ರವೀಂದ್ರ ಕಲಾಕ್ಷೇತ್ರದಲ್ಲಿ ನಟ ಶಿವರಾಂ ಅಂತಿಮ ದರ್ಶನಕ್ಕೆ ಅವಕಾಶ

ಬೆಂಗಳೂರು : ಚಂದನವನದ ಹಿರಿಯ ನಟರಾಗಿದ್ದ ಎಸ್. ಶಿವರಾಂ (83) ಶನಿವಾರ ಮಧ್ಯಾಹ್ನ ಬೆಂಗಳೂರಿನಲ್ಲಿ ನಿಧನರಾದರು.’ಭಾನುವಾರ ಬೆಳಗ್ಗೆ (ಡಿ. 5) ರವೀಂದ್ರ ಕಲಾಕ್ಷೇತ್ರದಲ್ಲಿ ಸಾರ್ವಜನಿಕ ಅಂತಿಮ ದರ್ಶನಕ್ಕೆ ಶಿವರಾಂ ಅವರ ಪಾರ್ಥಿವ ಶರೀರವನ್ನು ಎರಡು ತಾಸು ಇಡಲಾಗುವುದು. ನಂತರ ಬನಶಂಕರಿ ಚಿತಾಗಾರದಲ್ಲಿ ಅಂತ್ಯಕ್ರಿಯೆ ನಡೆಯಲಿದೆ’ ಎಂದು ಕಂದಾಯ ಸಚಿವ ಆರ್‌.ಅಶೋಕ್‌ ಮಾಹಿತಿ ನೀಡಿದ್ದಾರೆ.

ಕಳೆದ ನಾಲ್ಕು ದಿನಗಳ ಹಿಂದೆ ಮನೆಯಲ್ಲಿ ಅಯ್ಯಪ್ಪ ಸ್ವಾಮಿ ಪೂಜೆ ಮಾಡುತ್ತಿದ್ದಾಗ ಶಿವರಾಂ ಕುಸಿದುಬಿದ್ದಿದ್ದರು. ಮಿದುಳು ಸಂಕುಚಿತಗೊಂಡಿರುವುದರಿಂದ ಮತ್ತು ವಯಸ್ಸಿನ ಕಾರಣದಿಂದ ಶಸ್ತ್ರಚಿಕಿತ್ಸೆ ಅಸಾಧ್ಯ ಎಂದು ವೈದ್ಯರು ಹೇಳಿದ್ದರು.

1938 ಜನವರಿ 28 ರಂದು ಬೆಂಗಳೂರಿನ ಚೂಡಸಂದ್ರದಲ್ಲಿ ಜನಿಸಿದ್ದ ಶಿವರಾಂ, ಕನ್ನಡ ಚಿತ್ರರಂಗದಲ್ಲಿ ಪೋಷಕ, ಹಾಸ್ಯ ಪಾತ್ರದಲ್ಲಿ ಸುಮಾರು 6 ದಶಕಗಳ ಕಾಲ ಜನಮನ ರಂಜಿಸಿದ್ದರು. ಅವರು ಕಿರುತೆರೆಯ ಕಾರ್ಯಕ್ರಮಗಳಲ್ಲೂ ನಟಿಸಿದ್ದರು.

1965 ರಲ್ಲಿ ಬೆರೆತ ಜೀವ ಸಿನಿಮಾ ಮೂಲಕ ಶಿವರಾಂ ಚಿತ್ರರಂಗ ಪ್ರವೇಶಿಸಿದ್ದರು. ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕ ಸ್ಟಾರ್ ನಟರ ಜೊತೆ ಶಿವರಾಂ ಬಣ್ಣ ಹಚ್ಚಿದ್ದರು.

ಅಣ್ಣ ರಾಮನಾಥನ್‌ ಅವರ ಮೂಲಕ ಚಿತ್ರರಂಗದ ಪರಿಚಯ ಮಾಡಿಕೊಂಡ ಶಿವರಾಮ್‌, ನಿರ್ದೇಶಕನಾಗಿ ಅಭಿನಯಕ್ಕೆ ಇಳಿದವರು. ಸಹಾಯಕ ನಿರ್ದೇಶಕನಾಗಿದ್ದ ವೇಳೆ ಆಕಾಶವಾಣಿಯಲ್ಲೂ ಶಿವರಾಮ್‌ ಕಾರ್ಯನಿರ್ವಹಿಸಿದ್ದರು.

‘ತಂದೆಯವರು ಒಬ್ಬ ಸ್ವಯಂ ನಿರ್ಮಿತ ವ್ಯಕ್ತಿ. ನನ್ನ ಏಳಿಗೆಗೆ ನಾನೇ ಶಿಲ್ಪಿ ಎಂಬಂತೆ ಬಾಳಿದವರು. ಪರೋಪಕಾರಕ್ಕೇ ನಾವು ಜೀವ ತಾಳಿ ಬಂದಿದ್ದೇವೆ. ಹಾಗಾಗಿ ಒಂದು ಕ್ಷಣವನ್ನೂ ವ್ಯರ್ಥ ಮಾಡಬಾರದು ಎಂದು ಹೇಳುತ್ತಾ ಅದರಂತೆ ಬಾಳಿದವರು’ ಎಂದು ಲಕ್ಷ್ಮೀಶ ಹೇಳಿದರು.

ಇತ್ತೀಚೆಗೆ ಕೆ.ಆರ್. ರಸ್ತೆಯ ಬಳಿ ಕಾರು ಅಪಘಾತ ಸಂಭವಿಸಿತ್ತು. ಅದಾದ ನಂತರ ಆಘಾತಕ್ಕೊಳಗಾಗಿದ್ದ ಶಿವರಾಂ, ಬನಶಂಕರಿಯ ತಮ್ಮ ನಿವಾಸದ ಕೊಠಡಿ ಸೇರಿ ಏಕಾಂತದಲ್ಲಿದ್ದ ಅವರು, ಬಹಳ ಹೊತ್ತಾದರೂ ಹೊರಬಂದಿರಲಿಲ್ಲ. ಜತೆಗೆ ಕೊಠಡಿಯ ಒಳ ಭಾಗದಲ್ಲಿ ಬೀಗ ಹಾಕಿಕೊಂಡಿದ್ದರು. ಅವರು ಬೀಗ ತೆಗೆಯದೇ ಇದ್ದಾಗ, ನಕಲಿ ಕೀಲಿ ಬಳಸಿ ಕುಟುಂಬದ ಸದಸ್ಯರು ಬೀಗ ತೆರೆದು ನೋಡಿದಾಗ, ಶಿವರಾಂ ಕುಸಿದು ಬಿದ್ದ ಸ್ಥಿತಿಯಲ್ಲಿ ಇದ್ದರು.

Gayathri SG

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

1 hour ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

2 hours ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

2 hours ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

3 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

4 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

4 hours ago