News Karnataka Kannada
Thursday, May 02 2024
ಬೆಂಗಳೂರು ನಗರ

ರಾಜ್ಯದಲ್ಲಿ ಇಂದಿನಿಂದ ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆ ಡೋಸ್‌ ಲಭ್ಯ

Booster Dose
Photo Credit :

ಬೆಂಗಳೂರು: ಎ. 10ರಿಂದ ರಾಜ್ಯದಲ್ಲಿ ಕೊರೊನಾ ವಿರುದ್ಧದ ಹೋರಾಟವನ್ನು ಮತ್ತಷ್ಟು ಬಲಪಡಿಸಿದ್ದು 18 ವರ್ಷ ಮೇಲ್ಪಟ್ಟವರು ಖಾಸಗಿ ಲಸಿಕಾ ಕೇಂದ್ರಗಳಲ್ಲಿ ಮುನ್ನೆಚ್ಚರಿಕೆ ಡೋಸ್‌ ಪಡೆಯಬಹುದು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ| ಕೆ.ಸುಧಾಕರ್‌ ತಿಳಿಸಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಸರಕಾರ, ರೋಗ ಪೂರ್ವ ನಿಯಂತ್ರಣ ಕ್ರಮಗಳಿಗೆ ಹೆಚ್ಚು ಒತ್ತು ನೀಡಿದೆ. ಇದೇ ರೀತಿ ಕೋವಿಡ್‌ ಲಸಿಕೀಕರಣಕ್ಕೂ ವೇಗ ನೀಡಿದೆ.

ದೇಶದಲ್ಲಿ ಈವರೆಗೆ 185 ಕೋಟಿ ಡೋಸ್‌ ಲಸಿಕೆ ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ನೇತೃತ್ವದ ಲಸಿಕೀಕರಣವನ್ನು ಚುರುಕುಗೊಳಿಸಿರುವುದರಿಂದ, ಈವರೆಗೆ 10.47 ಕೋಟಿ ಡೋಸ್‌ ಲಸಿಕೆ ನೀಡಲಾಗಿದೆ. ಇದರ ಜತೆಗೆ, ಆರೋಗ್ಯ ಕಾರ್ಯಕರ್ತರು, ಮುಂಚೂಣಿ ಕಾರ್ಯಕರ್ತರು, 60 ವರ್ಷ ಮೇಲ್ಪಟ್ಟ ನಾಗರಿಕರಿಗೆ ಮುನ್ನೆಚ್ಚರಿಕೆ ಡೋಸ್‌ ನೀಡಲಾಗುತ್ತಿದೆ ಎಂದು ಹೇಳಿದರು.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು