ರಾಜ್ಯದಲ್ಲಿ ಇಂದು 405 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ.ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 3003969ಕ್ಕೆ ಏರಿಕೆಯಾಗಿದೆ.
ಇಂದು 267 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಗುಣಮುಖರಾದವರ ಸಂಖ್ಯೆ 29,58,384ಕ್ಕೆ ಏರಿದೆ. ಕೊರೋನಾದಿಂದ ೪ ಜನರು ಸಾವನ್ನಪ್ಪಿದ್ದಾರೆ.
ರಾಜ್ಯದಲ್ಲಿ ಸದ್ಯ 7,251 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಸೋಂಕಿನ ಪ್ರಮಾಣ ಶೇ. 0.35 ರಷ್ಟಿದ್ದು, ಮರಣ ಪ್ರಮಾಣ ಶೇ. 0.98 ರಷ್ಟಿದೆ.