ಬೆಂಗಳೂರು : ಕೊರೊನಾ ಪ್ರಕರಣಗಳು ಕಡಿಮೆಯಾದ ಹಿನ್ನೆಲೆಯಲ್ಲಿ ಸಚಿವಾಲಯ ಮತ್ತು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಬಯೋಮೆಟ್ರಿಕ್ ಹಾಜರಾತಿ ದಾಖಲಿಸುವಂತೆ ಸುತ್ತೋಲೆ ಕಳಿಸಲಾಗಿದೆ.
ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಚಿವಾಲಯ ಮತ್ತು ರಾಜ್ಯದ ಎಲ್ಲಾ ಸರ್ಕಾರಿ ಕಚೇರಿಗಳಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿ ಬಯೋಮೆಟ್ರಿಕ್ ಹಾಜರಾತಿ ದಾಖಲಿಸುವಂತೆ ಸುತ್ತೋಲೆ ಕಳಿಸಲಾಗಿದೆ. ರಾಜ್ಯದಲ್ಲಿ ಕೊರೊನಾ ಹೆಚ್ಚಾಗಿದ್ದ ಕಾರಣ ಬಯೋಮೆಟ್ರಿಕ್ ಹಾಜರಾತಿಗೆ ತಾತ್ಕಾಲಿಕವಾಗಿ ವಿನಾಯಿತಿ ನೀಡಲಾಗಿತ್ತು.