ಬೆಂಗಳೂರು: ಸಂಗೀತ ಸಂಯೋಜಕ ಹಾಗೂ ರಂಗಭೂಮಿಯ ಹಿರಿಯ ಕಲಾವಿದ ಪರಮಶಿವನ್ ಅವರು ಹೃದಯಾಘಾತದಿಂದ ಗುರುವಾರ ನಿಧನರಾದರು.
ರಾಜ್ಯ ಸರ್ಕಾರದ ಗುಬ್ಬಿ ವೀರಣ್ಣ ಪ್ರಶಸ್ತಿ, ಕೇಂದ್ರ ಸಂಗೀತ ನಾಟಕ ಅಕಾಡೆಮಿ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿಗಳಿಗೆ ಪಾತ್ರರಾಗಿರುವ 94 ವರ್ಷ ವಯಸ್ಸಿನ ಪರಮಶಿವನ್ ಅವರು ರಾಜಾಜಿನಗರದಲ್ಲಿರುವ ತಮ್ಮ ಸ್ವಗೃಹದಲ್ಲಿಯೇ ಮೃತಪಟ್ಟಿದ್ದು, ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ. ಪಾರ್ಥಿವ ಶರೀರದ ಸಂಸ್ಕಾರವನ್ನು ಶನಿವಾರ ಬೆಳಿಗ್ಗೆ 10 ಗಂಟೆಗೆ ನೆರವೇರಿಸಲು ಕುಟುಂಬದ ಸದಸ್ಯರು ನಿರ್ಧರಿಸಿದ್ದಾರೆ ಎಂದು ವರದಿಗಳು ತಿಳಿಸಿವೆ.