ ಪರೀಕ್ಷೆ ನಡೆಸಿದ ಸಂಸ್ಥೆ ಮಾಡಿದ ಕನ್ನಡ ದ್ರೋಹ. ಉದ್ದೇಶಪೂರ್ವಕವಾಗಿಯೇ ಈ ರೀತಿ ಮಾಡಲಾಗಿದೆ ಎಂದಿದ್ದಾರೆ.