News Karnataka Kannada
Wednesday, May 01 2024
ಬೆಂಗಳೂರು ನಗರ

ರಾಜ್ಯದಲ್ಲಿ ಇಂದು 366 ಜನರಿಗೆ ಕೊರೋನಾ ಸೋಂಕು ದೃಢ

ಇಂದು ಒಂದೇ ದಿನ 4 ಹೊಸ ಕೋವಿಡ್ ಪ್ರಕರಣಗಳು ಚಿಕ್ಕಮಗಳೂರು ಜಿಲ್ಲೆಯಲ್ಲಿ ದಾಖಲಾಗಿವೆ.
Photo Credit : IANS

ಬೆಂಗಳೂರು : ರಾಜ್ಯದಲ್ಲಿ ಇಂದು ಕೊರೋನಾ ಮತ್ತಷ್ಟು ಇಳಿಕೆಯಾಗಿದ್ದು, 366 ಜನರಿಗೆ ಪಾಸಿಟಿವ್ ವರದಿ ಬಂದಿದೆ. 17 ಜನರು ಮೃತಪಟ್ಟಿದ್ದಾರೆ. 801 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಒಟ್ಟು ಸೋಂಕಿತರ ಸಂಖ್ಯೆ 39,40,795 ಕ್ಕೆ ಏರಿಕೆಯಾಗಿದೆ. ಇದುವರೆಗೆ 39936 ಜನ ಸೋಂಕಿತರು ಮೃತಪಟ್ಟಿದ್ದಾರೆ. 38,94,333 ಸೋಂಕಿತರ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ರಾಜ್ಯದಲ್ಲಿ 6488 ಸಕ್ರಿಯ ಪ್ರಕರಣಗಳಿವೆ. ಪಾಸಿಟಿವಿಟಿ ದರ ಶೇಕಡ 0.69 ರಷ್ಟು ಇದೆ.

ರಾಜಧಾನಿ ಬೆಂಗಳೂರಿನಲ್ಲಿ ಇಂದು ಹೊಸದಾಗಿ 224 ಜನರಿಗೆ ಸೋಂಕು ತಗುಲಿದ್ದು, 11 ಜನ ಮೃತಪಟ್ಟಿದ್ದಾರೆ. 326 ಜನ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 3648 ಸಕ್ರಿಯ ಪ್ರಕರಣಗಳಿವೆ.

ಬೆಳಗಾವಿ 17, ದಕ್ಷಿಣಕನ್ನಡ 10, ಮೈಸೂರು 17 ಹೊಸ ಪ್ರಕರಣ ವರದಿಯಾಗಿವೆ. ಬೆಂಗಳೂರು ಗ್ರಾಮಾಂತರ, ಗದಗ ಜಿಲ್ಲೆಯಲ್ಲಿ ಇಂದು ಯಾವುದೇ ಪ್ರಕರಣ ವರದಿಯಾಗಿಲ್ಲ. ಬೆಂಗಳೂರು ನಗರ 11, ಬೀದರ್, ಚಾಮರಾಜನಗರ, ದಕ್ಷಿಣ ಕನ್ನಡ, ಕೊಡಗು, ರಾಯಚೂರು, ಉಡುಪಿಯಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು