ರಾಜ್ಯದಲ್ಲಿ ಇಂದು 21,390 ಜನರಿಗೆ ಕೊರೋನಾ ಸೋಂಕು ದೃಢ

ಬೆಂಗಳೂರು : ರಾಜ್ಯದಲ್ಲಿ ಮತ್ತೆ ಇಂದು ಕೊರೋನಾ ಮಹಾಸ್ಪೋಟವೇ ಉಂಟಾಗಿದೆ. ಬೆಂಗಳೂರಿನಲ್ಲಿ 15,617 ಸೇರಿದಂತೆ ರಾಜ್ಯಾಧ್ಯಂತ 21,390 ಜನರಿಗೆ ಕೋವಿಡ್ ಪಾಸಿಟಿವ್  ಎಂಬುದಾಗಿ ದೃಢಪಟ್ಟಿದೆ.

ಈ ಕುರಿತಂತೆ ಟ್ವಿಟ್ಟರ್ ನಲ್ಲಿ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 1,95,047 ಜನರನ್ನು ಕೋವಿಡ್ ಪರೀಕ್ಷೆಗೆ  ಒಳಪಡಿಸಲಾಗಿದೆ. ಇವರಲ್ಲಿ ಬೆಂಗಳೂರಿನಲ್ಲಿ 15,617 ಸೇರಿದಂತೆ ರಾಜ್ಯದಲ್ಲಿ 21,390 ಜನರಿಗೆ ಕೋವಿಡ್ ದೃಢಪಟ್ಟಿರೋದಾಗಿ ತಿಳಿಸಿದೆ.

ಇಂದು ರಾಜ್ಯದಲ್ಲಿ 21,390 ಜನರಿಗೆ ಕೊರೋನಾ ದೃಢಪಟ್ಟ ಕಾರಣ ಪಾಸಿಟಿವಿಟಿ ದರ ಶೇ.10.96ಕ್ಕೆ ಏರಿಕೆಯಾಗಿದೆ. ಸಕ್ರೀಯ ಪ್ರಕರಣಗಳ ಸಂಖ್ಯೆ ಬೆಂಗಳೂರಿನಲ್ಲಿ 73 ಸಾವಿರ ಸೇರಿದಂತೆ 93,009ಕ್ಕೆ ಏರಿಕೆಯಾಗಿವೆ ಎಂದು ತಿಳಿಸಿದ್ದಾರೆ.

ಕಳೆದ 24 ಗಂಟೆಯಲ್ಲಿ ಸೋಂಕಿತರಾದಂತ 1,541 ಜನರು ಗುಣಮುಖರಾಗಿದ್ದಾರೆ. ಸೋಂಕಿನಿಂದಾಗಿ ಬೆಂಗಳೂರಿನಲ್ಲಿ 6 ಜನರು ಸೇರಿದಂತೆ 10 ಮಂದಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.

Gayathri SG

Recent Posts

ಮಹಿಳೆಯ ಕಿಡ್ನಿಯಲ್ಲಿತ್ತು 300 ಕಲ್ಲು: ಬೆಚ್ಚಿಬಿದ್ದ ವೈದ್ಯರು

ವೈದ್ಯರು ಮಹಿಳೆಯೊಬ್ಬರ ಮೂತ್ರಪಿಂಡದಿಂದ 300 ಕ್ಕೂ ಹೆಚ್ಚು ಕಲ್ಲುಗಳನ್ನು ತೆಗೆದುಹಾಕಿದ್ದಾರೆ. ದೇಹದಲ್ಲಿ ನೀರಿನಾಂಶ ಕಡಿಮೆಯಾಗದಿರಲು ನೀರಿನ ಬದಲು ಪ್ರತೀ ದಿನ…

2 mins ago

ಬಿಜೆಪಿ ಶಾಸಕ ಹರೀಶ್ ಪೂಂಜಾ ಮೇಲೆ ಎಫ್.ಐ.ಆರ್ ದಾಖಲು

ತನ್ನ ಬೆಂಬಲಿಗರ ಪರ ಪೊಲೀಸ್ ಠಾಣೆಯಲ್ಲಿ ಧರಣಿ ನಡೆಸಿದ್ದ ಬಿಜೆಪಿ ಶಾಸಕ ಹರೀಶ್‌ ಪೂಂಜಾ  ಮೇಲೆ ಎಫ್‌ಐಆರ್‌ ದಾಖಲಾಗಿದೆ.ಶಾಸಕರು ತನ್ನ…

27 mins ago

ಬೈಕಿಗೆ ಡಿಕ್ಕಿ ಹೊಡೆದ ಕಾರು: ಓರ್ವ ಸಾವು

ಕಾರು ​​ ಚಾಲಕನೋರ್ವ ಕುಡಿದು ಅಡ್ಡಾದಿಡ್ಡಿ ಡ್ರೈವಿಂಗ್​ ಮಾಡಿ ಬೈಕ್​ಗೆ ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಘಟನೆ ನಡೆದಿದೆ.

44 mins ago

ಬ್ಯಾಂಕ್ ಗೆ ಜಮೆ ಮಾಡಲು ತಂದಿದ್ದ 1.37 ಲಕ್ಷ ರೂ‌ ಎಗರಿಸಿದ ಖದೀಮ

ಬ್ಯಾಂಕ್‌ ಖಾತೆಗೆ ಜಮಾ ಮಾಡಲು ಎಂದು ತಂದಿದ್ದ ಹಣವು ಕಳ್ಳತನಕ್ಕೆ ಒಳಗಾದ ಘಟನೆ ಬಸವಕಲ್ಯಾಣದಲ್ಲಿ ನಡೆದಿದೆ. ಬೈಕ್ ನ ಪೆಟ್ರೋಲ್…

1 hour ago

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಅಪಘಾತ

ಇರಾನ್‌ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ಪೂರ್ವ ಅಜೆರ್ಬೈಜಾನ್ ಪ್ರಾಂತ್ಯದಲ್ಲಿ‌ಭಾನುವಾರ ಮುಂಜಾನೆ ಅಪಘಾತಕ್ಕೀಡಾಗಿದೆ.

1 hour ago

ಚಾಕುವಿನಿಂದ ಇರಿದು ಯುವಕನ ಬರ್ಬರ ಹತ್ಯೆ : ಪರಿಚಯಸ್ಥರಿಂದಲೇ ಕೊಲೆ ಶಂಕೆ

ತಡರಾತ್ರಿ ದುಷ್ಕರ್ಮಿಗಳು ಯುವಕನ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಹತ್ಯೆಗೈದಿರುವ ಘಟನೆ ನಗರದ…

2 hours ago