News Karnataka Kannada
Tuesday, April 30 2024
ಬೆಂಗಳೂರು ನಗರ

ರಾಜ್ಯದಲ್ಲಿ ಇಂದು ಒಟ್ಟು 314 ಕೊರೋನಾ ಪಾಸಿಟಿವ್ ಕೇಸ್ ಪತ್ತೆ

Corona World 10072021
Photo Credit :

ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಸೋಂಕಿನ ಏರಿಳಿಕೆ ಮುಂದುವರೆದಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಒಟ್ಟು 314 ಹೊಸ ಸೋಂಕು ಪ್ರಕರಣಗಳು ಹಾಗೂ 2 ಸಾವು ವರದಿಯಾಗಿದೆ.

ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ‘ರಾಜ್ಯದಲ್ಲಿ ಇಂದು ಒಟ್ಟು 314 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 2 ಮರಣ ಪ್ರಕರಣ ದಾಖಲಾಗಿದೆ.

2 ಮರಣ ಪ್ರಕರಣ ಕೂಡ ಬೆಂಗಳೂರಿನಲ್ಲಿ ದಾಖಲಾಗಿದ್ದು, ಉಳಿದ 29 ಜಿಲ್ಲೆಗಳಲ್ಲಿ ಶೂನ್ಯ ಮರಣ ಪ್ರಕರಣ ದಾಖಲಾಗಿದೆ. ಬಾಗಲಕೋಟೆ, ಬೀದರ್ ಸೇರಿ ಒಟ್ಟು 10 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ.

ರಾಜ್ಯದಲ್ಲಿ 339 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 7,305 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 29,99,785ಕ್ಕೆ ಏರಿಕೆಯಾಗಿದೆ. ಅಂತೆಯೇ ಗುಣಮುಖರ ಸಂಖ್ಯೆ 29,54,196ಕ್ಕೆ ಏರಿಕೆಯಾಗಿದೆ. ಕೋವಿಡ್-19 ಮರಣ ಪ್ರಮಾಣ ಶೇ.0.63 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.26 ರಷ್ಟಿದೆ.

ಇಂದು ಬೆಂಗಳೂರು ನಗರದಲ್ಲಿ 179 ಮಂದಿಗೆ ಕೊರೊನಾ ಬಂದಿದ್ದು, 204 ಮಂದಿ ಗುಣಮುಖರಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು