ರಾಜ್ಯದಲ್ಲಿ ಇಂದು 306 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ ಪತ್ತೆಯಾಗಿರುವ ಹೊಸ ಸೋಂಕು ಪ್ರಕರಣಗಳ ಮೂಲಕ ಮೂಲಕ ಒಟ್ಟಾರೆ ಸೋಂಕು ಪ್ರಕರಣಗಳ ಸಂಖ್ಯೆ 29,94,561ಕ್ಕೆ ಏರಿಕೆಯಾಗಿದೆ.
ಇಂದು ಕೊರೋನಾದಿಂದಾಗಿ 2 ಸೋಂಕಿತರು ಸಾವನ್ನಪ್ಪಿದ್ದು, ಕೋವಿಡ್ ಗೆ ಬಲಿಯಾದವರ ಸಂಖ್ಯೆ 38,187 ಕ್ಕೆ ಏರಿಕೆಯಾಗಿದೆ.
ಕಳೆದ 24 ಗಂಟೆಗಳ ಅವಧಿಯಲ್ಲಿ ರಾಜ್ಯಾದ್ಯಂತ 224 ಸೋಂಕಿತರು ಗುಣಮುಖರಾಗಿದ್ದು, ಗುಣಮುಖರ ಸಂಖ್ಯೆ 29,49,853ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಪ್ರಸ್ತುತ ಸಕ್ರಿಯ ಪ್ರಕರಣಗಳ ಸಂಖ್ಯೆ 6,492ಕ್ಕೆ ಕುಸಿದಿದೆ.