ರಾಜ್ಯದಲ್ಲಿ ಇಂದು 48,049 ಮಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಈ ಕುರಿತು ಟ್ವಿಟ್ಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರು, ಕಳೆದ 24 ಗಂಟೆಯಲ್ಲಿ 2,49,832 ಮಂದಿಯನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿದೆ.
ಬೆಂಗಳೂರಿನಲ್ಲಿ 29,068 ಸೇರಿದಂತೆ ರಾಜ್ಯಾಧ್ಯಂತ 48,049 ಮಂದಿಗೆ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿರೋದಾಗಿ ತಿಳಿಸಿದ್ದಾರೆ. ಇಂದು ರಾಜ್ಯದಲ್ಲಿ 22 ಜನರು ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
ಇಂದು ಪಾಸಿಟಿವಿಟಿ ದರ ಶೇ.19.23ಕ್ಕೆ ಏರಿಕೆಯಾಗಿದೆ. ಕಳೆದ 24 ಗಂಟೆಯಲ್ಲಿ ಸೋಂಕಿತರಾದಂತ 18,115 ಜನರು ಗುಣಮುಖರಾಗಿದ್ದಾರೆ. ರಾಜ್ಯದಲ್ಲಿ 3,23,143 ಸಕ್ರೀಯ ಸೋಂಕಿತರು ಇರುವುದಾಗಿ ತಿಳಿಸಿದ್ದಾರೆ.