ಯೂಕ್ರೇನ್ ನಲ್ಲಿ ಬಲಿಯಾದ ಕನ್ನಡಿಗ ನವೀನ್ ​ ಸಾವಿಗೆ ಸಂತಾಪ ಸೂಚಿಸಿದ ಥಾವರ್ ಚಂದ್

ಬೆಂಗಳೂರು : ಯೂಕ್ರೇನ್​ ಮತ್ತು ರಷ್ಯಾ ನಡುವಿನ ಯುದ್ಧದಲ್ಲಿ ಗುಂಡಿನ ದಾಳಿಗೆ ಬಲಿಯಾದ ಕನ್ನಡಿಗ ನವೀನ್ ಗ್ಯಾನಗೌಡರ​ ಸಾವಿಗೆ ರಾಜ್ಯಪಾಲ ಥಾವರ್ ಚಂದ್ ಗೆಹಲೋತ್ ಅವರು ಸಂತಾಪ ಸೂಚಿಸಿದ್ದಾರೆ.

ಯೂಕ್ರೇನ್​ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಕರ್ನಾಟಕದ ವಿದ್ಯಾರ್ಥಿ ನವೀನ್​ ನಿಧನದಿಂದ ದುಃಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆಂದು ಗೆಹಲೋತ್ ಅವರು ಟ್ವೀಟ್​ ಮೂಲಕ ಕನ್ನಡದಲ್ಲೇ ಸಂತಾಪ ಸೂಚಿಸಿದ್ದಾರೆ. ಅಲ್ಲದೆ, ನವೀನ್​ ಕುಟುಂಬಕ್ಕೆ ಕರೆ ಮಾಡಿ ಸಾಂತ್ವಾನ ಹೇಳಿರುವುದಾಗಿ ರಾಜಭವನ ಟ್ವೀಟ್​ ಮಾಡಿದೆ.

ಉಕ್ರೇನ್ ನಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದ ಕರ್ನಾಟಕದ ವಿದ್ಯಾರ್ಥಿ ನವೀನ್ ನಿಧನದಿಂದ ದುಃಖವಾಗಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ.  ರಾಣೆಬೆನ್ನೂರು ತಾಲೂಕಿನ ಚಳಗೇರಿ ಗ್ರಾಮದ ನವೀನ ಗ್ಯಾನಗೌಡರ, ಕಾರ್ಕಿವ್ ನಗರದಲ್ಲಿ ನವೀನ್​ ಎಂಬಿಬಿಎಸ್ ಓದುತ್ತಿದ್ದ. ಯೂಕ್ರೇನ್​ ಮೇಲೆ ರಷ್ಯಾ ಸೇನಾಪಡೆ ಯುದ್ಧ ಮುಂದುವರಿಸಿದ್ದು, ನಿನ್ನೆ ನಡೆದ ದಾಳಿಯಲ್ಲಿ ನವೀನ್​ ಮೃತಪಟ್ಟಿದ್ದಾರೆ.

ನಿನ್ನೆ ನಡೆದ ಘಟನೆಯನ್ನು ಮೃತ ನವೀನ್​ ಸ್ನೇಹಿತ ಆರ್​. ಗೌತಮ್​ ಎಳೆಎಳೆಯಾಗಿ ಬಿಚ್ಚಿಟ್ಟಿದ್ದಾರೆ. ಅಗತ್ಯ ವಸ್ತುಗಳನ್ನು ಖರೀದಿಸಲು ನವೀನ್​ ಜತೆ ನಾವೆಲ್ಲ ತೆರಳಿದ್ದೆವು. ಆ ಕ್ಷಣದಲ್ಲಿ ದಿಢೀರನೇ ಫೈರಿಂಗ್​ ಶುರುವಾಯಿತು. ನಮ್ಮನ್ನು ನಾವು ಕಾಪಾಡಿಕೊಳ್ಳಲು ಓಡೋಡಿ ಬರುತ್ತಿದ್ದೆವು. ಅಷ್ಟರಲ್ಲಿ ನವೀನ್​ ಮೇಲೆ ಗುಂಡಿನ ದಾಳಿ ಆಯಿತು. ಆತ ಸ್ಥಳದಲ್ಲೇ ಮೃತಪಟ್ಟ. ನಾವು ನವೀನ್​ ಸಮೀಪಕ್ಕೆ​ ತೆರಳಲು ಪ್ರಯತ್ನಿಸಿದೆವು. ಆದರೆ, ಗುಂಡಿನ ದಾಳಿ ಮುಂದುವರಿದರಿಂದ ನವೀನ್​ ಬಳಿ ತಲುಪಲ ನಮಗೆ ಸಾಧ್ಯವಾಗಲಿಲ್ಲ ಎಂದು ಗೌತಮ್​ ತಮ್ಮ ಅಸಹಾಯಕತೆ ಜತೆ ಮುಂದೇನಾಗುತ್ತೋ ಎಂಬ ಭಯವನ್ನು ವ್ಯಕ್ತಪಡಿಸಿದ್ದಾರೆ.

