ರಾಜ್ಯದಲ್ಲಿ ಇಂದು 222 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 30,02,649ಕ್ಕೆ ಏರಿಕೆಯಾಗಿದೆ.
286 ಸೋಂಕಿತರು ಗುಣಮುಖರಾಗಿದ್ದು,ಒಟ್ಟು ಗುಣಮುಖರಾದವರ ಸಂಖ್ಯೆ 29,57,256ಕ್ಕೆ ಏರಿಕೆಯಾಗಿದೆ. ಸೋಂಕಿನಿಂದ ಇಂದು ಇಬ್ಬರು ಮೃತಪಟ್ಟಿದ್ದು, ಮೃತರ ಒಟ್ಟು ಸಂಖ್ಯೆ 38,290ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಸದ್ಯ 7,074 ಸಕ್ರಿಯ ಪ್ರಕರಣಗಳಿರುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಸೋಂಕಿನ ಪ್ರಮಾಣ ಶೇ. 0.25ರಷ್ಟಿದ್ದು, ಮರಣ ಪ್ರಮಾಣ ಶೇ. 0.90 ರಷ್ಟಿದೆ.