ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಶಬ್ಧ; ಭೂ ಕಂಪನದ ಅನುಭವ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಭಾರಿ ಶಬ್ಧವೊಂದು ಕೇಳಿಬಂದಿದ್ದು, ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಆರ್.ಆರ್.ನಗರ, ಮಾಗಡಿ, ಹೆಮ್ಮಿಗೆಪುರ, ಕಗ್ಗಲಿಪುರ, ಕೆಂಗೇರಿ, ಬಿಡದಿ ಭಾಗಗಳಲ್ಲಿ ಹಲವೆಡೆ ಭೂಗರ್ಭದೊಳಗಿಂದ ಭಾರಿ ಶಬ್ಧ ಕೇಳಿಬಂದಿದ್ದು, ಕೆಲಕಾಲ ಭೂಮಿ ಕಂಪಿಸಿದೆ ಎಂದು ಹೇಳಲಾಗುತ್ತಿದೆ.

ಇದರಿಂದ ಜನರು ಆತಂಕಕ್ಕೀಡಾಗಿ ಮನೆಯಿಂದ ಹೊರಗೋಡಿ ಬಂದ ಘಟನೆ ನಡೆದಿದೆ.

ಮಧ್ಯಾಹ್ನ 12.15ರ ಸುಮಾರಿಗೆ ಭಾರಿ ಶಬ್ಧದೊಂದಿಗೆ ಭೂಮಿ ಕಂಪಿಸಿದೆ. ಬೆಂಗಳೂರಿನ ಹಲವೆಡೆ ಹಾಗೂ ರಾಮನಗರದಲ್ಲಿ ಭೂಕಂಪನದ ಅನುಭವವಾಗಿದೆ. ಆದರೆ ರಿಕ್ಟರ್ ಮಾಪಕದಲ್ಲಿ ಯಾವುದೇ ಭೂ ಕಂಪನದ ತೀವ್ರತೆ ದಾಖಲಾಗಿಲ್ಲ ಎಂದು ಭೂವಿಜ್ಞಾನಿ ಹೆಚ್ ಎನ್ ಎಸ್ ಪ್ರಸಾದ್ ತಿಳಿಸಿದ್ದಾರೆ.

Swathi MG

Recent Posts

ಬೀದರ್‌: ಬಿಸಿ ದೋಸೆಯಂತೆ ಮಾರಾಟವಾಗುತ್ತಿದೆ ಎಸಿ, ಕೂಲರ್‌

ಬಿಸಿಲು ಹಾಗೂ ಅದರ ಝಳದಿಂದ ಜನ ಒಂದೆಡೆ ತೀವ್ರ ಅನಾರೋಗ್ಯದ ಸಮಸ್ಯೆ ಎದುರಿಸುತ್ತಿದ್ದರೆ, ಏರ್‌ ಕಂಡಿಷನರ್‌ (ಎಸಿ), ಏರ್‌ ಕೂಲರ್‌ಗಳ…

1 min ago

ಪರಿಷತ್ ಚುನಾವಣೆಯಲ್ಲೂ ಜೆಡಿಎಸ್ ಜತೆ ಮೈತ್ರಿ ಮುಂದುವರಿಕೆ: ಬಿ.ಎಸ್.ಯಡಿಯೂರಪ್ಪ

ಮುಂಬರುವ ವಿಧಾನಪರಿಷತ್ ಚುನಾವಣೆಯಲ್ಲೂ ಜೆಡಿಎಸ್-ಬಿಜೆಪಿಮೈತ್ರಿ ಮುಂದುವರಿಯಲಿದ್ದು, ಮೈತ್ರಿಗೆ ಯಾವುದೇ ಭಂಗ ಆಗುವುದಿಲ್ಲ ಎಂದು ಬಿಜೆಪಿ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್.ಯಡಿಯೂರಪ್ಪ…

18 mins ago

ವೇಣುಗೋಪಾಲಸ್ವಾಮಿ ದೇಗುಲ ಬಳಿ ಅಡ್ಡಾಡುತ್ತಿರುವ ಒಂಟಿ ಗಜ

ಪ್ರತಿಷ್ಠಿತ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ವೇಣುಗೋಪಾಲಸ್ವಾಮಿ ಬೆಟ್ಟದ ದೇಗುಲ ಆವರಣದ ಬಳಿ ಎಂದಿನಂತೆ ಆಗಮಿಸಿದ ಒಂಟಿ ಆನೆ ವಾಪಾಸ್…

37 mins ago

ಕಾಡಾನೆಯಿಂದ ಬೆಳೆ ನಾಶ: ಮನನೊಂದು ರೈತ ಆತ್ಮಹತ್ಯೆ

ಸಾಲ ಮಾಡಿ ಬೆಳೆದ ಬೆಳೆಯನ್ನು ಕಾಡಾನೆ ಹಿಂಡುಗಳು ನಾಶ ಮಾಡಿದ್ದರಿಂದ ಮನನೊಂದು ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು ತಾಲೂಕಿನ ಅರೇಹಳ್ಳಿ ಹೋಳಿಯ ಚಿಕ್ಕಸಾಲಾವರದ ಬಾವಿಕಟ್ಟೆ ಗ್ರಾಮದಲ್ಲಿ ನಡೆದಿದೆ.

38 mins ago

ಬಂಡೀಪುರ ಪ್ರವೇಶದ್ವಾರದ ಬಳಿ ಕೆಟ್ಟು ನಿಂತ ಲಾರಿ: ಸಂಚಾರಕ್ಕೆ ಅಡ್ಡಿ

ಬಂಡೀಪುರ ಪ್ರವೇಶದ್ವಾರದ ಬಳಿ ಭಾರಿ ವಾಹನ ಕೆಟ್ಟು ನಿಂತ ಪರಿಣಾಮ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲಕಾಲ ಸಂಚಾರಕ್ಕೆ ಅಡ್ಡಿಯುಂಟಾಯಿತು. ಕಿಲೋಮೀಟರ್ ಗಟ್ಟಲೆ…

53 mins ago

ಗೋಪಾಲಸ್ವಾಮಿ ಬೆಟ್ಟಕ್ಕೆ ಬಸ್ ವ್ಯವಸ್ಥೆ ಇಲ್ಲದೆ ಬೆಟ್ಟದ ತಪ್ಪಲಿನಲ್ಲೇ ನಿಂತ ಭಕ್ತರು

ವಾರಾಂತ್ಯದ ರಜೆ ಹಿನ್ನೆಲೆ ಇತಿಹಾಸ ಪ್ರಸಿದ್ಧ ಶ್ರೀ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಸಹಸ್ರಾರು ಮಂದಿ ಪ್ರವಾಸಿಗರು ಹಾಗೂ ಭಕ್ತಗಣ ಆಗಮಿಸಿದ್ದರು…

56 mins ago