ಯೂಕ್ರೇನ್​ ಮೇಲೆ ರಷ್ಯಾ ಯುದ್ಧ ಘೋಷಣೆ ಮಾಡಿದಾಗಿನಿಂದ ಮಗ ಹುಟ್ಟೂರಿಗೆ ಸುರಕ್ಷಿತವಾಗಿ ಬಂದ್ರೆ ಸಾಕಪ್ಪ ಎಂದು ಪಾಕಲರು-ಕುಟುಂಬಸ್ಥರು ಕಣ್ಣೀರು ಹಾಕುತ್ತಾ ದೇವರ ಬಳಿ ಲೆಕ್ಕವಿಲ್ಲದಷ್ಟು ಬಾರಿ ಬೇಡಿಕೊಂಡಿದ್ದರು. ಆದರೂ ಮಗ ಬದುಕಲಿಲ್ಲ ಎಂಬ ಸುದ್ದಿ ಕೇಳಿ ನವೀನ್​ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.

Gayathri SG

Recent Posts

ಸಲ್ಮಾನ್‌ ಖಾನ್‌ ʼಸಿಕಂದರ್‌ʼಗೆ ರಶ್ಮಿಕಾ ಮಂದಣ್ಣ ನಾಯಕಿ

ಕನ್ನಡದ ರಶ್ಮಿಕಾ ಮಂದಣ್ಣ ಅವರಿಗೆ ದಕ್ಷಿಣದ ಸಿನಿಮಾಗಳ ಬಳಿಕ ಬಿಟೌನ್ ನಲ್ಲಿ ಅದೃಷ್ಟ ಖುಲಾಯಿಸಿದೆ. ರಣ್ಬೀರ್ ಕಪೂರ್ ಅವರ 'ಅನಿಮಲ್'…

10 mins ago

ಇಂದು ಏರ್ ಇಂಡಿಯಾ ಎಕ್ಸ್​ಪ್ರೆಸ್​ನ 85 ವಿಮಾನ ಹಾರಾಟ ರದ್ದು

ಇಂದು ಟಾಟಾ ಗ್ರೂಪ್ ಒಡೆತನದ ಏರ್ ಇಂಡಿಯಾ ಎಕ್ಸ್​ಪ್ರೆಸ್ ಸಂಸ್ಥೆಯ 85 ಫ್ಲೈಟ್​ಗಳು ರದ್ದಾಗಿವೆ.

16 mins ago

ಅಯೋಧ್ಯಾದಲ್ಲಿ ಬಾಲರಾಮನಿಗೆ ತಲೆಬಾಗಿ ನಮಿಸಿದ ರಾಜ್ಯಪಾಲ ಆರಿಫ್‌ ಮೊಹಮ್ಮದ್

ಕೇರಳ ರಾಜ್ಯಪಾಲ ಆರಿಫ್‌ ಮೊಹಮ್ಮದ್  ಖಾನ್‌ ಅವರು ಅಯೋಧ್ಯೆ ರಾಮ ಮಂದಿರಕ್ಕೆ ಭೇಟಿ ನೀಡಿ ದೇವರಿಗೆ ನಮಿಸಿದರು.ಕೇರಳ ರಾಜಭವನದ ಎಕ್ಸ್ ನಲ್ಲಿನ…

19 mins ago

ಚಿಕನ್ ಶವರ್ಮಾ ವಿಷ ಏಕಾಗ್ತಿದೆ ಗೊತ್ತ; ಇದನ್ನೊಮ್ಮೆ ಓದಿ

ಚಿಕನ್ ಶವರ್ಮಾ ತಿಂದ 19 ವರ್ಷದ ತರುಣನೋರ್ವ ಸಾವಿಗೀಡಾದ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದೆ. ಕೆಟ್ಟು ಹೋದ ಕೋಳಿ ಮಾಂಸವನ್ನು ಶವರ್ಮಾ…

34 mins ago

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪ್ರಾಚೀನ ಕೆರೆಗಳಿಗೆ ಹೊಸರೂಪ

ಕುಡಿಯುವ ನೀರಿನ ಸಮಸ್ಯೆಯನ್ನು ತಪ್ಪಿಸಲು ಪುತ್ತೂರು ಉಪವಿಭಾಗಕ್ಕೆ ಸಂಬಂಧಿಸಿದ ಪ್ರಾಚೀನ ಕೆರೆಗಳಿಗೆ ಹೊಸರೂಪ ನೀಡಲು ಇಲಾಖೆ ಮುಂದಾಗಿದ್ದು ಪುತ್ತೂರು ಸಹಾಯಕ…

40 mins ago

ಶವರ್ಮಾ ತಿಂದು ಪ್ರಾಣಬಿಟ್ಟ 19 ವರ್ಷದ ಯುವಕ

ಚಿಕನ್​​ ಶವರ್ಮಾ ತಿಂದು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇಂಥದ್ದೇ ಘಟನೆ ಮಹಾರಾಷ್ಟ್ರದಲ್ಲಿ ನಡೆದಿದ್ದು, 19 ವರ್ಷದ ಯುವಕನೊಬ್ಬ ಚಿಕನ್ ಶವರ್ಮಾ…

1 hour ago